ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್ ಗುಪ್ಕರ್ ಮೈತ್ರಿಕೂಟದ ಭಾಗ, ಜತೆಯಾಗಿ ಚುನಾವಣೆ ಎದುರಿಸುತ್ತೇವೆ: ಫಾರೂಕ್

|
Google Oneindia Kannada News

ಶ್ರೀನಗರ, ನವೆಂಬರ್ 9: ಜಮ್ಮು ಮತ್ತು ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನವನ್ನು ಮರಳಿ ತರುವ ಹೋರಾಟಕ್ಕಾಗಿ ಎಲ್ಲ ಮುಖ್ಯವಾಹಿನಿ ಪಕ್ಷಗಳು ಸೇರಿ ಮಾಡಿಕೊಂಡಿರುವ ಪೀಪಲ್ಸ್ ಅಲೈಯನ್ಸ್ ಫಾರ್ ಗುಪ್ಕರ್ ಡಿಕ್ಲೇರೇಷನ್ ಮೈತ್ರಿಕೂಟದಲ್ಲಿ ಕಾಂಗ್ರೆಸ್ ಕೂಡ ಭಾಗವಾಗಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಗುಪ್ಕರ್ ಘೋಷಣೆಯ ಮೈತ್ರಿಕೂಟದಲ್ಲಿ ಜಮ್ಮು ಮತ್ತು ಕಾಶ್ಮೀರದ ಇತರೆ ಪಕ್ಷಗಳ ಜತೆಗೆ ಕಾಂಗ್ರೆಸ್ ಸಹ ಸೇರಿಕೊಂಡಿದೆ. ಈ ಸಮೂಹದ ಭಾಗವಾಗಿ ಜಿಲ್ಲಾ ಮಟ್ಟದ ಚುನಾವಣೆಗಳಲ್ಲಿ ಜತೆಯಾಗಿ ಸ್ಪರ್ಧಿಸಲಾಗುವುದು ಎಂದು ಈ ಮೈತ್ರಿಕೂಟದ ಮುಖ್ಯಸ್ಥರೂ ಆಗಿರುವ ಫಾರೂಕ್ ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜಕೀಯ ಪಕ್ಷಗಳ ಸಭೆ: ಏನಿದು ಗುಪ್ಕರ್ ಘೋಷಣೆ?ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜಕೀಯ ಪಕ್ಷಗಳ ಸಭೆ: ಏನಿದು ಗುಪ್ಕರ್ ಘೋಷಣೆ?

'ಅವರು ಯಾವಾಗ ಪ್ರತ್ಯೇಕವಾಗಿದ್ದು? ಇದರಲ್ಲಿ ತಪ್ಪು ಕಲ್ಪನೆ ಇರಬಾರದು. ಕಾಂಗ್ರೆಸ್ ಮೈತ್ರಿಕೂಟದ ಭಾಗವಾಗಿದೆ ಮತ್ತು ನಾವು ಜತೆಯಾಗಿ ಡಿಡಿಸಿ (ಜಿಲ್ಲಾ ಅಭಿವೃದ್ಧಿ ಸಮಿತಿ) ಚುನಾವಣೆಗಳಲ್ಲಿ ಹೋರಾಡಲಿದ್ದೇವೆ' ಎಂದು ಅವರು ಹೇಳಿದ್ದಾರೆ.

 Farooq Abdullah Says Congress Part Of Gupkar Alliance, Will Fight DDC Polls Together

ನವೆಂಬರ್ 28ರಿಂದ ಡಿಸೆಂಬರ್ 22ರವರೆಗೆ ನಡೆಯಲಿರುವ ಡಿಡಿಸಿ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನದೇ ಅಭ್ಯರ್ಥಿಗಳನ್ನು ಕಣಕ್ಕಿಳಿಯಲಿದೆ ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯಿಸಿದ ಫಾರೂಕ್, 'ನೀವು ಇದನ್ನು ಕೇಳಿಸಿಕೊಂಡಿದ್ದು ಯಾವಾಗ? ನಿನ್ನೆಯೇ ಬೇರೆ. ಇಂದು ಜಮ್ಮು ಮತ್ತು ಕಾಶ್ಮೀರದ ಕಾಂಗ್ರೆಸ್ ಮುಖ್ಯಸ್ಥ ಜಿ.ಎ. ಮಿರ್ ನನ್ನನ್ನು ಭೇಟಿ ಮಾಡಲು ಬಂದಿದ್ದರು. ನಾವು ಜತೆಯಾಗಿ ಚುನಾವಣೆ ಎದುರಿಸೋಣ ಎಂದು ಹೇಳಿದ್ದಾರೆ' ಎಂದು ತಿಳಿಸಿದ್ದಾರೆ.

ಬಂದೂಕು ಎತ್ತಿಕೊಳ್ಳದೆ ಬೇರೆ ಆಯ್ಕೆಯಿಲ್ಲ: ಮೆಹಬೂಬ ಮುಫ್ತಿ ಮತ್ತೊಂದು ವಿವಾದಬಂದೂಕು ಎತ್ತಿಕೊಳ್ಳದೆ ಬೇರೆ ಆಯ್ಕೆಯಿಲ್ಲ: ಮೆಹಬೂಬ ಮುಫ್ತಿ ಮತ್ತೊಂದು ವಿವಾದ

'ಅವರೆಲ್ಲರೂ ಈ ಬಾರಿ ಜತೆಯಾಗಿದ್ದಾರೆ. ನ್ಯಾಷನಲ್ ಕಾನ್ಫರೆನ್ಸ್, ಕಾಂಗ್ರೆಸ್, ಪಿಡಿಪಿ, ಪೀಪಲ್ಸ್ ಕಾನ್ಫರೆನ್ಸ್ ಹಾಗೂ ಇತರರು ಸೇರಿದ್ದಾರೆ. ಪರಿಸ್ಥಿತಿಯ ಕಾರಣದಿಂದ ಅವರೆಲ್ಲರೂ ಜತೆಯಾಗಿದ್ದಾರೆ ಮತ್ತು ಸಾರ್ವಜನಿಕವಾಗಿ ಜತೆಯಾಗಿರುವಂತೆ ಕಾಣಿಸಿಕೊಳ್ಳುತ್ತಿದ್ದಾರೆ' ಎಂದು ಕಾಂಗ್ರೆಸ್ ಮುಖಂಡ ಸೈಫುದ್ದೀನ್ ಸೋಝ್ ಈ ಮೈತ್ರಿಕೂಟಕ್ಕೆ ಸೇರಿಕೊಂಡಿರುವ ಮಾಹಿತಿ ನೀಡಿದ್ದಾರೆ.

English summary
People's Alliance for Gupkar Declaration chief Farooq Abdullah said, Congress is a member of the alliance and they will fight together in the DDC elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X