• search
  • Live TV
ಶ್ರೀನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೋದಿ ಜತೆ ಸರ್ವಪಕ್ಷ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಮುಫ್ತಿ, ಫಾರೂಕ್ ಅಬ್ದುಲ್ಲಾ

|
Google Oneindia Kannada News

ಶ್ರೀನಗರ, ಜೂನ್ 22: ಪ್ರಧಾನಿ ನರೇಂದ್ರ ಮೋದಿ ಕರೆದಿರುವ ಸರ್ವಪಕ್ಷಗಳ ಸಭೆಯಲ್ಲಿ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಹಾಗೂ ಫಾರೂಖ್ ಅಬ್ದುಲ್ಲಾ ಪಾಲ್ಗೊಳ್ಳಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಸೇರಿ ಪ್ರಮುಖ ವಿಚಾರಗಳ ಬಗ್ಗೆ ಚರ್ಚಿಸಲು ಜೂನ್‌ 24ರಂದು ಪ್ರಧಾನಿ ಮೋದಿ ಸರ್ವಪಕ್ಷ ಸಭೆ ಕರೆದಿದ್ದಾರೆ. ಪೀಪಲ್ಸ್‌ ಡೆಮಾಕ್ರಟಿಕ್‌ ಪಕ್ಷ (ಪಿಡಿಪಿ) ಭಾಗವಹಿಸುವ ಕುರಿತು ಮುಫ್ತಿ ಮಾಹಿತಿ ನೀಡಿದ್ದಾರೆ.

ಜೂನ್‌ 24ರಂದು ಪ್ರಧಾನಿ ಮೋದಿ ಸರ್ವಪಕ್ಷ ಸಭೆ ಬಗ್ಗೆ ದೂರವಾಣಿ ಕರೆ ಮಾಡಿ ತಿಳಿಸಿದ್ದಾರೆ. 2019ರಲ್ಲಿ ಆರ್ಟಿಕಲ್‌-370 ರದ್ದುಗೊಳಿಸಿದ ಬಳಿಕ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಸೇರಿದಂತೆ ಇತರೆ ಪ್ರಮುಖ ವಿಚಾರಗಳ ಬಗ್ಗೆ ಚರ್ಚಿಸಲು ಜೂನ್‌ 24ರಂದು ಪ್ರಧಾನಿ ಮೋದಿ ಸರ್ವಪಕ್ಷ ಸಭೆ ಕರೆದಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಭದ್ರತಾ ಮತ್ತು ಗುಪ್ತಚರ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಸರ್ವ ಪಕ್ಷ ಸಭೆ ನಡೆಯಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಇತರೆ ಕೇಂದ್ರ ಸಚಿವರು ಭಾಗವಹಿಸಲಿದ್ದಾರೆ ಎಂದು ವರದಿ ಹೇಳಿದೆ. ಫಾರೂಖ್ ಅಬ್ದುಲ್ಲಾ ಹಾಗೂ ಮೆಹಬೂಬಾ ಮುಫ್ತಿ ಕೇಂದ್ರಾಡಳಿತ ಪ್ರದೇಶ ಎಂದು ಘೋಷಣೆಯಾಗುವುದಕ್ಕೂ ಮುನ್ನ ಜಮ್ಮು ಕಾಶ್ಮೀರದಲ್ಲಿ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದರು.

English summary
The Gupkar alliance of six Jammu and Kashmir political parties has accepted Prime Minister Narendra Modi's invitation for an all-party meeting on June 24. The decision was taken at a meeting of the alliance in Srinagar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X