ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ: ಗುಂಡು ತಗುಲಿ ಯುವತಿಗೆ ಗಾಯ

|
Google Oneindia Kannada News

ಶ್ರೀನಗರ, ಜೂನ್ 27: ಪಾಕಿಸ್ತಾನವು ಶುಕ್ರವಾರ ರಾತ್ರಿ ಕದನವಿರಾಮ ಉಲ್ಲಂಘನೆ ಮಾಡಿದ್ದು, ಓರ್ವ ಯುವತಿಗೆ ಗುಂಡು ತಗುಲಿದೆ.

Recommended Video

ಬೇರೆ ದೇಶಗಳಿಗಿಂತ ನಾವು ಉತ್ತಮ ಸ್ಥಿತಿಯಲ್ಲಿ ಇದ್ದೇವೆ. | Narendra Modi | Oneindia kannada

ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಕೇರನಿ ಸೆಕ್ಟರ್‌ನ ಗಡಿ ಭಾಗದಲ್ಲಿ ಪಾಕಿಸ್ತಾನ ಸೇನೆ ಕದನವಿರಾಮ ಉಲ್ಲಂಘಿಸಿದೆ.ಯುವತಿಯ ಎಡ ಭಾಗದ ಎದೆಗೆ ಗುಂಡು ತಗುಲಿದೆ.

ಆಕೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅವರನ್ನು ಜಮ್ಮು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಗುವುದು ಎಂದು ಜಿಲ್ಲಾಧಿಕಾರಿ ರಾಹುಲ್ ಯಾದವ್ ತಿಳಿಸಿದ್ದಾರೆ.

Firing

ಯುವತಿ ಆರೋಗ್ಯವಾಗಿರುವುದನ್ನು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಸಂತ್ರಸ್ತ ಯುವತಿಯ ಉತ್ತಮ ಆರೈಕೆ ಮತ್ತು ಚಿಕಿತ್ಸೆ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ವಿಡಿಯೋ: ಭಾರತ-ಪಾಕಿಸ್ತಾನ ಗಡಿಯಲ್ಲಿ ಮೊಳಗಿದ ಗುಂಡಿನ ಸದ್ದು!ವಿಡಿಯೋ: ಭಾರತ-ಪಾಕಿಸ್ತಾನ ಗಡಿಯಲ್ಲಿ ಮೊಳಗಿದ ಗುಂಡಿನ ಸದ್ದು!

ಗುಂಡು ದೇಹದಲ್ಲೇ ಇರುವುದು ಎಕ್ಸ್‌ರೇ ವರದಿಯಿಂದ ತಿಳಿದುಬಂದಿದೆ. ಸಧ್ಯಕ್ಕೆಎ ಡ್ರೆಸಿಂಗ್ ಮಾಡಲಾಗಿದೆ, ಶಸ್ತ್ರ ಚಿಕಿತ್ಸೆ ನಡೆಸಿ ಗುಂಡನ್ನು ಹೊರಗೆ ತೆಗೆಯಬೇಕಿದೆ. ಅದಕ್ಕಾಗಿ ರಕ್ತವನ್ನು ಹೊಂದಿಸಲಾಗುತ್ತಿದೆ. ಆಕೆಯ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

English summary
An 18 years old girl sustained a bullet injury in the chest in a ceasefire violation by Pakistan in Kerani sector of Poonch districts on Friday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X