ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

3 ವರ್ಷದಲ್ಲಿ ಮೊದಲ ಬಾರಿಗೆ ಸ್ವಾತಂತ್ರ್ಯೋತ್ಸವ ದಿನ ಜಮ್ಮು-ಕಾಶ್ಮೀರದಲ್ಲಿ ಇಂಟರ್ನೆಟ್ ಸ್ಥಗಿತವಾಗಿಲ್ಲ

|
Google Oneindia Kannada News

ಶ್ರೀನಗರ, ಆಗಸ್ಟ್ 15: ಕಳೆದ 3 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಇಂಟರ್ನೆಟ್ ಸ್ಥಗಿತವಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಜಮ್ಮು ಕಾಶ್ಮೀರದಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಅಹಿತಕರ ಘಟನೆಗಳು ನಡೆಯುವ ಸಾಧ್ಯತೆ ಇದ್ದ ಕಾರಣ ಇಂಟರ್ನೆಟ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತಿತ್ತು.

ಸೈನಿಕ ಶಾಲೆಗಳಲ್ಲಿ ಇನ್ನುಮುಂದೆ ಬಾಕಿಯರಿಗೂ ಪ್ರವೇಶ: ಪ್ರಧಾನಿ ಮೋದಿಸೈನಿಕ ಶಾಲೆಗಳಲ್ಲಿ ಇನ್ನುಮುಂದೆ ಬಾಕಿಯರಿಗೂ ಪ್ರವೇಶ: ಪ್ರಧಾನಿ ಮೋದಿ

ಈ ಬಾರಿ ಇಂಟರ್ನೆಟ್ ಕಡಿತವೂ ಇಲ್ಲ ಯಾವುದೇ ನಿರ್ಬಂಧಗಳು ಇಲ್ಲದೆ ಜನರು ಸಂತೋಷವಾಗಿದ್ದರು. ಭದ್ರತಾ ದೃಷ್ಟಿಯಿಂದ ಆಗಸ್ಟ್ 15 ಹಾಗೂ ಜನವರಿ 26ರಂದು ಇಂಟರ್ನೆಟ್ ಸ್ಥಗಿತಗೊಳಿಸಲಾಗುತ್ತಿತ್ತು.

First time In 3 Years, Internet Services Unaffected In J&K On Independence Day

2005ರ ಆಗಸ್ಟ್ 15 ರಂದು ಭಕ್ಷಿ ಸ್ಟೇಡಿಯಂನಲ್ಲಿ ಉಗ್ರರು ಐಇಡಿ ಸ್ಫೋಟಿಸಿದ್ದರು. ಪಾಕಿಸ್ತಾನದ ಸ್ವಾತಂತ್ರೋತ್ಸವದ ಪ್ರಯುಕ್ತ ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಭಾರತೀಯ ಸೈನಿಕರು ಸಿಹಿ ವಿನಿಮಯ ಮಾಡಿಕೊಂಡು ಪರಸ್ಪರ ಶುಭ ಹಾರೈಸಿದರು.

ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ತಂಗ್‌ಧರ್ ಸೆಕ್ಟರ್‌ನಲ್ಲಿರುವ ಚಿಲೇಹಾನಾ ತಿತ್ವಾಲ್ ಕ್ರಾಸಿಂಗ್ ಪಾಯಿಂಟ್‌ನಲ್ಲಿ ಭಾರತೀಯ ಸೇನಾ ಸಿಬ್ಬಂದಿ, ಪಾಕ್ ಸೈನಿಕರು ಸಿಹಿಯನ್ನು ನೀಡಿದರು.

ಆಗಸ್ಟ್ 14 ರಂದು ಚಿಲೇಹಾನಾ ತಿತ್ವಾಲ್ ಕ್ರಾಸಿಂಗ್ ಪಾಯಿಂಟ್‌ನಲ್ಲಿ ಭಾರತೀಯ ಸೇನೆಯು ಸೌಹಾರ್ದಯುತ ಸಂಬಂಧವಾಗಿ ಪಾಕಿಸ್ತಾನ ಸೈನ್ಯಕ್ಕೆ ಸಿಹಿಯನ್ನು ಉಡುಗೊರೆಯಾಗಿ ನೀಡಿತು ಮತ್ತು ಪಾಕಿಸ್ತಾನ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿ ಎಲ್‌ಒಸಿಯ ಉದ್ದಕ್ಕೂ ಶಾಂತಿ ಕಾಪಾಡುವ ಇಚ್ಛೆಯನ್ನು ಪ್ರದರ್ಶಿಸಿತು ಎಂದು ಸೇನೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹಲವು ವರ್ಷಗಳಿಂದ, ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸಲು ಭಾರತ ನಿರಂತರವಾಗಿ ಪ್ರಯತ್ನಿಸುತ್ತಿದೆ ಎಂದು ಅವರು ಹೇಳಿದರು.

ಜನರು ನಿಯಂತ್ರಣ ರೇಖೆಯ ಉದ್ದಕ್ಕೂ ಹಳ್ಳಿಗಳಲ್ಲಿ ಶಾಂತಿ ಕಾಪಾಡುವ ಭಾರತೀಯ ಸೇನೆಯ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ. ಭಾರತೀಯ ಸೇನೆಯ ಈ ಸಕಾರಾತ್ಮಕ ಪ್ರಯತ್ನಗಳು ನಿಯಂತ್ರಣ ರೇಖೆಯ ಉದ್ದಕ್ಕೂ ಸುದೀರ್ಘ ಶಾಂತಿಗೆ ಕಾರಣವಾಗುತ್ತವೆ ಎಂದು ಅಧಿಕಾರಿ ಹೇಳಿದರು.

ಪ್ರಧಾನಿ ಮೋದಿ ಭಾಷಣದ ಕೆಲವು ಅಂಶಗಳು: ಇನ್ನುಮುಂದೆ ಸೈನಿಕ ಶಾಲೆಗಳು ಬಾಲಕರಿಗೆ ಮಾತ್ರ ಸೀಮಿತವಾಗಿರದೆ ಬಾಲಕಿಯರಿಗೂ ಅವಕಾಶ ಕಲ್ಪಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. 75 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಸೈನಿಕ ಶಾಲೆಗಳಲ್ಲಿ ಇನ್ನು ಮುಂದೆ ಯುವತಿಯರಿಗೂ ಪ್ರವೇಶವನ್ನು ಘೋಷಿಸಿದ್ದಾರೆ.

ಪ್ರಸ್ತುತ 33 ಸೈನಿಕ ಶಾಲೆಗಳು ದೇಶಾದ್ಯಂತ ಕಾರ್ಯನಿರ್ವಹಿಸುತ್ತಿವೆ. ಮಿಜೊರಾಮ್ ನಲ್ಲಿ ಎರಡುವರೆ ವರ್ಷಗಳ ಹಿಂದೆ ಸೈನಿಕ ಶಾಲೆಗಳಲ್ಲಿ ಬಾಲಕಿ/ಯರಿಗೆ ಪ್ರವೇಶ ನೀಡುವ ಪ್ರಥಮ ಪ್ರಯೋಗವನ್ನು ನಡೆಸಲಾಗಿತ್ತು ಎಂಬುದನ್ನು ಉಲ್ಲೇಖಿಸಿರುವ ಪ್ರಧಾನಿ ಮೋದಿ, ಈಗ ಭಾರತ ಸರ್ಕಾರ ಎಲ್ಲಾ ಸೈನಿಕ ಶಾಲೆಗಳಲ್ಲಿಯೂ ಬಾಲಕಿ/ಯುವತಿಯರಿಗೆ ಪ್ರವೇಶ ಲಭ್ಯವಿರಲಿದೆ ಎಂದು ಹೇಳಿದ್ದಾರೆ.

ಸೈನಿಕ ಶಾಲೆಗಳ ಸೊಸೈಟಿ ಸೈನಿಕ ಶಾಲೆಗಳನ್ನು ನಡೆಸುತ್ತಿದ್ದು ಆಡಳಿತಾತ್ಮಕ ನಿಯಂತ್ರಣ ರಕ್ಷಣಾ ಸಚಿವಾಲಯದ್ದಾಗಿದೆ. ಭಾರತೀಯ ಸಶಸ್ತ್ರ ಪಡೆಗಳಿಗೆ ಸೇರ್ಪಡೆಯಾಗುವುದಕ್ಕೆ ಬಾಲ್ಯದಿಂದಲೇ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಉದ್ದೇಶದಿಂದ ಸೈನಿಕ ಶಾಲೆಗಳನ್ನು ಸ್ಥಾಪಿಸಲಾಗಿದೆ.

ಇನ್ನುಮುಂದೆ ಭಾರತದ ಸೈನಿಕ ಸಾಲೆಗಳಲ್ಲಿ ದೇಶದ ಹೆಣ್ಣುಮಕ್ಕಳಿಗೂ ಅವಕಾಶ ನೀಡಬೇಕು ಎಂದು ತೀರ್ಮಾನಿಸಲಾಗಿದೆ. ಭಾರತೀಯರು ಕೋವಿಡ್ ಹೋರಾಟವನ್ನು ಬಹಳ ತಾಳ್ಮೆಯಿಂದ ಹೋರಾಡಿದ್ದಾರೆ. ಪ್ರತಿಯೊಂದು ಪ್ರದೇಶದಲ್ಲಿಯೂ ಅಸಾಧಾರಣ ವೇಗದಲ್ಲಿ ಕೆಲಸ ಮಾಡಿದ್ದೇವೆ. ಇದು ನಮ್ಮ ಕೈಗಾರಿಕೋದ್ಯಮಿಗಳು ಮತ್ತು ವಿಜ್ಞಾನಿಗಳ ಶಕ್ತಿಯ ಪರಿಣಾಮವಾಗಿದೆ, ಇಂದು ಭಾರತವು ಲಸಿಕೆಗಳಿಗಾಗಿ ಬೇರೆ ಯಾವುದೇ ರಾಷ್ಟ್ರವನ್ನು ಅವಲಂಬಿಸಿಕೊಂಡಿಲ್ಲ ಎಂದು ಮೋದಿ ಹೇಳಿದರು.

English summary
For the first time in three years, Internet and mobile services remained unaffected in Jammu and Kashmir on Independence Day which is being celebrated in the Valley in a relaxed atmosphere, officials said Sunday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X