ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಫಾರೂಕ್ ಅಬ್ದುಲ್ಲಾರನ್ನು ಭೇಟಿ ಮಾಡಿದ ಗುಲಾಂ ನಬಿ ಆಜಾದ್

|
Google Oneindia Kannada News

ಶ್ರೀನಗರ, ಮಾರ್ಚ್ 14: ಸಾಕಷ್ಟು ತಿಂಗಳುಗಳಿಂದ ಜೈಲಿನಲ್ಲಿದ್ದು ಬಿಡುಗಡೆಯಾಗಿ ಬಂದಿರುವ ನ್ಯಾಷನಲ್ ಕಾನ್‌ಫೆರೆನ್ಸ್‌ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರನ್ನು ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಅವರು ಇಂದು ಭೇಟಿ ಮಾಡಿದರು.

ಅದಕ್ಕೂ ಮುನ್ನ ಫಾರೂಕ್ ಅಬ್ದುಲ್ಲಾ ತಮ್ಮ ಮಗ ಓಮರ್ ಅಬ್ದುಲ್ಲಾ ಅವರನ್ನು ಭೇಟಿಯಾಗಿದ್ದರು. ಫಾರೂಕ್ ಅಬ್ದುಲ್ಲಾ ಅವರನ್ನು ಶುಕ್ರವಾರವಷ್ಟೇ ಬಿಡುಗಡೆ ಮಾಡಲಾಗಿತ್ತು. ಅವರನ್ನು ಏಳು ತಿಂಗಳುಗಳ ಕಾಲ ಗೃಹ ಬಂಧನದಲ್ಲಿಡಲಾಗಿತ್ತು.

ಸಾರ್ವಜನಿಕ ರಕ್ಷಣಾ ಕಾಯ್ದೆ ಕಾಯ್ದೆಯಡಿ ಅವರನ್ನು ಬಂಧಿಸಲಾಗಿತ್ತು. ಅರ್ಟಿಕಲ್ 370 ರದ್ದತಿ ಬಳಿಕ ಶ್ರೀನಗರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆವಹಿಸುವ ನಿಟ್ಟಿನಲ್ಲಿ ಫಾರೂಕ್ ಅಬ್ದುಲ್ಲಾ ಅವರನ್ನು ಗೃಹಬಂಧನದಲ್ಲಿರಿಸಲಾಗಿತ್ತು.

farooq

ಆರ್ಟಿಕಲ್ 370 ಅಂದರೆ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆಯುವ ಸಮಯದಲ್ಲಿ ಕಾಶ್ಮೀರದಲ್ಲಿ ಕೆಲವು ನಾಯಕರಿಂದ ವಿರೋಧ ವ್ಯಕ್ತವಾಗಿತ್ತು. ಫಾರೂಕ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ, ಓಮರ್ ಅಬ್ದುಲ್ಲಾ ಅವರನ್ನು ಗೃಹಬಂಧನದಲ್ಲಿಡಲಾಗಿತ್ತು.

ಜಮ್ಮು ಕಾಶ್ಮೀರ: ಗೃಹ ಬಂಧನದಲ್ಲಿದ್ದ ಫಾರೂಕ್ ಅಬ್ದಾಲ್ಲಾಗೆ ಬಿಡುಗಡೆ ಭಾಗ್ಯಜಮ್ಮು ಕಾಶ್ಮೀರ: ಗೃಹ ಬಂಧನದಲ್ಲಿದ್ದ ಫಾರೂಕ್ ಅಬ್ದಾಲ್ಲಾಗೆ ಬಿಡುಗಡೆ ಭಾಗ್ಯ

ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲಾ ಅವರ ಗೃಹ ಬಂಧನ ರದ್ದುಗೊಳಿಸಿದ ಸರ್ಕಾರದ ನಿರ್ಧಾರವನ್ನು ಜಮ್ಮು ಕಾಶ್ಮೀರ ಕಾಂಗ್ರೆಸ್ ಸ್ವಾಗತಿಸಿದೆ. ಜೆಕೆಪಿಸಿಸಿ ಮುಖ್ಯ ವಕ್ತಾರ ರವೀಂದ್ರ ಶರ್ಮಾ ಈ ಕುರಿತು ಪ್ರತಿಕ್ರಿಯಿಸಿ, ಸರ್ಕಾರದ ನಿರ್ಧಾರ ತಡವಾದರೂ ಸ್ವಾಗತಾರ್ಹ ಎಂದು ತಿಳಿಸಿದ್ದಾರೆ.

ಅಲ್ಲದೆ ಇನ್ನುಳಿದ ಮುಖಂಡರನ್ನೂ ವಿಳಂಬನೀತಿ ಅನುಸರಿಸದೆ ಗೃಹಬಂಧನದಿಂದ ಮುಕ್ತಗೊಳಿಸುವಂತೆ ಅವರು ಆಗ್ರಹಿಸಿದ್ದರೆ. ಮುಖ್ಯವಾಹಿನಿಯ ಮುಖಂಡರ ಗೃಹಬಂಧನವು ಪ್ರಜಾಪ್ರಭುತ್ವ ಪದ್ಧತಿಯ ಸ್ಫೂರ್ತಿಗೆ ವಿರುದ್ಧವಾದುದು ಎಂದು ವಾದಿಸಿತ್ತು.

English summary
Senior Congress leader and leader of opposition in Rajya sabha , Ghulam Nabi Azad met National Conference President , Farooq Abdullah, at his residence here on Saturday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X