ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶ್ರೀನಗರ ಹಿಮಪಾತ: ಮೂರನೇ ದಿನವೂ ವಿಮಾನಗಳ ಹಾರಾಟ ಸ್ಥಗಿತ

|
Google Oneindia Kannada News

ಶ್ರೀನಗರ, ಜನವರಿ 05: ಶ್ರೀನಗರದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಹಿಮಪಾತವಾಗುತ್ತಿದ್ದು, ಮೂರನೇ ದಿನವು ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ.

ಜಮ್ಮು ಮತ್ತು ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಜವಾಹರ್ ಸುರಂಗ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಹಿಮ ತುಂಬಿ ಹೋಗಿದೆ. ಇದರಿಂದಾಗಿ ರಸ್ತೆಗಳಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ಸಂಚಾರ ನಿಯಂತ್ರಣ ವಿಭಾಗದ ಅಧಿಕಾರಿ ತಿಳಿಸಿದ್ದಾರೆ.

ಹುಬ್ಬಳ್ಳಿಯಿಂದ ಅಹಮದಾಬಾದ್‌ಗೆ ಮತ್ತೆ ವಿಮಾನ ಸೇವೆ ಆರಂಭಹುಬ್ಬಳ್ಳಿಯಿಂದ ಅಹಮದಾಬಾದ್‌ಗೆ ಮತ್ತೆ ವಿಮಾನ ಸೇವೆ ಆರಂಭ

ಹವಾಮಾನದಲ್ಲಿ ಸುಧಾರಣೆ ಕಂಡುಬಂದಲ್ಲಿ ವಿಮಾನ ಸೇವೆ ಪುನರಾರಭಿಸಲಾಗುತ್ತದೆ. ರನ್‌ವೇನಿಂದ ಹಿಮವನ್ನು ತೆರವುಗೊಳಿಸಲಾಗಿದೆ. ಹಿಮಪಾತದಿಂದಾಗಿ ವಾಯುಮಾರ್ಗ ಸ್ಪಷ್ಟವಾಗಿ ಗೋಚರಿಸುತ್ತಿಲ್ಲ, ಹೀಗಾಗಿ ವಿಮಾನ ಹಾರಾಟ ಸ್ಥಗಿತಗೊಳಿಸಲಾಗಿದೆ.

 Flight Operations At Srinagar Airport Suspended For Third Consecutive Day

ಇನ್ನೊಂದೆಡೆ ಹಿಮಪಾತದಿಂದಾಗಿ ರಸ್ತೆಗಳಲ್ಲಿ ವಾಹನಗಳು ಸಂಚರಿಸುವುದಕ್ಕೆ ಸಾಧ್ಯವಾಗುತ್ತಿಲ್ಲ, ಸತತ ಎರಡನೇ ದಿನವೂ ಜಮ್ಮು ಮತ್ತು ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಮತ್ತು ಮೊಘಲ್ ರಸ್ತೆಯಲ್ಲಿ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಹಿಮಪಾತದಿಂದಾಗಿ ಹಲವು ಹೆದ್ದಾರಿಗಳಲ್ಲಿ 4500ಕ್ಕೂ ಹೆಚ್ಚು ವಾಹನಗಳು ಸಿಲುಕಿಕೊಂಡಿವೆ. ಇನ್ನು ಹಿಮಾಚಲಪ್ರದೇಶದಲ್ಲೂ ಹಿಮಪಾತ ಹಾಗೂ ಭೂಕುಸಿತ ಉಂಟಾಗುತ್ತಿದ್ದು, ವಾಹನ ಸಂಚಾರ ಅಸ್ತವ್ಯಸ್ಥಗೊಂಡಿವೆ.

ಹರ್ಯಾಣ, ದೆಹಲಿ, ತಮಿಳುನಾಡು, ಕರ್ನಾಟಕ ಸೇರಿದಂತೆ ಹಲವೆಡೆ ಕಳೆದ ಒಂದು ದಿನದಿಂದ ಭಾರಿ ಮಳೆಯಾಗುತ್ತಿದೆ.

English summary
Flight operations to and from Srinagar remained suspended for the third consecutive day on Tuesday due to poor visibility as the Valley received heavy snowfall, officials said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X