ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್ ದಾಳಿ: ನಾಲ್ವರು ಉಗ್ರರ ಹತ್ಯೆ

ಶ್ರೀನಗರ, ಡಿಸೆಂಬರ್ 29: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ರಾಜ್ಪೊರದಲ್ಲಿ ನಡೆದ ಎನ್ ಕೌಂಟರ್ ದಾಳಿಯಲ್ಲಿ ನಾಲ್ವರು ಭಯೋತ್ಪಾದಕರನ್ನು ಸದೆಬಡಿಯುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ.

ಉಗ್ರರನ್ನು ಜೈಶ್ ಇ ಮೊಹಮ್ಮದ್ ಸಂಘಟನೆಯವರೆಂದು ಗುರುತಿಸಲಾಗಿದ್ದು, ಅವರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಉಗ್ರರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಭಾಗದಲ್ಲಿ ಇನ್ನೂ ಕೆಲವು ಉಗ್ರರು ಅಡಗಿರುವ ಶಂಕೆ ವ್ಯಕ್ತವಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ.

ಕಳೆದ ವಾರ ಕಣಿವೆ ರಾಜ್ಯದ ಪುಲ್ವಾಮಾದ ಟ್ರಾಲ್ ಎಂಬಲ್ಲಿ ಭಾರತೀಯ ಸೇನೆ ಆರು ಉಗ್ರರನ್ನು ಸದೆಬಡಿದಿತ್ತು.

Four terrorists killed in encounter in Jammu and Kashmirs Pulwama

ಡಿ.15 ರಂದು ಖಾರ್ಪೊರಾ ಸಿರ್ನೂ ಎಂಬ ಹಳ್ಳಿಯಲ್ಲಿ ಅಡಗಿ ಕುಳಿತಿದ್ದ ಉಗ್ರರ ಮೇಲೆ ದಾಳಿ ನಡೆಸಿದ್ದ ಬಾರತೀಯ ಸೇನೆ 3 ಉಗ್ರರನ್ನು ಹತ್ಯೆಗೈದಿತ್ತು. ಈ ಘಟನೆಯಲ್ಲಿ 8 ನಾಗರಿಕರೂ ಮೃತರಾಗಿದ್ದರು.

ಅದಕ್ಕೂ ಮುನ್ನ ಡಿ.13 ರಂದು ಸೇನಾ ನೆಲೆಯ ಮೇಲೆದಾಳಿ ಮಾಡಿ ಇಬ್ಬರು ಯೋಧರನ್ನು ಹತ್ಯೆಗೈದಿದ್ದ ಇಬ್ಬರು ಉಗ್ರರನ್ನು ಅಂದೇ ರಾತ್ರಿ ಹೊಡೆದುರುಳಿಸಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+