ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಮ್ಮು ಕಾಶ್ಮೀರದ ಮಾಜಿ ಗವರ್ನರ್ ಜಗಮೋಹನ್ ನಿಧನ: ಪ್ರಧಾನಿ ಸಂತಾಪ

|
Google Oneindia Kannada News

ಶ್ರೀನಗರ, ಮೇ 4: ಜಮ್ಮು ಕಾಶ್ಮೀರದ ಮಾಜಿ ಗವರ್ನರ್ ಜಗಮೋಹನ್ (94) ಅವರು ಇಂದು ನಿಧನರಾಗಿದ್ದು, ದೀರ್ಘಕಾಲಿಕ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

1927ರ ಸೆಪ್ಟೆಂಬರ್ 25ರಂದು ಜಗಮೋಹನ್ ಜನಿಸಿದ್ದು, ವೃತ್ತಿ ಜೀವನದಲ್ಲಿ ಜಮ್ಮು ಮತ್ತು ಕಾಶ್ಮೀರ ಹಾಗೂ ಗೋವಾದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಬಳಿಕ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಸಹ ಕಾರ್ಯ ನಿರ್ವಹಿಸಿದ್ದರು.

ಇವರ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದು, ಜಗಮೋಹನ್ ಜೀ ಅವರ ನಿಧನದಿಂದ ರಾಷ್ಟ್ರಕ್ಕೆ ದೊಡ್ಡ ನಷ್ಟವಾಗಿದೆ. ಜಗಮೋಹನ್ ಅವರು ಖ್ಯಾತ ನಿರ್ವಾಹಕರು ಹಾಗೂ ವಿದ್ವಾಂಸರಾಗಿದ್ದರು.

Former Jammu And Kashmir Governor Jagmohan Passes Away

ಭಾರತದ ಸುಧಾರಣೆಗೆ ಶ್ರಮಿಸಿದವರು. ಅವರ ಅಧಿಕಾರಾವಧಿಯಲ್ಲಿ ರಚಿಸಿದ ನವೀನ ರೀತಿಯ ನೀತಿಗಳು ಮೆಚ್ಚುಗೆಗೆ ಪಾತ್ರವಾಗಿತ್ತು. ಅವರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

Recommended Video

ಮಂಡ್ಯದ ಜನ ಆಕ್ಸಿಜನ್ ನಿಂದ ಸಾಯಬಾರದು ಎಂದು ಧೃಡ ನಿರ್ಧಾರ ಮಾಡಿದ ಸುಮಲತಾ | Oneindia Kannada

ಗೃಹ ಸಚಿವ ಅಮಿತ್ ಶಾ ಅವರು ಸಹ ಜಗಮೋಹನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ಜಮ್ಮು ಮತ್ತು ಕಾಶ್ಮೀರ ಗವರ್ನರ್ ಆಗಿ ಗಮನಾರ್ಹ ಅಧಿಕಾರಾವಧಿಯನ್ನು ಯಾವಾಗಲೂ ನೆನಪಿಸಿಕೊಳ್ಳುತ್ತಿದ್ದರು. ಒಬ್ಬ ಸಮರ್ಥ ಆಡಳಿತಗಾರರಾಗಿ ಮತ್ತು ರಾಷ್ಟ್ರದ ಶಾಂತಿ ಮತ್ತು ಪ್ರಗತಿಗೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡ ನಿಷ್ಠಾವಂತ ರಾಜಕಾರಣಿ. ಅವರ ದುಃಖದ ನಿಧನಕ್ಕೆ ಭಾರತ ಶೋಕಿಸುತ್ತಿದೆ. ಅವರ ಕುಟುಂಬಕ್ಕೆ ನನ್ನ ತೀವ್ರ ಸಂತಾಪ ಎಂದು ಟ್ವೀಟ್ ಮಡಿದ್ದಾರೆ.

English summary
Jammu And Kashmir Former Governor Jagmohan (94) died after suffering from a chronic illness.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X