ಕಾಶ್ಮೀರದಲ್ಲಿ ಎನ್‌ಕೌಂಟರ್ : ನಾಲ್ವರು ಯೋಧರು ಹುತಾತ್ಮ
ಶ್ರೀಗರ, ಮಾರ್ಚ್ 03 : ಜಮ್ಮು ಮತ್ತು ಕಾಶ್ಮೀರದ ಹಂದ್ವಾರಾ ಪ್ರದೇಶದಲ್ಲಿ ನಡೆದ ಎನ್ ಕೌಂಟರ್‌ನಲ್ಲಿ ನಾಲ್ಕು ಯೋಧರು ಹುತಾತ್ಮರಾಗಿದ್ದಾರೆ. ಕಳೆದ ಮೂರು ದಿನಗಳಿಂದ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿತ್ತು.
ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಹಂದ್ವಾರಾ ಬಳಿಯ ಬಾಬಾಗುಂದ್ ಪ್ರದೇಶದ ಮನೆಯೊಂದರಲ್ಲಿ ಉಗ್ರರು ಅಡಗಿದ್ದರು. ಮೂರು ದಿನಗಳಿಂದ ಉಗ್ರರನ್ನು ಹತ್ಯೆ ಮಾಡಲು ಯೋಧರು ಕಾರ್ಯಾಚರಣೆ ನಡೆಸುತ್ತಿದ್ದರು.
ಶುಕ್ರವಾರ ಬೆಳಗ್ಗೆ ಯೋಧರು ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ತಿಳಿದು ಹುಡುಕಾಟ ಆರಂಭಿಸಿದ್ದರು. ಈ ಸಂದರ್ಭದಲ್ಲಿ ಯೋಧರತ್ತ ಉಗ್ರರು ಗುಂಡಿನ ದಾಳಿ ಆರಂಭಿಸಿದ್ದರು. ಅಂದಿನಿಂದಲೂ ನಿರಂತರವಾಗಿ ಕಾರ್ಯಾಚರಣೆ ನಡೆಯುತ್ತಿತ್ತು.

ಉಗ್ರರ ಜೊತೆಗಿನ ಗುಂಡಿನ ಚಕಮಕಿಯಲ್ಲಿ 9 ಜನರು ಗಾಯಗೊಂಡಿದ್ದು, ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ವಾಸಿಮ್ ಅಹಮದ್ ಎಂಬ ಯುವಕ ಗುಂಡಿನ ಚಕಮಕಿ ವೇಳೆ ಗಾಯಗೊಂಡಿದ್ದ. ಆಸ್ಪತ್ರೆಗೆ ಸೇರಿಸಿದ ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಪಾಕಿಸ್ತಾನ ಕಳೆದ 60 ಗಂಟೆಗಳಲ್ಲಿ ಕಾಶ್ಮೀರದ ಪೂಂಚ್, ರಜೌರಿ, ಕುಪ್ವಾರ ಜಿಲ್ಲೆಗಳಲ್ಲಿ ನಿರಂತರವಾಗಿ ಶೆಲ್ ದಾಳಿ ನಡೆಸುತ್ತಿದ್ದಾರೆ. ಗಡಿ ಭಾಗದಲ್ಲಿರುವ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.












Click it and Unblock the Notifications