• search
  • Live TV
ಶ್ರೀನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪುಲ್ವಾಮಾ: ಮಧ್ಯರಾತ್ರಿ ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರ ಹತ್ಯೆ, ಒಬ್ಬ ಯೋಧ ಹುತಾತ್ಮ

|

ಶ್ರೀನಗರ, ಆಗಸ್ಟ್ 29: ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಜಡೂರಾ ಎಂಬ ಗ್ರಾಮದಲ್ಲಿ ಶನಿವಾರ ನಸುಕಿನಲ್ಲಿ ಜಂಟಿ ಭದ್ರತಾ ಪಡೆಗಳು ಮತ್ತು ಉಗ್ರರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಈ ಉಗ್ರರ ಗುರುತು ಪತ್ತೆಯಾಗಿಲ್ಲ.

ಗುಂಡನ ಚಕಮಕಿಯ ಸಂದರ್ಭದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಭಾರತೀಯ ಯೋಧರೊಬ್ಬರು ಹುತಾತ್ಮರಾಗಿದ್ದಾರೆ ಎಂದು ರಕ್ಷಣಾ ಇಲಾಖೆಯ ಮೂಲಗಳು ತಿಳಿಸಿವೆ. ಘಟನಾ ಸ್ಥಳದಲ್ಲಿ ಉಗ್ರರಿಂದ ಒಂದು ಎಕೆ ರೈಫಲ್ ಮತ್ತು ಎರಡು ಪಿಸ್ತೂಲುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಂಟಿ ಕಾರ್ಯಾಚರಣೆಯನ್ನು ಮುಂದುವರಿಸಲಾಗಿದೆ ಎಂದು ಸೇನ ವಕ್ತಾರ ಕರ್ನಲ್ ರಾಜೇಶ್ ಕಾಲಿಯಾ ತಿಳಿಸಿದ್ದಾರೆ.

ಪೊಲೀಸ್ ಸಿಬ್ಬಂದಿ ಮತ್ತು ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆ ನಡೆಸಿದ ಸಂದರ್ಭದಲ್ಲಿ ರಾತ್ರಿ 1 ಗಂಟೆ ಸುಮಾರಿಗೆ ಈ ಎನ್‌ ಕೌಂಟರ್ ನಡೆದಿದೆ. ಈ ಉಗ್ರರು ಲಷ್ಕರ್ ಎ ತಯಬಾಕ್ಕೆ ಸೇರಿದವರು ಎಂದು ಹೇಳಲಾಗಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಕಳೆದ 24 ಗಂಟೆಗಳಲ್ಲಿ ನಡೆದ ಎರಡನೆಯ ಕಾದಾಟ ಇದಾಗಿದೆ. ಶುಕ್ರವಾರ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿತ್ತು. 24 ಗಂಟೆಯೊಳಗೆ ಕಣಿವೆಯಲ್ಲಿ ಆರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಒಬ್ಬನನ್ನು ಜೀವಂತ ಬಂಧಿಸಲಾಗಿದೆ.

English summary
In an encounter in the wee hours of Saturday, joint security forces have killed 3 militants at Zadoora village of Pulwama. 1 soldier martyred.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X