• search
  • Live TV
ಶ್ರೀನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶ್ರೀನಗರದಲ್ಲಿ ಎನ್‌ಕೌಂಟರ್: ಓರ್ವ CRPF ಯೋಧ ಹುತಾತ್ಮ

|
Google Oneindia Kannada News

ಶ್ರೀನಗರ, ಜುಲೈ 3: ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಸಿಆರ್‌ಪಿಎಫ್ ಯೋಧ ಹುತಾತ್ಮರಾಗಿದ್ದು, ಓರ್ವ ಉಗ್ರರನ್ನು ಹತ್ಯೆಗೈಯಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಹುತಾತ್ಮರಾದ ಯೋಧರನ್ನು ಕುಲ್ದೀಪ್ ಉರಾನ್ ಎಂದು ಗುರುತಿಸಲಾಗಿದೆ.. ಪ್ರಸ್ತುತ ಸ್ಥಳದಲ್ಲಿ ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಮಾಹಿತಿಗಳು ಬಂದಿರುವ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಸೇನಾಪಡೆಗಳು ಕಾರ್ಯಾಚರಣೆ ಮುಂದುವರೆಸಿವೆ ಎನ್ನುವ ಮಾಹಿತಿ ದೊರೆತಿದೆ.

ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಮೂವರು ಉಗ್ರರ ಹತ್ಯೆಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಮೂವರು ಉಗ್ರರ ಹತ್ಯೆ

ಶ್ರೀನಗರದ ಮಲ್ಭಾಗ್ ನಲ್ಲಿ ಕಳೆದ ರಾತ್ರಿ ಈ ಎನ್‌ಕೌಂಟರ್ ನಡೆದಿದೆ ಎಂದು ವರದಿಗಳು ತಿಳಿಸಿವೆ. ಮಲ್ಭಾಗ್ ನಲ್ಲಿ ಉಗ್ರರು ಅಡಗಿ ಕುಳಿತಿದ್ದಾರೆಂಬ ಮಾಹಿತಿ ತಿಳಿದುಬರುತ್ತಿದ್ದಂತೆಯೇ ಸೇನಾ ಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು.

ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಮೂವರು ಯೋಧರು ಗಾಯಗೊಂಡಿದ್ದು, ಕೂಡಲೇ ಅವರನ್ನು 92 ಬೇಸ್ ಆರ್ಮಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ಇದರಲ್ಲಿ ಇಬ್ಬರು ಯೋಧರು ಚೇತರಿಸಿಕೊಳ್ಳುತ್ತಿದ್ದು, ಓರ್ವ ಯೋಧ ಹುತಾತ್ಮರಾಗಿದ್ದಾರೆಂದು ತಿಳಿದುಬಂದಿದೆ.

English summary
CRPF head constable and a militant were killed in an encounter that broke out late on Thursday night on the outskirts of Jammu and Kashmir's Srinagar city, officials said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X