ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶ್ರೀನಗರದಲ್ಲಿ ಭದ್ರತಾ ಪಡೆ, ಉಗ್ರರ ನಡುವೆ ಗುಂಡಿನ ಚಕಮಕಿ: ಇಂಟರ್‌ನೆಟ್ ಸೇವೆ ಸ್ಥಗಿತ

|
Google Oneindia Kannada News

ಶ್ರೀನಗರ, ಮೇ 19: ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ನಡೆಎದ ಎನ್‌ಕೌಂಟರ್‌ನಿಂದಾಗಿ ಮೊಬೈಲ್, ಇಂಟರ್‌ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.

ಶ್ರೀನಗರದ ನವಕದಲ್ ಪ್ರದೇಶದಲ್ಲಿ ಎನ್‌ಕೌಂಟರ್‌ ನಡೆದಿದೆ.ಜಮ್ಮು-ಕಾಶ್ಮೀರ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ ಅಲ್ಲಿ ಕಾರ್ಯನಿರತವಾಗಿದೆ. ಹೆಚ್ಚಿನ ಮಾಹಿತಿ ಸಿಗಬೇಕಿದೆ ಎಂದು ಜಮ್ಮು-ಕಾಶ್ಮೀರ ಪೊಲೀಸ್ ಪೇಜ್ ನಲ್ಲಿ ಟ್ವೀಟ್ ಮಾಡಲಾಗಿದೆ.

ಪುಲ್ವಾಮಾ ಎನ್‌ಕೌಂಟರ್ : ಹಿಜ್ಬುಲ್ ಉಗ್ರ ಸಂಘಟನೆ ಕಮಾಂಡರ್ ಹತ್ಯೆಪುಲ್ವಾಮಾ ಎನ್‌ಕೌಂಟರ್ : ಹಿಜ್ಬುಲ್ ಉಗ್ರ ಸಂಘಟನೆ ಕಮಾಂಡರ್ ಹತ್ಯೆ

ಕಳೆದ ಏಪ್ರಿಲ್ 28ರಂದು ಶೋಪಿಯಾನ್ ಜಿಲ್ಲೆಯ ಝೈನಪೊರಾ ಪ್ರದೇಶದಲ್ಲಿ ಎನ್ ಕೌಂಟರ್ ನಡೆದು ಮೂವರು ಉಗ್ರರು ಹತರಾಗಿದ್ದರು.

 Encounter Breaks Out Between Security Forces Terrorists In Srinagar

ಮೇ 6 ರಂದು ಕಾಶ್ಮೀರದ ಪುಲ್ವಾಮಾದಲ್ಲಿ ಬುಧವಾರ ನಡೆದ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಹಿಜಬುಲ್ ಉಗ್ರ ಸಂಘಟನೆಯ ಕಮಾಂಡರ್ ರಿಯಾಜ್ ನೈಕೂ ಹತ್ಯೆ ಮಾಡಲಾಗಿತ್ತು.

ಒಟ್ಟು ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಮತ್ತೊಂದು ಘಟನೆಯಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಜಮ್ಮು-ಕಾಶ್ಮೀರ ಪೊಲೀಸ್, ಸೇನೆ ಮತ್ತು ಸಿಆರ್‍ ಪಿಎಫ್‍ ಮತ್ತು ವಿಶೇಷ ಕಾರ್ಯಾಚರಣೆ ತಂಡ (ಎಸ್ಒಜಿ) ಜಂಟಿಯಾಗಿ ಪುಲ್ವಾಮಾದ ಅವಂತಿಪೋರಾದ ಶರ್ಸಾಲಿ ಗ್ರಾಮದಲ್ಲಿ ನಿನ್ನೆ ರಾತ್ರಿ ಕಾರ್ಯಾಚರಣೆ ಆರಂಭಿಸಿದ್ದವು ಸೇನಾಧಿಕಾರಿ ತಿಳಿಸಿದ್ದರು.

ಭದ್ರತಾ ಪಡೆಗಳು ಒಂದು ನಿರ್ದಿಷ್ಟ ಪ್ರದೇಶವನ್ನು ಸುತ್ತುವರಿದಾಗ ಅಡಗಿ ಕುಳಿತಿದ್ದ ಉಗ್ರರು ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿದ್ದು, ಈ ವೇಳೆ ನಡೆದ ಪರಸ್ಪರ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದರು.

English summary
An encounter broke out between security forces and terrorists at Kanemazar area of Nawakadal in Srinagar, Jammu and Kashmir (J&K) on Tuesday morning.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X