ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೋಷಿಯಲ್ ಮೀಡಿಯಾ ಬಳಸಿದ್ದಕ್ಕೆ 200 ಮಂದಿ ವಿರುದ್ಧ ಎಫ್ಐಆರ್

|
Google Oneindia Kannada News

ಶ್ರೀನಗರ್, ಫೆಬ್ರವರಿ.18: ಜಮ್ಮು-ಕಾಶ್ಮೀರದಲ್ಲಿ ಸೋಷಿಯಲ್ ಮೀಡಿಯಾ ಬಳಸಿದ 200 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರ ಕ್ರಮವನ್ನು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಮುಖ್ಯಸ್ಥೆ ಮೆಹಬೂಬ್ ಮುಫ್ತಿ ಪುತ್ರಿ ಇಲ್ಟಿಜಾ ಮುಫ್ತಿ ಪ್ರಶ್ನೆ ಮಾಡಿದ್ದಾರೆ.

ಕಾಶ್ಮೀರಿಗಳ ವಿರುದ್ಧ ಪೊಲೀಸರು ತೆಗೆದುಕೊಂಡಿರುವ ಕ್ರಮವನ್ನು ಇಲ್ಟಿಜಾ ಖಂಡಿಸಿದ್ದು, ಕಾಶ್ಮೀರದ ಪ್ರಜೆಗಳು ಸಾಮಾಜಿಕ ಜಾಲತಾಣವನ್ನು ಬಳಸುವುದಕ್ಕೂ ಅನುಮತಿ ನೀಡದೇ ಇರುವುದು ಅಸಂಬದ್ಧ ನಡೆ ಎಂದು ಕಿಡಿ ಕಾರಿದ್ದಾರೆ. ಅಲ್ಲದೇ, ಸ್ವತಃ ತಾವೇ ಕಾಶ್ಮೀರಕ್ಕೆ ತೆರಳಿ ಸಾಮಾಜಿಕ ಜಾಲತಾಣ ಹಾಗೂ ವಿಪಿಎನ್ ಸಂಪರ್ಕವನ್ನು ಉಪಯೋಗಿಸುತ್ತೇನೆ. ಸಾಧ್ಯವಾದರೆ ನನ್ನ ವಿರುದ್ಧ ಎಫ್ಐಆರ್ ದಾಖಲಿಸಿ ಎಂದು ಸವಾಲ್ ಹಾಕಿದ್ದಾರೆ.

ಪಾಕಿಸ್ತಾನ ಪರ ಘೋಷಣೆ; ಹುಬ್ಬಳ್ಳಿಯ ವಿದ್ಯಾರ್ಥಿಗಳು ಬಿಡುಗಡೆಪಾಕಿಸ್ತಾನ ಪರ ಘೋಷಣೆ; ಹುಬ್ಬಳ್ಳಿಯ ವಿದ್ಯಾರ್ಥಿಗಳು ಬಿಡುಗಡೆ

ಇತ್ತೀಚಿಗಷ್ಟೇ ಸಾಮಾಜಿಕ ಜಾಲತಾಣಗಳ ವೇದಿಕೆಯನ್ನು ಸುಳ್ಳು ಸುದ್ದಿ ಮತ್ತು ಗಾಳಿ ಸುದ್ದಿಯನ್ನು ಹರಿ ಬಿಡುವ ಮೂಲಕ ದುರುಪಯೋಗ ಪಡಿಸಿಕೊಂಡಿರುವ ಆರೋಪದ ಅಡಿ 200 ಮಂದಿ ಕಾಶ್ಮೀರಿ ಪ್ರಜೆಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿತ್ತು.

FIR Registered Against 200 Kashmiris For Use Social Media

ಕಾನೂನು ವಿರೋಧಿ ಚಟುವಟಿಕೆ ಆರೋಪ:

ಕಾಶ್ಮೀರದಲ್ಲಿ ಕಾನೂನು ವಿರೋಧಿ ಚಟುವಟಿಕೆ ತಡೆ ಕಾಯ್ದೆ ಅಡಿಯಲ್ಲಿ ಸಾಮಾಜಿಕ ಜಾಲತಾಣ ಮತ್ತು ವಿಪಿಎನ್ ಬಳಸಿದ ಜನರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಕಾಶ್ಮೀರದಲ್ಲಿ ಸದ್ಯಕ್ಕಿರುವ ಭದ್ರತೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡಲಾಗುತ್ತಿತ್ತು. ಈ ಹಿನ್ನೆಲೆ ಶಿಸ್ತುಕ್ರಮ ತೆಗೆದುಕೊಳ್ಳಲಾಗಿದ್ದು ಎಂದು ಪೊಲೀಸರು ತಿಳಿಸಿದ್ದಾರೆ. ಜಮ್ಮು-ಕಾಶ್ಮೀರಕಕ್ಕೆ 370ರ ಅಡಿ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಕಣಿವೆ ರಾಜ್ಯದಲ್ಲಿ ಇಂಟರ್ ನೆಟ್ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿತ್ತು.

English summary
FIR Registered Against 200 Kashmiris For Use Social Media. Iltija Mufti Questioned About Police Stand.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X