ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಫಾರೂಕ್ ಅಬ್ದುಲ್ಲಾ ಸೋದರಿ, ತಂಗಿ ಜಾಮೀನಿನ ಮೇಲೆ ಬಿಡುಗಡೆ

|
Google Oneindia Kannada News

ಶ್ರೀನಗರ, ಅಕ್ಟೋಬರ್ 17: ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಸೋದರಿ, ತಂಗಿಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ಹಿಂದಿರುಗಿಸಬೇಕೆಂದು ನಡೆದ ಪ್ರತಿಭಟನೆಯಲ್ಲಿ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಪುತ್ರಿ ಶಾಫಿಯಾ ಹಾಗೂ ಸಹೋದರಿ ಸುರೈಯ್ಯಾ ಅಬ್ದುಲ್ಲಾ ಅವರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದರು.

ತಕ್ಷಣವೇ ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದರು. 10 ಸಾವಿರದ ಬಾಂಡ್ ಹಾಗೂ 40 ಸಾವಿರ ರೂ. ಶ್ಯೂರಿಟಿ ನೀಡಿದ ಬಳಿಕ ಅವರನ್ನು ಬಿಡುಗಡೆ ಮಾಡಲಾಗಿದೆ. ಸೆಕ್ಷನ್ 107 ಅಡಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿಕೊಳ್ಳಲಾಗಿದೆ.

Farooq Abdullahs Sister Daughter Released

72 ದಿನಗಳ ಬಳಿಕ ಇಂಟರ್‌ನೆಟ್ ಸೇವೆ ಆರಂಭವಾದ ನಂತರ ಮಹಿಳೆಯರೆಲ್ಲ ಸೇರಿ ಶಾಂತಿಯುತ ಪ್ರತಿಭಟನೆ ನಡೆಸಿದ್ದರು.ಕೇಂದ್ರವು ಭಾರಿ ಭದ್ರತಾ ನಿರ್ಬಂಧಗಳನ್ನು ವಿಧಿಸಿತ್ತು ಮತ್ತು ರಾಜಕಾರಣಿಗಳನ್ನು ಬಂಧಿಸುವುದು, ಪ್ರವಾಸಿಗರನ್ನು ಸ್ಥಳಾಂತರಿಸುವುದು, ಹೆಚ್ಚುವರಿ ಸೈನಿಕರನ್ನು ನಿಯೋಜಿಸುವುದು ಹಾಗೂ ಫೋನ್ ಮತ್ತು ಇಂಟರ್ನೆಟ್ ಸೇವೆಗಳನ್ನು ನಿರ್ಬಂಧಿಸುವುದು ಸೇರಿದಂತೆ ಕ್ರಮಗಳನ್ನು ತೆಗೆದುಕೊಂಡಿತ್ತು.

ಆಗಸ್ಟ್‌ನಲ್ಲಿ ಸಂವಿಧಾನಸ ವಿಧಿ 370 ರದ್ದುಗೊಳಿಸುವ ಸಮಯದಲ್ಲಿ ಫಾರೂಕ್ ಅಬ್ದುಲ್ಲಾ ಮಗ ಒಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಸೇರಿದಂತೆ ಹಲವು ಮುಖಂಡರನ್ನು ಗೃಹಬಂಧನದಲ್ಲಿರಿಸಲಾಗಿತ್ತು.

English summary
Former Jammu and kashmir chief minister Farooq Abdullahs sister Suraiya and Daughter Safiya were among 13 women agitators released from Srinagar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X