ಭಾರತ-ಪಾಕಿಸ್ತಾನ ಗಡಿಯಲ್ಲಿ ಕಾಡ್ಗಿಚ್ಚು: ನೆಲಬಾಂಬ್‌ಗಳು ಸ್ಫೋಟ
ಶ್ರೀನಗರ, ಮೇ 19: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಕಾಡ್ಗಿಚ್ಚು ಹಬ್ಬಿದ್ದು, ಹಲವು ನೆಲಬಾಂಬ್‌ಗಳು ಸ್ಫೋಟಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೇ 16ರ ಸೋಮವಾರದಂದು ನಿಯಂತ್ರಣ ರೇಖೆಯಲ್ಲಿರುವ ಕಾಡಿನ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ಮೆಂಧರ್ ಸೆಕ್ಟರ್‍ನ ಭಾರತದ ಗಡಿಯೊಳಗಿನ ಪ್ರದೇಶಗಳ ಅರಣ್ಯ ಭಾಗಕ್ಕೂ ಕಾಡ್ಗಿಚ್ಚು ವ್ಯಾಪಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
"ಕಾಡ್ಗಿಚ್ಚಿನ ಪರಿಣಾಮ ಸುಮಾರು 6 ನೆಲಬಾಂಬ್‌ಗಳು ಸ್ಫೋಟಗೊಂಡಿವೆ, ಶತ್ರುಗಳು ಭಾರತಕ್ಕೆ ಒಳನುಸುಳದಂತೆ ಹಿಮ್ಮೆಟ್ಟಿಸಲು ನೆಲಬಾಂಬ್‌ಗಳನ್ನು ಹುದುಗಿಸಿ ಇಡಲಾಗಿತ್ತು" ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಡ್ಗಿಚ್ಚು ಗಡಿ ಭಾಗದ ಹಳ್ಳಿಗಳಿಗೆ ತಲುಪುತ್ತಿದ್ದಂತೆ ಸೇನೆಯ ಸಹಾಯದಿಂದ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಅರಣ್ಯಾಧಿಕಾರಿ ಹುಸೇನ್ ಷಾ ಹೇಳಿದ್ದಾರೆ.
"ಕಳೆದ ಮೂರು ದಿನಗಳಿಂದ ಕಾಡ್ಗಿಚ್ಚು ಉರಿಯುತ್ತಿದೆ. ಸೇನೆಯೊಂದಿಗೆ ಸೇರಿ ನಾವು ಬೆಂಕಿಯನ್ನು ನಂದಿಸುತ್ತಿದ್ದೇವೆ. ಕಾಡ್ಗಿಚ್ಚನ್ನು ಹತೋಟಿಗೆ ತರಲಾಗಿತ್ತು ಆದರೆ ಬುಧವಾರ ಬೆಳಿಗ್ಗೆ ದರಂಶಾಲ್ ಬ್ಲಾಕ್‌ನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿತ್ತು ತೀವ್ರ ಗಾಳಿ ಬೀಸಿದ ಪರಿಣಾಮ ಕಾಡ್ಗಿಚ್ಚು ವೇಗವಾಗಿ ಹಬ್ಬಿದೆ" ಎಂದು ಅವರು ತಿಳಿಸಿದ್ದಾರೆ.
ತ್ರಿಕೂಟ ಬೆಟ್ಟಗಳ ಮೇಲಿನ ಕಾಡುಗಳಿಗೂ ಬೆಂಕಿ ಹಬ್ಬಿದ್ದು, ಹೊಸ ಮಾರ್ಗದ ಮೂಲಕ ಮಾತಾ ವೈಷ್ಣೋದೇವಿ ಪುಣ್ಯಕ್ಷೇತ್ರಕ್ಕೆ ತೀರ್ಥಯಾತ್ರೆಯನ್ನು ಸ್ಥಗಿತಗೊಳಿಸಿದೆ. ಆದರೆ ಸಾಂಪ್ರದಾಯಿಕ ಮಾರ್ಗದ ಮೂಲಕ ವೈಷ್ಣೋದೇವಿ ಕ್ಷೇತ್ರಕ್ಕೆ ಹೋಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಡ್ಗಿಚ್ಚಿನಿಂದಾಗಿ ಮಾತಾ ವೈಷ್ಣೋ ದೇವಿ ದೇಗುಲ ಮಂಡಳಿ ಬುಧವಾರ ಬೆಳಗ್ಗೆ ಬ್ಯಾಟರಿ ಚಾಲಿತ ಕಾರುಗಳ ಸೇವೆಯನ್ನು ಸ್ಥಗಿತಗೊಳಿಸಿತ್ತು. ಹೊಸ ಟ್ರ್ಯಾಕ್‌ನಲ್ಲಿ ಕಲ್ಲು ತೂರಾಟ ನಡೆಸಿದ್ದರಿಂದ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.
ರಜೌರಿ ಜಿಲ್ಲೆಯಲ್ಲಿ, ಗಡಿ ಸಮೀಪದ ಸುಂದರಬಂಡಿ ಪ್ರದೇಶದಲ್ಲೂ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಗಂಭೀರ್, ನಿಕ್ಕಾ, ಪಂಜ್‌ಗ್ರೇ, ಬ್ರಾಹ್ಮಣ, ಮೊಘಲಾ ಸೇರಿದಂತೆ ಇತರ ಅರಣ್ಯ ಪ್ರದೇಶಗಳಿಗೆ ವ್ಯಾಪಿಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಕಲಕೋಟೆಯ ಕಾಳಾರ್, ರಂತಾಲ್, ಚಿಂಗಿ ಅರಣ್ಯಗಳಲ್ಲೂ ಬೆಂಕಿ ಕಾಣಿಸಿಕೊಂಡಿದೆ.
"ಗಡಿಯುದ್ದಕ್ಕೂ ಬೆಂಕಿ ಆವರಿಸಿಕೊಂಡಿದ್ದು, ಅಪ್ಪರ್ ಕಂಗ್ಡಿ ಮತ್ತು ಡೋಕ್ ಬನ್ಯಾಡ್‌ನ ಎಲ್‌ಒಸಿ ಪ್ರದೇಶಗಳಿಗೂ ಹರಡಿತು" ಎಂದು ಅಧಿಕಾರಿಯೊಬ್ಬರು ಹೇಳಿದರು. ಕಾಡ್ಗಿಚ್ಚು ಹತೋಟಿಗೆ ಬಂದಿದ್ದು, ಅವಘಡದಲ್ಲಿ ಯಾವುದೇ ಜೀವಹಾನಿಯಾಗಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications