ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕುಪ್ವಾರದಲ್ಲಿ ಎನ್‌ಕೌಂಟರ್; ಮೂವರು ಲಷ್ಕರ್‌ ಉಗ್ರರ ಹತ್ಯೆ

|
Google Oneindia Kannada News

ಶ್ರೀನಗರ, ಮೇ 26: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಜುಮಗುಂಡ್ ಗ್ರಾಮದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಗುರುವಾರ ಬೆಳಗ್ಗೆ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಲಷ್ಕರ್-ಎ-ತೋಯ್ಬಾ ಉಗ್ರರನ್ನು ಹತ್ಯೆ ಮಾಡಲಾಗಿದೆ.

ಘಟನಾ ಸ್ಥಳದಿಂದ ಪೊಲೀಸರು ಶಸ್ತ್ರಾಸ್ತ್ರಗಳು ಹಾಗೂ ಸ್ಟೋಟಕ ಸಾಮಾಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಮಾಹಿತಿ ನೀಡಿದರು.

ಉಗ್ರರ ಜೊತೆ ನಂಟು; ಮೂವರು ಸರಕಾರಿ ನೌಕರರು ಸೇವೆಯಿಂದ ವಜಾ ಉಗ್ರರ ಜೊತೆ ನಂಟು; ಮೂವರು ಸರಕಾರಿ ನೌಕರರು ಸೇವೆಯಿಂದ ವಜಾ

"ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೋಯ್ಬಾಗೆ ಸೇರಿದ ಮೂವರು ಉಗ್ರರನ್ನು ಎನ್‌ಕೌಂಟರ್ ಮಾಡಲಾಗಿದೆ. ಅವರ ವೈಯಕ್ತಿಕ ಗುರುತು ಇನ್ನೂ ಪತ್ತೆಯಾಗಿಲ್ಲ. ಉಗ್ರರಿಂದ ಶಸ್ತ್ರಾಸ್ತ್ರಗಳು, ಮದ್ದು-ಗುಂಡುಗಳು ಸೇರಿದಂತೆ ಸ್ಫೋಟಕ ಸಾಮಾಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ" ಎಂದು ಟ್ವೀಟ್ ಮಾಡಿದ್ದಾರೆ.

Encounter in Kashmir 3 Lashkar E Taiba Terrorists Killed

ಜುಮಗುಂಡ್ ಗ್ರಾಮದಲ್ಲಿ ಉಗ್ರರ ಒಳನುಸಳುವಿಕೆ ಪ್ರಯತ್ನಗಳ ಬಗ್ಗೆ ಕುಪ್ವಾರ್ ಪೊಲೀಸರಿಗೆ ಲಭ್ಯವಾದ ಖಚಿತ ಮಾಹಿತಿ ಮೇರೆಗೆ ಗುರುವಾರ ಮುಂಜಾನೆ ಕಾರ್ಯಾಚರಣೆ ಪ್ರಾರಂಭವಾಯಿತು.

ಗೋರಖನಾಥ ದೇಗುಲದ ಮೇಲೆ ದಾಳಿ ಆರೋಪಿಗೆ ಐಸಿಸ್‌ ಉಗ್ರರ ನಂಟು: ಯುಪಿ ಪೊಲೀಸ್ ಅಧಿಕಾರಿ ಗೋರಖನಾಥ ದೇಗುಲದ ಮೇಲೆ ದಾಳಿ ಆರೋಪಿಗೆ ಐಸಿಸ್‌ ಉಗ್ರರ ನಂಟು: ಯುಪಿ ಪೊಲೀಸ್ ಅಧಿಕಾರಿ

ಬುಧವಾರ ಬಾರಾಮುಲ್ಲದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಷ್‌-ಎ-ಮೊಹಮ್ಮದ್‌ಗೆ ಸೇರಿದ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿತ್ತು.

Encounter in Kashmir 3 Lashkar E Taiba Terrorists Killed

"ಜೈಷ್‌-ಎ-ಮೊಹಮ್ಮಸ್‌ಗೆ ಸೇರಿದ ಪಾಕಿಸ್ತಾನದ ಮೂವರು ಉಗ್ರರು ಬಾರಾಮುಲ್ಲ ಪ್ರದೇಶದಲ್ಲಿ ಕಳೆದ 3-4 ತಿಂಗಳಿನಿಂದ ಸಕ್ರಿಯವಾಗಿ ಇರುವ ಬಗ್ಗೆ ನಮಗೆ ಮಾಹಿತಿ ಲಭ್ಯವಿತ್ತು. ಅವರ ಮೇಲೆ ನಿಗಾ ಇಡಲಾಗಿತ್ತು. ಬುಧವಾರ ಕಾರ್ಯಾಚರಣೆ ನಡೆಸಿ ಮೂವರು ಉಗ್ರರನ್ನು ಎನ್‌ಕೌಂಟರ್ ಮಾಡಲಾಗಿದೆ. ಕಾರ್ಯಾಚರಣೆ ವೇಳೆ ಒಬ್ಬರು ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಈ ವರ್ಷ ಇದುವರೆಗೆ 22 ಮಂದಿ ಪಾಕಿಸ್ತಾನಿ ಉಗ್ರರನ್ನು ಹೊಡೆದುರುಳಿಸಲಾಗಿದೆ'' ಎಂದು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.

English summary
Three Lashkar-e-Taiba terrorists killed in an encounter in Kupwara district of Jammu and Kashmir.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X