ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಮ್ಮು-ಕಾಶ್ಮೀರದ 2 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ 4ಜಿ ಇಂಟರ್ನೆಟ್ ಸೇವೆ

|
Google Oneindia Kannada News

ಶ್ರೀನಗರ, ಆಗಸ್ಟ್ 11: ಜಮ್ಮು-ಕಾಶ್ಮೀರದ ಎರಡು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ 4ಜಿ ಇಂಟರ್‌ನೆಟ್ ಸೇವೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.

ಜಮ್ಮು ಮತ್ತು ಕಾಶ್ಮೀರದ ಎರಡು ಜಿಲ್ಲೆಗಳಲ್ಲಿ ಆಗಸ್ಟ್ 15 ಬಳಿಕ ಪ್ರಾಯೋಗಿಕ ಆಧಾರದ ಮೇಲೆ 4ಜಿ ಇಂಟರ್ನೆಟ್ ಸೇವೆಗಳಿಗೆ ಅವಕಾಶ ನೀಡಲಾಗುವುದು ಎಂದು ಸುಪ್ರೀಂಕೋರ್ಟ್‌ಗೆ ಕೇಂದ್ರ ಸರ್ಕಾರದ ವಿಶೇಷ ಸಮಿತಿ ಮಂಗಳವಾರ ತಿಳಿಸಿದೆ.

ಇಂಟರ್‌ನೆಟ್ ಸ್ಥಗಿತಗೊಳಿಸುವುದರಲ್ಲಿ ಭಾರತವೇ ''ವಿಶ್ವಗುರು''ಇಂಟರ್‌ನೆಟ್ ಸ್ಥಗಿತಗೊಳಿಸುವುದರಲ್ಲಿ ಭಾರತವೇ ''ವಿಶ್ವಗುರು''

ಈ ಸಂಬಂಧ ಆಗಸ್ಟ್ 7 ರಂದು ನಿರ್ದಿಷ್ಟ ಪ್ರದೇಶಗಳಲ್ಲಿ 4ಜಿ ಸೇವೆಗಳನ್ನು ಮರುಸ್ಥಾಪಿಸುವ ಸಾಧ್ಯತೆಯನ್ನು ಅನ್ವೇಷಿಸುವಂತೆ ಜಮ್ಮು ಕಾಶ್ಮೀರದ ಆಡಳಿತಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿತ್ತು.

Centre Allows 4G On Trial Basis In 2 Districts In Jammu And Kashmir

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿಯನ್ನು ರದ್ದುಪಡಿಸಿ, ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶವಾಗಿ ಪರಿವರ್ತಿಸಿದ ಬಳಿಕ ಕಳೆದ 1 ವರ್ಷದಿಂದ ಜಮ್ಮು ಕಾಶ್ಮೀರದಲ್ಲಿ ಅತ್ಯಂತ ವೇಗದ ಇಂಟರ್ನೆಟ್ ಸೇವೆಗಳನ್ನು ರದ್ದುಪಡಿಸಲಾಗಿತ್ತು.

ಇದರಂತೆ ಸುಪ್ರೀಂಕೋರ್ಟ್‌ಗೆ ಮಾಹಿತಿ ನೀಡಿರುವ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಅವರು, ಜಮ್ಮು ಮತ್ತು ಕಾಶ್ಮೀರದ ಎರಡು ಜಿಲ್ಲೆಗಳಲ್ಲಿ ಆಗಸ್ಟ್ 15 ಬಳಿಕ ಪ್ರಾಯೋಗಿಕ ಆಧಾರದ ಮೇಲೆ 4ಜಿ ಇಂಟರ್ನೆಟ್ ಸೇವೆಗಳಿಗೆ ಅವಕಾಶ ನೀಡಲಾಗುವುದು.

ಆದರೆ, ಅಂತರ್ ರಾಷ್ಟ್ರೀಯ ಗಡಿ ಅಥವಾ ಗಡಿ ನಿಯಂತ್ರಣ ರೇಖೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ನಿರ್ಬಂಧ ಸಡಿಲಿಕೆ ಇರುವುದಿಲ್ಲ. ಉಗ್ರರ ಚಟುವಟಿಕೆಗಳು ಕಡಿಮೆ ಇರುವ ಪ್ರದೇಶಗಳಲ್ಲಿ 4ಜಿ ಇಂಟರ್ನೆಟ್ ಸೇವೆ ಲಭ್ಯವಿರಲಿದೆ. ಸರ್ಕಾರ 2 ತಿಂಗಳ ಬಳಿಕ ಪರಿಸ್ಥಿತಿ ಅವಲೋಕಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

English summary
4G internet services will be allowed on a trial basis in one district each in Jammu and one in the Kashmir valley after August 15, the centre told the Supreme Court today, adding that a special committee has made this decision.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X