• search
  • Live TV
ಶ್ರೀನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಅನಂತ್‌ನಾಗ್‌ನಲ್ಲಿ ನಾಲ್ವರು ಉಗ್ರರನ್ನು ಸದೆಬಡಿದ ಭಾರತೀಯ ಸೇನೆ

|

ಶ್ರೀನಗರ,ಫೆಬ್ರವರಿ 24: ಅನಂತ್‌ನಾಗ್‌ನಲ್ಲಿ ಭಾರತೀಯ ಯೋಧರು ನಾಲ್ವರು ಉಗ್ರರನ್ನು ಹೊಡೆದುರುಳಿಸಿದ್ದಾರೆ.

ಅನಂತ್ ನಾಗ್ ಜಿಲ್ಲೆಯ ಶ್ರೀಗುಫ್ವಾರಾದ ಶಾಲ್‌ಗುಲ್ ಅರಣ್ಯ ಪ್ರದೇಶದಲ್ಲಿ ಈ ಎನ್ಕೌಂಟರ್ ನಡೆಯುತ್ತಿದ್ದು, ನಾಲ್ಕು ಮಂದಿ ಉಗ್ರರನ್ನು ಹೊಡೆದುರುಳಿಸುವಲ್ಲಿ ಸೇನೆ ಯಶಸ್ವಿಯಾಗಿದೆ. ಇನ್ನೂ ಕೂಡ ಕಾರ್ಯಾಚರಣೆ ಮುಂದುವರೆದಿದ್ದು, ಸ್ಥಳದಲ್ಲಿ ಮತ್ತೆ 3 ರಿಂದ ನಾಲ್ಕ ಮಂದಿ ಉಗ್ರರು ಅಡಗಿ ಕುಳಿತು ದಾಳಿ ಮಾಡುತ್ತಿದ್ದಾರೆ ಎನ್ನಲಾಗಿದೆ.

ಫೆ.14 ಭಾರತಕ್ಕೆ ಕರಾಳ ದಿನ, ಯೋಧರ ಬಲಿದಾನ ಸ್ಮರಣೀಯ

ಇನ್ನು ಈ ಹಿಂದೆ ಶ್ರೀನಗರದ ಭಾಗತ್ ಪ್ರದೇಶದ ಬರ್ಜುಲ್ಲಾ ಪ್ರದೇಶದಲ್ಲಿ ಅಂಗಡಿ ಮುಂದೆ ನಿಂತಿದ್ದ ಇಬ್ಬರು ಪೊಲೀಸರನ್ನು ಉಗ್ರನೋರ್ವ ಗುಂಡಿನ ದಾಳಿ ನಡೆಸಿ ಕೊಂದು ಹಾಕಿದ್ದ. ಈ ಘಟನೆ ಬಳಿಕ ಸೇನೆ ಉಗ್ರ ನಿಗ್ರಹ ಕಾರ್ಯಾಚರಣೆ ಆರಂಭಿಸಿತ್ತು.

ಇದರ ನಿಮಿತ್ತ ಅನಂತ್ ನಾಗ್ ಅರಣ್ಯ ಪ್ರದೇಶದಲ್ಲಿ ಇಂಗು ಈ ಎನ್ ಕೌಂಟರ್ ನಡೆದಿದೆ. ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭಾರತೀಯ ಸೇನೆ ಬುಧವಾರ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅನಂತನಾಗ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ನಾಲ್ಕು ಉಗ್ರರನ್ನು ಹೊಡೆದುರುಳಿಸಿದೆ.

ಸೈನಿಕರು ಪ್ರತಿದಾಳಿ ನಡೆಸಿದ್ದು, ಈ ವೇಳೆ ನಾಲ್ಕು ಮಂದಿ ಉಗ್ರರು ಹತರಾಗಿದ್ದಾರೆ. ಅಂತೆಯೇ ಇನ್ನೂ ಮೂರ್ನಾಲ್ಕು ಉಗ್ರರು ಅವಿತಿದ್ದು, ಅವರನ್ನೂ ನಿಗ್ರಹಿಸಲು ಕಾರ್ಯಾಚರಣೆ ಮುಂದುವರೆಸಲಾಗಿದೆ.

ಶಾಲ್‌ಗುಲ್ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿರುವ ಕುರಿತು ಮಾಹಿತಿ ಪಡೆದ ಸಿಆರ್ ಪಿಎಫ್ ಯೋಧರು ಕೂಡಲೇ ಸ್ಥಳಕ್ಕೆ ದೌಡಾಯಿಸಿದ್ದಾರೆ. ಈ ವೇಳೆ ಉಗ್ರರು ಸೈನಿಕರತ್ತ ಗುಂಡಿನ ಮಳೆ ಗೈದಿದ್ದಾರೆ.

English summary
A many as four unidentified terrorists have been killed in an ongoing encounter in Anantnag, said Jammu and Kashmir Police on Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X