ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಮ್ಮು-ಕಾಶ್ಮೀರದಲ್ಲಿ ಮೊದಲ ಬಾರಿಗೆ CRPFನಿಂದ ಮಹಿಳೆಯರ ತಪಾಸಣೆ

|
Google Oneindia Kannada News

ಶ್ರೀನಗರ, ಅಕ್ಟೋಬರ್ 19: ಜಮ್ಮು-ಕಾಶ್ಮೀರದಲ್ಲಿ ಸಿಆರ್‌ಪಿಎಫ್‌ನ ಮಹಿಳಾ ಸಿಬ್ಬಂದಿ 30 ವರ್ಷಗಳ ಇದೇ ಮೊದಲ ಬಾರಿಗೆ ಮಹಿಳೆಯರ ತಪಾಸಣೆ ನಡೆಸುತ್ತಿದ್ದಾರೆ.

ಇದಕ್ಕೆ ಕೆಲವು ಮಹಿಳೆಯರು ಆಕ್ಷೇಪ ವ್ಯಕ್ತಪಡಿಸಿದ್ದು, ಸಾರ್ವಜನಿಕರ ಕಣ್ಣಿಗೆ ಬೀಳದಂತೆ ತಪಾಸಣೆಯನ್ನು ನಡೆಸಬಹುದಿತ್ತು ಎಂಬ ಅಭಿಪ್ರಾಯವನ್ನೂ ವ್ಯಕ್ತಪಡಿಸಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಬಿಹಾರ ಕಾರ್ಮಿಕರ ಹತ್ಯೆಯ ಹೊಣೆ ಹೊತ್ತ ಲಷ್ಕರ್!ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಬಿಹಾರ ಕಾರ್ಮಿಕರ ಹತ್ಯೆಯ ಹೊಣೆ ಹೊತ್ತ ಲಷ್ಕರ್!

ಮಹಿಳೆಯರು ಖಾಸಗಿಯಾಗಿರಿಸಿಕೊಳ್ಳುವ ಹಲವು ವಸ್ತುಗಳನ್ನು ತಮ್ಮೊಂದಿಗೆ ಕೊಂಡೊಯ್ಯುತ್ತಿರುತ್ತಾರೆ. ಸಿಆರ್ ಪಿಎಫ್ ಮಹಿಳಾ ಸಿಬ್ಬಂದಿಗಳು ಕನಿಷ್ಟ ಮರೆಯಲ್ಲಿ ತಪಾಸಣೆ ಮಾಡುವ ವ್ಯವಸ್ಥೆಯನ್ನೂ ಮಾಡಿಕೊಂಡಿಲ್ಲ ಎಂದು ಫರೀದಾ ಎಂಬ ಮಹಿಳೆ ಹೇಳಿದ್ದಾರೆ. "ತಪಾಸಣೆ ಮಾಡುವುದಕ್ಕೆ ನಮ್ಮ ಅಡ್ಡಿ ಇಲ್ಲ. ಆದರೆ ಮಾಡುವ ರೀತಿಯ ಬಗ್ಗೆ ಆಕ್ಷೇಪವಿದೆ" ಎಂದು ಫರೀದಾ ಎಂಬುವವರು ಹೇಳಿದ್ದಾರೆ.

For First Time In 30 Years, Women Frisked At Srinagars Lal Chowk

ಲಾಲ್ ಚೌಕ್ ಪ್ರದೇಶದಲ್ಲಿ ಮಹಿಳಾ ಸಿಬ್ಬಂದಿಗಳು ಇದೇ ಮೊದಲ ಬಾರಿಗೆ ಮಹಿಳೆಯರನ್ನು ತಪಾಸಣೆಗೊಳಪಡಿಸಿದ್ದಾರೆ. ಕಾಶ್ಮೀರದಲ್ಲಿ ಜನಸಾಮಾನ್ಯರ ಹತ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಿಆರ್ ಪಿಎಫ್ ಈ ಕ್ರಮಕ್ಕೆ ಮುಂದಾಗಿದ್ದು, ಮಹಿಳೆಯರ ಬ್ಯಾಗ್ ಗಳನ್ನು ತಪಾಸಣೆಗೊಳಪಡಿಸಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ನಾಗರಿಕನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿರುವ ಘಟನೆಗಳು ಹೆಚ್ಚುತ್ತಿವೆ. ಭಾನುವಾರವಷ್ಟೇ ಬಿಹಾರ ಮೂಲದ ಇಬ್ಬರು ಕಾರ್ಮಿಕರ ಮೇಲೆ ನಡೆಸಿದ ದಾಳಿ ಹೊಣೆಯನ್ನು ಲಷ್ಕರ್-ಇ-ತೊಯ್ಬಾಗೆ ಸಂಬಂಧಿಸಿದ ಯುನೈಟೆಡ್ ಲಿಬರೇಷನ್ ಫ್ರೆಂಟ್ ಹೊತ್ತುಕೊಂಡಿವೆ.

ಕಣಿವೆ ರಾಜ್ಯವನ್ನು ತೊರೆಯುವಂತೆ ವಲಸೆ ಕಾರ್ಮಿಕರಿಗೆ ಭಯೋತ್ಪಾದಕ ಸಂಘಟನೆಗಳು ಭಯ ಹುಟ್ಟಿಸುತ್ತಿವೆ. ಈ ನಿಟ್ಟಿನಲ್ಲೇ ವಲಸೆ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಮೇಲಿಂದ ಮೇಲೆ ದಾಳಿ ನಡೆಸಲಾಗುತ್ತಿದೆ.

ಕಳೆದ ಎರಡು ದಿನಗಳಲ್ಲಿ ಮೂರು ಕಡೆ ಉಗ್ರರು ವಲಸೆ ಕಾರ್ಮಿಕರ ಮೇಲೆ ದಾಳಿ ಮಾಡಿದ್ದಾರೆ. ಶನಿವಾರ ಬಿಹಾರ ಮೂಲಕ ಗೋಲ್ ಗಪ್ಪಾ ವ್ಯಾಪಾರಿ ಮತ್ತು ಉತ್ತರ ಪ್ರದೇಶದ ಮೂಲದ ವಲಸೆ ಕಾರ್ಮಿಕರನ್ನು ಉಗ್ರರು ಕೊಂದು ಹಾಕಿದ್ದಾರೆ.

ಕಾಶ್ಮೀರದಲ್ಲಿ ಗುರಿಯಾಗಿಸಿಕೊಂಡು ನಡೆಯುತ್ತಿರುವ ನಾಗರಿಕ ಹತ್ಯೆಗಳಿಂದ ಒಂದು ವಾರದ ಹಿಂದೆ ಕಳೆದ ಹಲವು ಶಿಬಿರಗಳಲ್ಲಿ ವಾಸಿಸುತ್ತಿದ್ದ ಹಲವಾರು ಕಾಶ್ಮೀರಿ ಪಂಡಿತರು ರಾಜ್ಯ ತೊರೆಯುವುದಕ್ಕೆ ಪ್ರಮುಖ ಕಾರಣವಾಯಿತು.

ಹತ್ತಾರು ಕುಟುಂಬಗಳು - ಕಾಶ್ಮೀರಿ ವಲಸಿಗರಿಗೆ ಪ್ರಧಾನ ಮಂತ್ರಿಗಳ ವಿಶೇಷ ಉದ್ಯೋಗ ಯೋಜನೆಯಡಿ ಕೆಲಸ ನೀಡಿದ ನಂತರ ಕಣಿವೆಗೆ ಮರಳಿದ ಅನೇಕ ಸರ್ಕಾರಿ ಉದ್ಯೋಗಿಗಳು ಸದ್ದಿಲ್ಲದೆ ಜಮ್ಮು ಕಾಶ್ಮೀರವನ್ನು ತೊರೆಯುತ್ತಿದ್ದಾರೆ.

ಕಣಿವೆ ರಾಜ್ಯದಲ್ಲಿರುವ ಎಲ್ಲಾ ವಲಸೆ ಕಾರ್ಮಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಇನ್‌ಸ್ಪೆಕ್ಟರ್ ಜನರಲ್ ಆಫ್ ಪೋಲಿಸ್ (ಕಾಶ್ಮೀರ) ವಿಜಯ್ ಕುಮಾರ್ ತಿಳಿಸಿದ್ದಾರೆ. "ನಿಮ್ಮ ಅಧಿಕಾರ ವ್ಯಾಪ್ತಿಯಲ್ಲಿರುವ ಎಲ್ಲಾ ವಲಸೆ ಕಾರ್ಮಿಕರನ್ನು ಈಗಲೇ ಹತ್ತಿರದ ಪೊಲೀಸ್ ಅಥವಾ ಕೇಂದ್ರ ಅರೆಸೇನಾ ಪಡೆ ಅಥವಾ ಸೇನಾ ಕೇಂದ್ರಗಳಿಗೆ ಸ್ಥಾಪನೆಗೆ ಕರೆತರಬೇಕು," ಎಂದು ಸೂಚನೆ ನೀಡಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಇತ್ತೀಚಿನ ನಾಗರಿಕರ ಹತ್ಯೆ ಬಳಿಕ ಉಗ್ರರು ಹಾಗೂ ಭದ್ರತಾ ಪಡೆ ನಡೆದ ಒಂಬತ್ತು ಎನ್ ಕೌಂಟರ್ ಗಳಲ್ಲಿ 13 ಉಗ್ರರು ಹತರಾಗಿದ್ದಾರೆ ಎಂದು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಶನಿವಾರ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 24 ಗಂಟೆಗಳಲ್ಲಿ ಶ್ರೀ ನಗರದಲ್ಲಿ 5 ಉಗ್ರರ ಪೈಕಿ ಮೂವರನ್ನು ಹತ್ಯೆ ಮಾಡಲಾಗಿದೆ. ನಾಗರಿಕರ ಹತ್ಯೆ ಬಳಿಕ ಒಂಬತ್ತು ಎನ್ ಕೌಂಟರ್ ಗಳಲ್ಲಿ 13 ಉಗ್ರರನ್ನು ಕೊಲ್ಲಲಾಗಿದೆ ಎಂದು ತಿಳಿಸಿದರು.

ಜಮ್ಮು-ಕಾಶ್ಮೀರದಲ್ಲಿ ಇತ್ತೀಚಿನ ನಾಗರಿಕರ ಹತ್ಯೆ ಬಳಿಕ ಭದ್ರತಾ ಪಡೆಗಳಿಂದ ನಡೆದ ಎಂಟು ಎನ್ ಕೌಂಟರ್ ಗಳಲ್ಲಿ ಒಟ್ಟು 11 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ವಿಜಯ್ ಕುಮಾರ್ ಶುಕ್ರವಾರ ತಿಳಿಸಿದ್ದರು. ಕಣಿವೆ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಲ್ಲಿ ಅನೇಕ ನಾಗರಿಕರನ್ನು ಉಗ್ರರು ಹತ್ಯೆ ಮಾಡಿದ್ದಾರೆ.

English summary
Women were frisked by female CRPF constables in the Lal Chowk area of the city, a first of its kind exercise in the last 30 years, in the wake of civilian killings in Kashmir.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X