ಮೋದಿ ಜತೆ ಸರ್ವಪಕ್ಷ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಮುಫ್ತಿ, ಫಾರೂಕ್ ಅಬ್ದುಲ್ಲಾ
ಶ್ರೀನಗರ, ಜೂನ್ 22: ಪ್ರಧಾನಿ ನರೇಂದ್ರ ಮೋದಿ ಕರೆದಿರುವ ಸರ್ವಪಕ್ಷಗಳ ಸಭೆಯಲ್ಲಿ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಹಾಗೂ ಫಾರೂಖ್ ಅಬ್ದುಲ್ಲಾ ಪಾಲ್ಗೊಳ್ಳಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಸೇರಿ ಪ್ರಮುಖ ವಿಚಾರಗಳ ಬಗ್ಗೆ ಚರ್ಚಿಸಲು ಜೂನ್ 24ರಂದು ಪ್ರಧಾನಿ ಮೋದಿ ಸರ್ವಪಕ್ಷ ಸಭೆ ಕರೆದಿದ್ದಾರೆ. ಪೀಪಲ್ಸ್ ಡೆಮಾಕ್ರಟಿಕ್ ಪಕ್ಷ (ಪಿಡಿಪಿ) ಭಾಗವಹಿಸುವ ಕುರಿತು ಮುಫ್ತಿ ಮಾಹಿತಿ ನೀಡಿದ್ದಾರೆ.
ಜೂನ್ 24ರಂದು ಪ್ರಧಾನಿ ಮೋದಿ ಸರ್ವಪಕ್ಷ ಸಭೆ ಬಗ್ಗೆ ದೂರವಾಣಿ ಕರೆ ಮಾಡಿ ತಿಳಿಸಿದ್ದಾರೆ. 2019ರಲ್ಲಿ ಆರ್ಟಿಕಲ್-370 ರದ್ದುಗೊಳಿಸಿದ ಬಳಿಕ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಸೇರಿದಂತೆ ಇತರೆ ಪ್ರಮುಖ ವಿಚಾರಗಳ ಬಗ್ಗೆ ಚರ್ಚಿಸಲು ಜೂನ್ 24ರಂದು ಪ್ರಧಾನಿ ಮೋದಿ ಸರ್ವಪಕ್ಷ ಸಭೆ ಕರೆದಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಭದ್ರತಾ ಮತ್ತು ಗುಪ್ತಚರ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದರು.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಸರ್ವ ಪಕ್ಷ ಸಭೆ ನಡೆಯಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಇತರೆ ಕೇಂದ್ರ ಸಚಿವರು ಭಾಗವಹಿಸಲಿದ್ದಾರೆ ಎಂದು ವರದಿ ಹೇಳಿದೆ. ಫಾರೂಖ್ ಅಬ್ದುಲ್ಲಾ ಹಾಗೂ ಮೆಹಬೂಬಾ ಮುಫ್ತಿ ಕೇಂದ್ರಾಡಳಿತ ಪ್ರದೇಶ ಎಂದು ಘೋಷಣೆಯಾಗುವುದಕ್ಕೂ ಮುನ್ನ ಜಮ್ಮು ಕಾಶ್ಮೀರದಲ್ಲಿ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದರು.
-
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications