• search
  • Live TV
ಶ್ರೀನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪುಲ್ವಾಮಾ: ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ

|

ಶ್ರೀನಗರ, ಸೆಪ್ಟೆಂಬರ್ 15: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಬಳಿ ಉಗ್ರರು ಹಾಗೂ ಭದ್ರತಾ ಪಡೆ ನಡುವೆ ಗುಂಡಿನ ಚಕಮಕಿ ನಡೆದಿದೆ.

ಪುಲ್ವಾಮಾದ ಮಾರ್ವಲಾ ಪ್ರಾಂತ್ಯದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿ ಪಡೆದು ತೆರಳಿದ ಭದ್ರತಾ ಸಿಬ್ಬಂದಿ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ. ಅದಕ್ಕೆ ಪ್ರತ್ಯುತ್ತರವಾಗಿ ಸೇನೆಯು ಕೂಡ ಗುಂಡಿನ ಸುರಿಮಳೆಗೈದಿದೆ.

ಶ್ರೀನಗರದಲ್ಲಿ ಎನ್ ಕೌಂಟರ್‌; ಮೂವರು ಉಗ್ರರ ಹತ್ಯೆ

ಗುಂಡಿನ ದಾಳಿ ಮುದುವರೆದಿದ್ದು, ಘಟನೆಯ ಬಗ್ಗೆ ಇನ್ನೂ ಪೂರ್ಣ ಮಾಹಿತಿ ಲಭ್ಯವಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಪೊಲೀಸರು ಹಾಗೂ ಸಿಆರ್‌ಪಿಎಫ್ ಜಂಟಿಯಾಗಿ ಕಾರ್ಯಾಚರಣೆ ನಡೆಸಿತ್ತು. ಪುಲ್ವಾಮಾದಲ್ಲಿ ಮತ್ತೆ ಉಗ್ರರು ಹಾಗೂ ಭದ್ರತಾ ಸಿಬ್ಬಂದಿ ಮಧ್ಯೆ ಗುಂಡಿನ ಚಕಮಕಿ ಏರ್ಪಟ್ಟಿದ್ದು, ಕಾರ್ಯಾಚಾರಣೆ ಇನ್ನೂ ಪ್ರಗತಿಯಲ್ಲಿದೆ. ಈ ವೇಳೆ ಇಬ್ಬರು ಯೋಧರಿಗೆ ತೀವ್ರ ಗಾಯಗಳಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.

ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಕಾಕಪುರ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದ್ದು, ಈ ವೇಳೆ ಇಬ್ಬರು ಯೋಧರಿಗೆ ಗಾಯಗಳಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಲ್ಲದೆ ಈ ಪ್ರದೇಶದಲ್ಲಿ ಮೂವರು ಉಗ್ರರು ಸಿಲುಕಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾಕಪುರ ಪ್ರದೇಶದ ಮರ್ವಾಲ್ ಗ್ರಾಮದಲ್ಲಿ ಉಗ್ರರು ಅಡಗಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆ ಸೇನೆಯ ಸಿಆರ್ ಪಿಎಫ್, 50 ಆರ್‍ಆರ್ ಹಾಗೂ ಪೊಲೀಸರು ಜಂಟಿಯಾಗಿ ಪ್ರದೇಶವನ್ನು ಸುತ್ತುವರಿದು ಹುಡುಕುವ ಕಾರ್ಯಾಚರಣೆಯನ್ನು ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜಂಟಿ ತಂಡಗಳು ಪ್ರದೇಶವನ್ನು ಸುತ್ತುವರಿಯುತ್ತಿದ್ದಂತೆ ಉಗ್ರರು ಭದ್ರತಾ ಸಿಬ್ಬಂದಿ ಮೇಲೆ ಗುಂಡು ಹಾರಿಸಲು ಆರಂಭಿಸಿದರು. ಈ ಮೂಲಕ ಎನ್‍ಕೌಂಟರ್‍ ಗೆ ಪ್ರಚೋದನೆ ನೀಡಿದರು. ಇನ್ನೂ ಕಾರ್ಯಾಚರಣೆ ನಡೆಯುತ್ತಿದೆ.

ಈ ವೇಳೆ ಉಗ್ರರು ಹಾಗೂ ಭದ್ರತಾ ಸಿಬ್ಬಂದಿ ಮಧ್ಯೆ ಗುಂಡಿನ ಚಕಮಕಿ ನಡೆದಿರುವ ಕುರಿತು ಪೊಲೀಸ್ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಮೂಲಗಳ ಪ್ರಕಾರ ಇಬ್ಬರು, ಮೂವರು ಉಗ್ರರು ಸಿಲುಕಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

English summary
An encounter broke out between security forces and terrorists in Marwal area of Jammu and Kashmir’s Pulwama district early on Tuesday, the police said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X