ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶ್ರೀನಗರದಲ್ಲಿ ಗ್ರೆನೇಡ್ ಸ್ಫೋಟ: 15 ಮಂದಿಗೆ ಗಾಯ

|
Google Oneindia Kannada News

ಶ್ರೀನಗರ, ನವೆಂಬರ್ 4: ಗ್ರೆನೇಡ್ ಸ್ಪೋಟಗೊಂಡು 15 ಮಂದಿ ಗಾಯಗೊಂಡಿರುವ ಘಟನೆ ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಸೋಮವಾರ ನಡೆದಿದೆ.

ಕಳೆದ ಒಂದು ವಾರದ ಹಿಂದಷ್ಟೇ ಶ್ರೀನಗರದಲ್ಲಿ ನಡೆದ ಗ್ರೆನೇಡ್ ಸ್ಪೋಟದಲ್ಲಿ 15 ಮಂದಿ ಗಾಯಗೊಂಡಿದ್ದರು. ಇಂದು ನಡೆದ ಗ್ರೆನೇಡ್ ದಾಳಿಯಲ್ಲಿ ಕನಿಷ್ಠ 15 ಮಂದಿ ಗಾಯಗೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೆನೇಡ್ ದಾಳಿ; 9 ಮಂದಿಗೆ ಗಾಯಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೆನೇಡ್ ದಾಳಿ; 9 ಮಂದಿಗೆ ಗಾಯ

ಸೋಮವಾರ ಉತ್ತರ ಕಾಶ್ಮೀರದ ಸೋಪೊರ್‌ನಲ್ಲಿ ಉಗ್ರರು ದಾಳಿ ನಡೆಸಿದ್ದಾರೆ. ಅಲ್ಲಿರುವಂತಹ ಹರಿಸಿಂಗ್ ಹೈಸ್ಟ್ರೀಟ್‌ನಲ್ಲಿ ದಾಳಿ ಸಂಭವಿಸಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Grenade Explosion In Srinagar

ಸಿಆರ್‌ಪಿಎಫ್ ತಂಡದ ಮೇಲೆ ಉಗ್ರರು ಗ್ರೆನೇಡ್ ಎಸೆದ ಪರಿಣಾಮ ಆರು ಮಂದಿ ಯೋಧರು ಗಾಯಗೊಂಡಿರುವ ಘಟನೆ ಶ್ರೀನಗರದ ಕರಣ್ ನಗರದಲ್ಲಿ ಅಕ್ಟೋಬರ್ 26ರಂದು ನಡೆದಿತ್ತು.

ಗ್ರೆನೇಡ್ ದಾಳಿ ನಡೆದಾಗ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ತಂಡವು ತಪಾಸಣಾ ಕೇಂದ್ರವನ್ನು ನಿರ್ವಹಿಸುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಗ್ರೆನೇಡ್ ಸ್ಫೋಟದ ಕಾರಣ ಸುತ್ತಲಿನ ಪ್ರದೇಶದಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ. ಇದೇ ವೇಳೆ ಉಗ್ರ ದಾಳಿಯ ಬಳಿಕ ಪ್ರತಿಯಾಗಿ ಭದ್ರತಾ ಪಡೆಗಳು ಸಹ ಗಾಳಿಯಲ್ಲಿ ಹಲವು ಸುತ್ತು ಗುಂಡು ಹಾರಿಸಿದೆ ಎಂದು ಅಧಿಕಾರಿಗಳು ಹೇಳಿದ್ದರು.

English summary
At least four people were injured in a grenade attack in Srinagar this afternoon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X