ಕುಪ್ವಾರದಲ್ಲಿ ಎನ್‌ಕೌಂಟರ್; ಮೂವರು ಲಷ್ಕರ್‌ ಉಗ್ರರ ಹತ್ಯೆ

ಶ್ರೀನಗರ, ಮೇ 26: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಜುಮಗುಂಡ್ ಗ್ರಾಮದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಗುರುವಾರ ಬೆಳಗ್ಗೆ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಲಷ್ಕರ್-ಎ-ತೋಯ್ಬಾ ಉಗ್ರರನ್ನು ಹತ್ಯೆ ಮಾಡಲಾಗಿದೆ.

ಘಟನಾ ಸ್ಥಳದಿಂದ ಪೊಲೀಸರು ಶಸ್ತ್ರಾಸ್ತ್ರಗಳು ಹಾಗೂ ಸ್ಟೋಟಕ ಸಾಮಾಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಮಾಹಿತಿ ನೀಡಿದರು.

"ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೋಯ್ಬಾಗೆ ಸೇರಿದ ಮೂವರು ಉಗ್ರರನ್ನು ಎನ್‌ಕೌಂಟರ್ ಮಾಡಲಾಗಿದೆ. ಅವರ ವೈಯಕ್ತಿಕ ಗುರುತು ಇನ್ನೂ ಪತ್ತೆಯಾಗಿಲ್ಲ. ಉಗ್ರರಿಂದ ಶಸ್ತ್ರಾಸ್ತ್ರಗಳು, ಮದ್ದು-ಗುಂಡುಗಳು ಸೇರಿದಂತೆ ಸ್ಫೋಟಕ ಸಾಮಾಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ" ಎಂದು ಟ್ವೀಟ್ ಮಾಡಿದ್ದಾರೆ.

Encounter in Kashmir 3 Lashkar E Taiba Terrorists Killed

ಜುಮಗುಂಡ್ ಗ್ರಾಮದಲ್ಲಿ ಉಗ್ರರ ಒಳನುಸಳುವಿಕೆ ಪ್ರಯತ್ನಗಳ ಬಗ್ಗೆ ಕುಪ್ವಾರ್ ಪೊಲೀಸರಿಗೆ ಲಭ್ಯವಾದ ಖಚಿತ ಮಾಹಿತಿ ಮೇರೆಗೆ ಗುರುವಾರ ಮುಂಜಾನೆ ಕಾರ್ಯಾಚರಣೆ ಪ್ರಾರಂಭವಾಯಿತು.

ಬುಧವಾರ ಬಾರಾಮುಲ್ಲದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಷ್‌-ಎ-ಮೊಹಮ್ಮದ್‌ಗೆ ಸೇರಿದ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿತ್ತು.

Encounter in Kashmir 3 Lashkar E Taiba Terrorists Killed

"ಜೈಷ್‌-ಎ-ಮೊಹಮ್ಮಸ್‌ಗೆ ಸೇರಿದ ಪಾಕಿಸ್ತಾನದ ಮೂವರು ಉಗ್ರರು ಬಾರಾಮುಲ್ಲ ಪ್ರದೇಶದಲ್ಲಿ ಕಳೆದ 3-4 ತಿಂಗಳಿನಿಂದ ಸಕ್ರಿಯವಾಗಿ ಇರುವ ಬಗ್ಗೆ ನಮಗೆ ಮಾಹಿತಿ ಲಭ್ಯವಿತ್ತು. ಅವರ ಮೇಲೆ ನಿಗಾ ಇಡಲಾಗಿತ್ತು. ಬುಧವಾರ ಕಾರ್ಯಾಚರಣೆ ನಡೆಸಿ ಮೂವರು ಉಗ್ರರನ್ನು ಎನ್‌ಕೌಂಟರ್ ಮಾಡಲಾಗಿದೆ. ಕಾರ್ಯಾಚರಣೆ ವೇಳೆ ಒಬ್ಬರು ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಈ ವರ್ಷ ಇದುವರೆಗೆ 22 ಮಂದಿ ಪಾಕಿಸ್ತಾನಿ ಉಗ್ರರನ್ನು ಹೊಡೆದುರುಳಿಸಲಾಗಿದೆ'' ಎಂದು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+