ಐವರು ಲಷ್ಕರ್ ಉಗ್ರರ ಬಂಧನ, ಶಸ್ತ್ರಾಸ್ತ್ರಗಳು ವಶಕ್ಕೆ

ಶ್ರೀನಗರ, ಜೂನ್ 25: ಕಣಿವೆ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಅಡಗಿದ್ದ ಐವರು ಲಷ್ಕರ್ ಉಗ್ರರನ್ನು ಬಂಧಿಸಲಾಗಿದೆ. ಗುರುವಾರ ಬೆಳಗ್ಗೆ ನಡೆದ ಕಾರ್ಯಾಚರಣೆಯಲ್ಲಿ ಸೆರೆ ಸಿಕ್ಕ ಐವರು ಲಷ್ಕರ್ ಇ ತೋಯ್ಬಾ ಉಗ್ರ ಸಂಘಟನೆಗೆ ಸೇರಿದವರು ಎಂದು ತಿಳಿದು ಬಂದಿದೆ.

ಜಿಲ್ಲೆಯ ನರ್ಬಾಲ್ ಪ್ರದೇಶದಲ್ಲಿ ಐವರು ಬೀಡುಬಿಟ್ಟಿದ್ದರು. ಬಂಧಿತರಿಂದ ಅಪಾರ ಪ್ರಮಾಣದ ದಾಖಲೆ, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸರು ಹೇಳಿದ್ದಾರೆ.

ಕಣಿವೆ ಪ್ರದೇಶದಲ್ಲಿ ಮತ್ತೊಮ್ಮೆ ತನ್ನ ಕುಕೃತ್ಯಗಳನ್ನು ಎಸಗಲು ಲಷ್ಕರ್ ಉಗ್ರ ಸಂಘಟನೆ ಮುಂದಾಗಿದೆ. ವಿಧ್ವಂಸಕ ಕೃತ್ಯಗಳ ಸಂಚು, ದಾಳಿ ಯತ್ನವನ್ನುವಿಫಲಗೊಳಿಸುವಲ್ಲಿ ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸಫಲರಾಗುತ್ತಿದ್ದಾರೆ.

Five Lashkar associates arrested in J&K

ಈ ವರ್ಷದಲ್ಲಿ ಸುಮಾರು 100ಕ್ಕು ಅಧಿಕ ಶಸ್ತ್ರಸಜ್ಜಿತ ಉಗ್ರರನ್ನು ಹೊಡೆದುರಿಳಿಸಲಾಗಿದೆ. ಗಡಿಭಾಗದಲ್ಲಿ ಗುಂಡಿನ ಚಕಮಕಿ ಒಂದು ಕಡೆಯಾದರೆ, ಇನ್ನೊಂದೆಡೆ ಸಂಚು ರೂಪಿಸಿ ಬಾಂಬ್ ದಾಳಿ ನಡೆಸಲು ಲಷ್ಕರ್ ಸಂಘಟನೆ ಹೊಂಚು ಹಾಕುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+