ಕಾಶ್ಮೀರದಲ್ಲಿ ಗುಂಡಿನ ಚಕಮಕಿ; 3 ಉಗ್ರರ ಹತ್ಯೆ, ಒಬ್ಬ ಶರಣಾಗತಿ
ಶ್ರೀನಗರ, ಮೇ 06; ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ. ಹೊಸದಾಗಿ ಉಗ್ರ ಸಂಘಟನೆಗೆ ಸೇರಿದ್ದ ತೌಷಿಫ್ ಅಹಮದ್ ಎಂಬ ಉಗ್ರ ಪೊಲೀಸರಿಗೆ ಶರಣಾಗಿದ್ದಾನೆ.
ಗುರುವಾರ ಬೆಳಗ್ಗೆ ಶೋಫಿಯನ್ ಜಿಲ್ಲೆಯ ಕಾನಿಗಮ್ ಎಂಬ ಗ್ರಾಮದ ಬಳಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ. ಇದುವರೆಗೂ ಮೂವರು ಉಗ್ರರು ಸಾವನ್ನಪ್ಪಿದ್ದಾರೆ ಎಂದು ಕಾಶ್ಮೀರ ವಿಭಾಗದ ಪೊಲೀಸರು ಹೇಳಿದ್ದಾರೆ.
ಉಗ್ರರು ಅಡಗಿರುವ ಖಚಿತ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ದಾಳಿಯನ್ನು ನಡೆಸಿವೆ. ಈ ವೇಳೆ ಹೊಸದಾಗಿ ಉಗ್ರ ಸಂಘಟನೆಗೆ ಸೇರಿದ್ದ ಉಗ್ರನೊಬ್ಬ ಪೊಲೀಸರಿಗೆ ಶರಣಾಗಿದ್ದಾನೆ. ಆತನ ವಿಚಾರಣೆ ನಡೆಯುತ್ತಿದ್ದು, ಅಡಗಿ ಕೂತವರ ಬಗ್ಗೆ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ.

ಒಟ್ಟು ಐವರು ಉಗ್ರರು ಒಳನುಸುಳಿ ಬಂದಿರಬಹುದು ಎಂದು ಶಂಕಿಸಲಾಗಿದೆ. ಗುಂಡಿನ ಕಾಳಗ ಮುಂದುವರೆದಿದ್ದು, ಉಗ್ರರ ಬಳಿ ಯಾವ ಶಸ್ತ್ರಾಸ್ತ್ರಗಳಿವೆ ಎಂದು ಶರಣಾದ ಉಗ್ರನಿಂದ ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ.












Click it and Unblock the Notifications