ಕಾಂಗ್ರೆಸ್ ಎಲ್ಲಾ ಕಡೆಯಿದೆ, ಆದರೆ ದುರ್ಬಲಗೊಳ್ಳುತ್ತಿದೆ; ಫಾರೂಕ್
ಶ್ರೀನಗರ, ಮಾರ್ಚ್ 24: ಕಾಂಗ್ರೆಸ್ ಮುಖಂಡರು ಮನೆಯಲ್ಲೇ ಕೂರುವ ಬದಲು ದೇಶಕ್ಕಿರುವ ಸವಾಲುಗಳನ್ನು ಎದುರಿಸಲು ಮುಂದಾಗಬೇಕು ಹಾಗೂ ಜನರ ಸಮಸ್ಯೆಗಳ ಕುರಿತು ಯೋಚಿಸಬೇಕು ಎಂದು ಜಮ್ಮು ಹಾಗೂ ಕಾಶ್ಮೀರ ಮಾಜಿ ಸಿಎಂ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಫಾರೂಕ್ ಅಬ್ದುಲ್ಲಾ ಸಲಹೆ ನೀಡಿದ್ದಾರೆ.
ಮಂಗಳವಾರ ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಪ್ಯಾಂತರ್ಸ್ ಪಾರ್ಟಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ಕಾಂಗ್ರೆಸ್ ದುರ್ಬಲಗೊಳ್ಳುತ್ತಿದೆ" ಎಂದು ಹೇಳಿದ್ದಾರೆ. ನನ್ನ ಪಕ್ಷ (ನ್ಯಾಷನಲ್ ಕಾನ್ಫರೆನ್ಸ್) ಹಾಗೂ ಭೀಮ್ ಸಿಂಗ್ ಅವರ ಪಕ್ಷ (ಜೆಕೆಎನ್ಪಿಪಿ) ಎಲ್ಲಾ ಕಡೆ ಇಲ್ಲ. ಆದರೆ ಕಾಂಗ್ರೆಸ್ ಎಲ್ಲಾ ಕಡೆಯೂ ಇದೆ. ಹೀಗಾಗಿ ದೇಶಕ್ಕಿರುವ ಸವಾಲುಗಳೊಂದಿಗೆ ಕಾಂಗ್ರೆಸ್ ಸೆಣಸಾಡಬೇಕು. ಜನರ ಸಮಸ್ಯೆಗಳೆಡೆಗೆ ನೋಡಬೇಕು" ಎಂದು ಹೇಳಿದ್ದಾರೆ.
ಭೀಮ್ ಸಿಂಗ್, ಅವರ ಸೋದರಳಿಯ, ಜೆಕೆಎನ್ ಪಿಪಿ ಹರ್ಷ್ ದೇವ್ ಸಿಂಗ್ ಅವರನ್ನು ಶ್ಲಾಘಿಸಿ ಮಾತನಾಡುತ್ತಾ, ಈ ಸಿಂಹಗಳು ಸವಾಲಿಗೆ ಎದುರಾಗಿ ನಿಲ್ಲುವುದು ಖಚಿತ. ಆದರೆ ರಾಷ್ಟ್ರಮಟ್ಟದ ಕಾಂಗ್ರೆಸ್ ಪಕ್ಷ ದುರ್ಬಲಗೊಳ್ಳುತ್ತಿದೆ ಎಂದು ಪುನರುಚ್ಚರಿಸಿದ್ದಾರೆ.

ಜಮ್ಮು ಹಾಗೂ ಕಾಶ್ಮೀರದ ವಿಶೇಷ ಸ್ಥಾನಮಾನವನ್ನು 2019ರಲ್ಲಿ ರದ್ದುಪಡಿಸಿದ ಬಗ್ಗೆ ಉಲ್ಲೇಖಿಸಿದ ಅವರು, "ಇದು ನಮ್ಮ ಗೌರವದ ಮೇಲಿನ ಆಕ್ರಮಣ. ನಾವು ನಮ್ಮ ಭೂಮಿಯನ್ನು ಕಳೆದುಕೊಳ್ಳುತ್ತಿದ್ದೇವೆ. ಹೊರಗಿನಿಂದ ಇಲ್ಲಿಗೆ ಜನರು ಬರುತ್ತಿದ್ದು, ನಮ್ಮ ಮಕ್ಕಳಿಗೇ ಉದ್ಯೋಗವಿಲ್ಲದಂತಾಗುತ್ತಿದೆ" ಎಂದು ದೂರಿದರು.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications