• search
  • Live TV
ಶ್ರೀನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಈ ವರ್ಷದ ಅಮರಾಥ ಯಾತ್ರೆ ರದ್ದುಗೊಳಿಸಿ ಆದೇಶ

|

ಶ್ರೀನಗರ, ಜುಲೈ 21: ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಈ ವರ್ಷದ ಅಮರನಾಥ ಯಾತ್ರೆ ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ.

ಅಮರನಾಥ ಯಾತ್ರೆ ನಡೆಸಿದರೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ ಅವರಿಂದ ಸೋಂಕು ಹೆಚ್ಚಳವಾಗಲಿದೆ ಎಂದು ಭಾವಿಸಲಾಗಿದೆ.

ರಾಮ ಮಂದಿರ ನಿರ್ಮಿಸಿದರೆ ಕೊವಿಡ್-19 ಹೋಗಲಾಡಿಸಲು ಸಾಧ್ಯವೆ?

ಈ ಹಿನ್ನೆಲೆಯಲ್ಲಿ 2020 ರ ಅಮರನಾಥ ಯಾತ್ರೆಯನ್ನು ರದ್ದುಗೊಳಿಸಿ ಮಂಡಳಿ ಆದೇಶ ಹೊರಡಿಸಿದೆ. ಯಾತ್ರೆ ರದ್ದತಿಯನ್ನು ಘೋಷಿಸಲು ಮಂಡಳಿ ವಿಷಾದ ವ್ಯಕ್ತಪಡಿಸಿದೆ ಎಂದು ಜಮ್ಮು ಮತ್ತು ಕಾಶ್ಮೀರ ಸರ್ಕಾರದ ರಾಜಭವನ ಹೇಳಿದೆ.

ಜುಲೈ 21 ರಂದು ಅಮರನಾಥ ಯಾತ್ರೆ ಆರಂಭವಾಗಲಿದೆ ಎಂದು ಕಳೆದ ತಿಂಗಳು ಹೇಳಲಾಗಿತ್ತು. ಅಲ್ಲದೆ ಈ ಬಾರಿ ಕೇವಲ ಹದಿನೈದು ದಿನ ಮಾತ್ರ ಯಾತ್ರೆ ನಡೆಯಲಿದೆ ಎನ್ನಲಾಗಿತ್ತು, ಆದರೆ ಇದೀಗ ಯಾತ್ರೆ ರದ್ದಾಗಿದ್ದು ಭಕ್ತರು ಮನದಲ್ಲೇ ಅಮರನಾಥನನ್ನು ಸ್ಮರಿಸಬೇಕಾಗಿದೆ.

ಧಾರ್ಮಿಕ ಭಾವನೆಗಳ ಘಾಸಿಯಾಗದಂತೆ ಮಂಡಳಿ ಬೆಳಿಗ್ಗೆ ಮತ್ತು ಸಂಜೆ ಆರತಿಯ ನೇರ ಪ್ರಸಾರ / ವರ್ಚುವಲ್ ದರ್ಶನವನ್ನು ಮುಂದುವರಿಸಲಿದೆ ಎಂದು ಅದು ಹೇಳಿದೆ.

ಈ ಹಿಂದೆ ನಡೆಸಿದ್ದಂತೆಯೇ ಸಾಂಪ್ರದಾಯಿಕ ಆಚರಣೆಗಳನ್ನು ಕೈಗೊಳ್ಳಲಾಗುತ್ತದೆ. ಖಾದಿ ಮುಬಾರಕ್ ಅವರಿಗೆ ಸರ್ಕಾರದಿಂದ ಅನುಕೂಲವಾಗಲಿದೆ ಎಂದು ರಾಜಭವನ ಹೇಳಿದೆ.

English summary
The iconic Amarnath Yatra, the annual Hindu pilgrimage to a Jammu and Kashmir shrine, will not take place this year because of the coronavirus pandemic, the board that manages the place of worship informed today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X