ಶಾಪಿಯಾನ್ ಎನ್‌ಕೌಂಟರ್: ನಾಲ್ವರು ಉಗ್ರರ ಹತ್ಯೆಗೈದ ಭಾರತೀಯ ಸೇನೆ
ಶಾಪಿಯಾನ್, ಜೂನ್ 23: ಕಣಿವೆ ರಾಜ್ಯಗಳಾದ ಜಮ್ಮು ಮತ್ತು ಕಾಶ್ಮೀರದ ಶಾಪಿಯಾನ್‌ನಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ನಡೆದ ಭಾರತೀಯ ಸೇನೆ ಹಾಗೂ ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರನ್ನು ಹತ್ಯೆಗೈಯಲಾಗಿದೆ.
ನಾಲ್ವರು ಭಯೋತ್ಪಾದಕರು ಯಾವ ಸಂಘಟನೆಗೆ ಸೇರಿದವರು ಎಂದು ಇನ್ನೂ ತಿಳಿದುಬಂದಿಲ್ಲ. ಜಮ್ಮು ಕಶ್ಮೀರದ ಶಾಪಿಯಾನ್‌ನಲ್ಲಿ ಉಗ್ರರನ್ನು ಸದೆಬಡಿಯಲಾಗಿದೆ.

ಎರಡೂ ಕಡೆಯಿಂದ ಗುಂಡಿನ ದಾಳಿ ನಡೆದಿತ್ತು ಎಂದು ಎಎನ್‌ಐ ವರದಿ ಮಾಡಿದೆ. ಇನ್ನೂ ಕಾರ್ಯಾಚರಣೆ ಮುಂದುವರೆದಿದೆ. ಅದೇ ಪ್ರದೇಶದಲ್ಲಿ ಇನ್ನಷ್ಟು ಉಗ್ರರು ಅಡಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಎನ್‌ಕೌಂಟರ್‌ನಲ್ಲಿ ಹತರಾದವರಿಬ್ಬರ ಮಾಹಿತಿಯನ್ನು ಕಲೆಹಾಕಲಾಗುತ್ತಿದೆ.
ಜಮ್ಮು ಕಾಶ್ಮೀರ ಪೊಲೀಸರು ಹಾಗೂ ಯೋಧರು ಸೇರಿ ಜಂಟಿ ಕಾರ್ಯಾಚರಣೆ ನಡೆಸಿದ್ದರು. ಬೃಹತ್ ಶಸ್ತ್ರಾಸ್ತ್ರವುಳ್ಳ ಉಗ್ರರು ದಾಳಿಗೆ ಮುಂದಾಗಿದ್ದಾರೆ ಎಂಬ ಸುದ್ದಿ ಲಭ್ಯವಾಗುತ್ತಿದ್ದಂತೆ ಭಾರತೀಯ ಸೇನೆ ಪ್ರತಿದಾಳಿ ನಡೆಸಿದೆ. ಒಂದು ದಿನದ ಹಿಂದೆ ಬರಾಮುಲ್ಲಾದಲ್ಲಿ ಓರ್ವ ಉಗ್ರನನ್ನು ಹತ್ಯೆಮಾಡಲಾಗಿತ್ತು.












Click it and Unblock the Notifications