ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಮ್ಮು ಕಾಶ್ಮೀರದಲ್ಲಿ ಭೂಕಂಪ: 4.5 ತೀವ್ರತೆ ದಾಖಲು

|
Google Oneindia Kannada News

ಶ್ರೀನಗರ, ಸೆಪ್ಟೆಂಬರ್ 2: ಜಮ್ಮು ಕಾಶ್ಮೀರದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ ದಾಖಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದೆ.

ಇಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಮಧ್ಯಮ ತೀವ್ರತೆಯ ಭೂಕಂಪ ಸಂಭವಿಸಿದೆ, ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲೇಹ್-ಲಡಾಖ್‌ನಲ್ಲಿ ನಡುಗಿದ ಭೂಮಿ: 5.4 ತೀವ್ರತೆಯ ಭೂಕಂಪಲೇಹ್-ಲಡಾಖ್‌ನಲ್ಲಿ ನಡುಗಿದ ಭೂಮಿ: 5.4 ತೀವ್ರತೆಯ ಭೂಕಂಪ

ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಲಡಾಖ್ ಕೇಂದ್ರಾಡಳಿತ ಪ್ರದೇಶದಲ್ಲಿ ಮಧ್ಯಾಹ್ನ ಭೂಕಂಪನ ಉಂಟಾಗಿದೆ.ಭೂಮಿ ಕಂಪಿಸಿದ್ದರಿಂದ ಅನೇಕ ಮನೆಗಳು, ಕಟ್ಟಡಗಳಲ್ಲಿ ಬಿರುಕುಗಳು ಉಂಟಾಗಿವೆ ಎಂದು ಲೇಹ್ ನ ಸ್ಥಳೀಯರು ತಿಳಿಸಿದ್ದಾರೆ.

Earthquake Of 4.5 Magnitude Hits Jammu And Kashmir

ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶುಕ್ರವಾರ ಮಧ್ಯಾಹ್ನವೂ ಕೂಡ ಭೂಮಿ ನಡುಗಿದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆ ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಲಡಾಖ್ ಕೇಂದ್ರಾಡಳಿತ ಪ್ರದೇಶದಲ್ಲಿ ಮಧ್ಯಾಹ್ನ 4.27ರ ಸುಮಾರಿಗೆ ಭೂಕಂಪನ ಉಂಟಾಗಿದೆ.

ಲೇಹ್‌ನಿಂದ 129 ಕಿ.ಮೀ. ದೂರದಲ್ಲಿರುವ ಈಶಾನ್ಯಭಾಗದ ಸ್ಥಳದಲ್ಲಿ ಭೂಕಂಪನದ ಕೇಂದ್ರಬಿಂದು ಇದ್ದು, ಹತ್ತು ಕಿ.ಮೀ. ಆಳದಿಂದ ಭೂಮಿ ನಡುಗಿದೆ ಎಂದು ಅದು ತಿಳಿಸಿದೆ.

English summary
A medium-intensity earthquake hit Jammu and Kashmir on Saturday, but there were no reports of any damage or loss of life, officials said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X