ಜಮ್ಮು-ಕಾಶ್ಮೀರದಲ್ಲಿ ಮೊದಲ ಬಾರಿಗೆ CRPFನಿಂದ ಮಹಿಳೆಯರ ತಪಾಸಣೆ
ಶ್ರೀನಗರ, ಅಕ್ಟೋಬರ್ 19: ಜಮ್ಮು-ಕಾಶ್ಮೀರದಲ್ಲಿ ಸಿಆರ್‌ಪಿಎಫ್‌ನ ಮಹಿಳಾ ಸಿಬ್ಬಂದಿ 30 ವರ್ಷಗಳ ಇದೇ ಮೊದಲ ಬಾರಿಗೆ ಮಹಿಳೆಯರ ತಪಾಸಣೆ ನಡೆಸುತ್ತಿದ್ದಾರೆ.
ಇದಕ್ಕೆ ಕೆಲವು ಮಹಿಳೆಯರು ಆಕ್ಷೇಪ ವ್ಯಕ್ತಪಡಿಸಿದ್ದು, ಸಾರ್ವಜನಿಕರ ಕಣ್ಣಿಗೆ ಬೀಳದಂತೆ ತಪಾಸಣೆಯನ್ನು ನಡೆಸಬಹುದಿತ್ತು ಎಂಬ ಅಭಿಪ್ರಾಯವನ್ನೂ ವ್ಯಕ್ತಪಡಿಸಿದ್ದಾರೆ.
ಮಹಿಳೆಯರು ಖಾಸಗಿಯಾಗಿರಿಸಿಕೊಳ್ಳುವ ಹಲವು ವಸ್ತುಗಳನ್ನು ತಮ್ಮೊಂದಿಗೆ ಕೊಂಡೊಯ್ಯುತ್ತಿರುತ್ತಾರೆ. ಸಿಆರ್ ಪಿಎಫ್ ಮಹಿಳಾ ಸಿಬ್ಬಂದಿಗಳು ಕನಿಷ್ಟ ಮರೆಯಲ್ಲಿ ತಪಾಸಣೆ ಮಾಡುವ ವ್ಯವಸ್ಥೆಯನ್ನೂ ಮಾಡಿಕೊಂಡಿಲ್ಲ ಎಂದು ಫರೀದಾ ಎಂಬ ಮಹಿಳೆ ಹೇಳಿದ್ದಾರೆ. "ತಪಾಸಣೆ ಮಾಡುವುದಕ್ಕೆ ನಮ್ಮ ಅಡ್ಡಿ ಇಲ್ಲ. ಆದರೆ ಮಾಡುವ ರೀತಿಯ ಬಗ್ಗೆ ಆಕ್ಷೇಪವಿದೆ" ಎಂದು ಫರೀದಾ ಎಂಬುವವರು ಹೇಳಿದ್ದಾರೆ.

ಲಾಲ್ ಚೌಕ್ ಪ್ರದೇಶದಲ್ಲಿ ಮಹಿಳಾ ಸಿಬ್ಬಂದಿಗಳು ಇದೇ ಮೊದಲ ಬಾರಿಗೆ ಮಹಿಳೆಯರನ್ನು ತಪಾಸಣೆಗೊಳಪಡಿಸಿದ್ದಾರೆ. ಕಾಶ್ಮೀರದಲ್ಲಿ ಜನಸಾಮಾನ್ಯರ ಹತ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಿಆರ್ ಪಿಎಫ್ ಈ ಕ್ರಮಕ್ಕೆ ಮುಂದಾಗಿದ್ದು, ಮಹಿಳೆಯರ ಬ್ಯಾಗ್ ಗಳನ್ನು ತಪಾಸಣೆಗೊಳಪಡಿಸಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ನಾಗರಿಕನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿರುವ ಘಟನೆಗಳು ಹೆಚ್ಚುತ್ತಿವೆ. ಭಾನುವಾರವಷ್ಟೇ ಬಿಹಾರ ಮೂಲದ ಇಬ್ಬರು ಕಾರ್ಮಿಕರ ಮೇಲೆ ನಡೆಸಿದ ದಾಳಿ ಹೊಣೆಯನ್ನು ಲಷ್ಕರ್-ಇ-ತೊಯ್ಬಾಗೆ ಸಂಬಂಧಿಸಿದ ಯುನೈಟೆಡ್ ಲಿಬರೇಷನ್ ಫ್ರೆಂಟ್ ಹೊತ್ತುಕೊಂಡಿವೆ.
ಕಣಿವೆ ರಾಜ್ಯವನ್ನು ತೊರೆಯುವಂತೆ ವಲಸೆ ಕಾರ್ಮಿಕರಿಗೆ ಭಯೋತ್ಪಾದಕ ಸಂಘಟನೆಗಳು ಭಯ ಹುಟ್ಟಿಸುತ್ತಿವೆ. ಈ ನಿಟ್ಟಿನಲ್ಲೇ ವಲಸೆ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಮೇಲಿಂದ ಮೇಲೆ ದಾಳಿ ನಡೆಸಲಾಗುತ್ತಿದೆ.
ಕಳೆದ ಎರಡು ದಿನಗಳಲ್ಲಿ ಮೂರು ಕಡೆ ಉಗ್ರರು ವಲಸೆ ಕಾರ್ಮಿಕರ ಮೇಲೆ ದಾಳಿ ಮಾಡಿದ್ದಾರೆ. ಶನಿವಾರ ಬಿಹಾರ ಮೂಲಕ ಗೋಲ್ ಗಪ್ಪಾ ವ್ಯಾಪಾರಿ ಮತ್ತು ಉತ್ತರ ಪ್ರದೇಶದ ಮೂಲದ ವಲಸೆ ಕಾರ್ಮಿಕರನ್ನು ಉಗ್ರರು ಕೊಂದು ಹಾಕಿದ್ದಾರೆ.
ಕಾಶ್ಮೀರದಲ್ಲಿ ಗುರಿಯಾಗಿಸಿಕೊಂಡು ನಡೆಯುತ್ತಿರುವ ನಾಗರಿಕ ಹತ್ಯೆಗಳಿಂದ ಒಂದು ವಾರದ ಹಿಂದೆ ಕಳೆದ ಹಲವು ಶಿಬಿರಗಳಲ್ಲಿ ವಾಸಿಸುತ್ತಿದ್ದ ಹಲವಾರು ಕಾಶ್ಮೀರಿ ಪಂಡಿತರು ರಾಜ್ಯ ತೊರೆಯುವುದಕ್ಕೆ ಪ್ರಮುಖ ಕಾರಣವಾಯಿತು.
ಹತ್ತಾರು ಕುಟುಂಬಗಳು - ಕಾಶ್ಮೀರಿ ವಲಸಿಗರಿಗೆ ಪ್ರಧಾನ ಮಂತ್ರಿಗಳ ವಿಶೇಷ ಉದ್ಯೋಗ ಯೋಜನೆಯಡಿ ಕೆಲಸ ನೀಡಿದ ನಂತರ ಕಣಿವೆಗೆ ಮರಳಿದ ಅನೇಕ ಸರ್ಕಾರಿ ಉದ್ಯೋಗಿಗಳು ಸದ್ದಿಲ್ಲದೆ ಜಮ್ಮು ಕಾಶ್ಮೀರವನ್ನು ತೊರೆಯುತ್ತಿದ್ದಾರೆ.
ಕಣಿವೆ ರಾಜ್ಯದಲ್ಲಿರುವ ಎಲ್ಲಾ ವಲಸೆ ಕಾರ್ಮಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಇನ್‌ಸ್ಪೆಕ್ಟರ್ ಜನರಲ್ ಆಫ್ ಪೋಲಿಸ್ (ಕಾಶ್ಮೀರ) ವಿಜಯ್ ಕುಮಾರ್ ತಿಳಿಸಿದ್ದಾರೆ. "ನಿಮ್ಮ ಅಧಿಕಾರ ವ್ಯಾಪ್ತಿಯಲ್ಲಿರುವ ಎಲ್ಲಾ ವಲಸೆ ಕಾರ್ಮಿಕರನ್ನು ಈಗಲೇ ಹತ್ತಿರದ ಪೊಲೀಸ್ ಅಥವಾ ಕೇಂದ್ರ ಅರೆಸೇನಾ ಪಡೆ ಅಥವಾ ಸೇನಾ ಕೇಂದ್ರಗಳಿಗೆ ಸ್ಥಾಪನೆಗೆ ಕರೆತರಬೇಕು," ಎಂದು ಸೂಚನೆ ನೀಡಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಇತ್ತೀಚಿನ ನಾಗರಿಕರ ಹತ್ಯೆ ಬಳಿಕ ಉಗ್ರರು ಹಾಗೂ ಭದ್ರತಾ ಪಡೆ ನಡೆದ ಒಂಬತ್ತು ಎನ್ ಕೌಂಟರ್ ಗಳಲ್ಲಿ 13 ಉಗ್ರರು ಹತರಾಗಿದ್ದಾರೆ ಎಂದು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಶನಿವಾರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 24 ಗಂಟೆಗಳಲ್ಲಿ ಶ್ರೀ ನಗರದಲ್ಲಿ 5 ಉಗ್ರರ ಪೈಕಿ ಮೂವರನ್ನು ಹತ್ಯೆ ಮಾಡಲಾಗಿದೆ. ನಾಗರಿಕರ ಹತ್ಯೆ ಬಳಿಕ ಒಂಬತ್ತು ಎನ್ ಕೌಂಟರ್ ಗಳಲ್ಲಿ 13 ಉಗ್ರರನ್ನು ಕೊಲ್ಲಲಾಗಿದೆ ಎಂದು ತಿಳಿಸಿದರು.
ಜಮ್ಮು-ಕಾಶ್ಮೀರದಲ್ಲಿ ಇತ್ತೀಚಿನ ನಾಗರಿಕರ ಹತ್ಯೆ ಬಳಿಕ ಭದ್ರತಾ ಪಡೆಗಳಿಂದ ನಡೆದ ಎಂಟು ಎನ್ ಕೌಂಟರ್ ಗಳಲ್ಲಿ ಒಟ್ಟು 11 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ವಿಜಯ್ ಕುಮಾರ್ ಶುಕ್ರವಾರ ತಿಳಿಸಿದ್ದರು. ಕಣಿವೆ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಲ್ಲಿ ಅನೇಕ ನಾಗರಿಕರನ್ನು ಉಗ್ರರು ಹತ್ಯೆ ಮಾಡಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications