ತ್ರಾಲ್‌ನಲ್ಲಿ ಸೇನೆಯಿಂದ ಎನ್‌ಕೌಂಟರ್‌, ಇಬ್ಬರು ಉಗ್ರರ ಹತ್ಯೆ

ಶ್ರೀನಗರ, ಮಾರ್ಚ್ 4: ತ್ರಾಲ್‌ನಲ್ಲಿ ಭಾರತೀಯ ಸೇನೆಯು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ.

ಪುಲ್ವಾಮ ಜಿಲ್ಲೆಯ ತ್ರಾಲ್ ನ ರೇಶಿ ಮೊಹಲ್ಲಾ ಪ್ರದೇಶದಲ್ಲಿ ಮನೆಯೊಂದರಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಪಡೆದ ಸೇನಾಪಡೆಗಳೂ ಕೂಡಲೇ ಕಾರ್ಯಾಚರಣೆ ನಡೆಸಿವೆ.

ಪ್ರಸ್ತುತ ಕಟ್ಟಡವನ್ನು ಸುತ್ತುವರೆದಿರುವ ಸೈನಿಕರು ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅಂತೆಯೇ ಘಟನಾ ಪ್ರದೇಶದಲ್ಲಿ ಮೊಬೈಲ್ ಮತ್ತು ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ಸೈನಿಕರು ನೋಡುತ್ತಿದ್ದಂತೆಯೇ ಉಗ್ರರು ಗುಂಡಿನ ಸುರಿಮಳೆ ಆರಂಭಿಸಿದ್ದಾರೆ. ಸೇನಾಪಡೆಗಳೂ ಕೂಡ ಪ್ರತಿದಾಳಿ ನಡೆಸಿದ್ದು, ಈ ವೇಳೆ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.

Encounter underway between terrorists, security forces at Tral 2 terrorists killed

ಸೇನಾ ಮೂಲಗಳ ಪ್ರಕಾರ ಕಟ್ಟಡದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದೆ ಮೂರರಿಂದ ನಾಲ್ಕು ಉಗ್ರರು ಅವಿತಿರುವ ಶಂಕೆ ಇದೆ ಎನ್ನಲಾಗಿದೆ. ಕಾಶ್ಮೀರ ಪೊಲೀಸರು ಮತ್ತು ಸಿಆರ್ ಪಿಎಫ್ ಸೈನಿಕರು ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+