ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹುರಿಯತ್ ತೊರೆದ ಪ್ರತ್ಯೇಕತಾವಾದಿ ಮುಖಂಡ ಗಿಲಾನಿ

|
Google Oneindia Kannada News

ಶ್ರೀನಗರ, ಜೂನ್ 29: ಸುಮಾರು ಮೂರು ದಶಕಗಳಿಗೂ ಅಧಿಕ ಕಾಲ ಜಮ್ಮು ಮತ್ತು ಕಾಶ್ಮೀರ ಪ್ರತ್ಯೇಕ ರಾಜ್ಯವಾಗಬೇಕು ಎಂದು ಆಗ್ರಹಿಸಿ ಹುರಿಯತ್ ಸಂಘಟನೆಯ ಮುಖಂಡರಾಗಿ ಗುರುತಿಸಿಕೊಂಡಿದ್ದ ಸೈಯದ್ ಅಲಿ ಶಾ ಗಿಲಾನಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಹುರಿಯತ್ ಕಾನ್ಫರೆನ್ಸ್ ಸಂಘಟನೆಯ ಹುದ್ದೆಗಳಿಗೆ ರಾಜೀನಾಮೆ ನೀಡುತ್ತಿರುವುದಾಗಿ ಆಡಿಯೋ ಸಂದೇಶ ಕಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನವನ್ನು ಅಳಿಸಿ, ಮೋದಿ ನೇತೃತ್ವದ ಸರ್ಕಾರವು ಕೇಂದ್ರಾಡಳಿತ ಪ್ರದೇಶವನ್ನಾಗಿಸಿ ವರ್ಷದ ನಂತರ ಗಿಲಾನಿ ರಾಜೀನಾಮೆ ನೀಡುತ್ತಿರುವುದು ವಿಶೇಷ ಎನಿಸಿದೆ.

ಗಿಲಾನಿ 150 ಕೋಟಿ ರೂ. ಆಸ್ತಿ ಒಡೆಯ?ಗಿಲಾನಿ 150 ಕೋಟಿ ರೂ. ಆಸ್ತಿ ಒಡೆಯ?

ಸೋಪೋರ್ ಕ್ಷೇತ್ರದಿಂದ ಮೂರು ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದ ಗಿಲಾನಿಗೆ ಅನಾರೋಗ್ಯ ಸಮಸ್ಯೆ ಕಾಡುತ್ತಿದೆ ಎಂಬ ಸುದ್ದಿಯಿದೆ. 90 ವರ್ಷ ವಯಸ್ಸಿನ ಗಿಲಾನಿ ಇತ್ತೀಚೆಗೆ ಅಸ್ವಸ್ಥರಾಗಿದ್ದರು ಆದರೆ ಈಗ ಆರೋಗ್ಯ ಸ್ಥಿರವಾಗಿ ಚಿಕಿತ್ಸೆ ಮುಂದುವರೆದಿದೆ. ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಕುಟುಂಬಸ್ಥರು ಹೇಳಿದ್ದಾರೆ. ವೈಯಕ್ತಿಕ ಹಿತಾಸಕ್ತಿಗಾಗಿ ಕಣಿವೆ ರಾಜ್ಯದ ಯುವ ಜನಾಂಗವನ್ನು ದಿಕ್ಕು ತಪ್ಪಿಸಲಾಗಿದೆ ಎಂಬ ಆರೋಪಕ್ಕೂ ಪ್ರತಿಕ್ರಿಯಿಸಿರಲಿಲ್ಲ.

Hardline J&K separatist, S A S Geelani quits Hurriyat Conference

ಜಮ್ಮು ಮತ್ತು ಕಾಶ್ಮೀರ ಒಂದು ವಿವಾದಿತ ಪ್ರದೇಶ ಮತ್ತು ಅದರ ಮೇಲೆ ಭಾರತದ ನಿಯಂತ್ರಣ ಸಮರ್ಥನೀಯವಲ್ಲ. ಅದು ಕಾಶ್ಮೀರವು ವಿಭಜನೆಯ ಮುಗಿಯದ ಕಾರ್ಯಸೂಚಿ ಎಂದು ಮತ್ತು ಜಮ್ಮು ಹಾಗೂ ಕಾಶ್ಮೀರದ ಜನರ ಆಕಾಂಕ್ಷೆಗಳ ಪ್ರಕಾರ ಅದನ್ನು ಬಗೆಹರಿಸಬೇಕು ಎಂಬ ಪಾಕಿಸ್ತಾನದ ಹಕ್ಕನ್ನು ಬೆಂಬಲಿಸುತ್ತದೆ ಎಂದು ಹುರಿಯತ್ ಪ್ರತಿಪಾದಿಸುತ್ತಾ ಬಂದಿತ್ತು.

ನೂರಾರು ಕೋಟಿ ರು ಒಡೆಯ ಗಿಲಾನಿ ಅಲ್ಲದೆ ಪುತ್ರರಾದ ನಾಸೀಮ್, ನಯೀಮ್, ಪುತ್ರಿಯರಾದ ಅನಿಷಾ, ಫಾರ್ ಹಾತ್ ಸೇರಿ ಆರು ಜನರ ಮೇಲೆ ಎನ್ಐಎ ಅಧಿಕಾರಿಗಳು ಕಣ್ಣಿಟ್ಟಿದ್ದು, ಅಕ್ರಮ ಆಸ್ತಿ ಗಳಿಕೆ, ಪಾಕಿಸ್ತಾನದಿಂದ ಹಣ ಪಡೆದು, ಕಣಿವೆ ರಾಜ್ಯದಲ್ಲಿ ವಿಧ್ವಂಸಕ ಕೃತ್ಯಕ್ಕೆ ಬಳಕೆ ಮುಂತಾದ ಆರೋಪಗಳ ಕುರಿತ ತನಿಖೆ ಜಾರಿಯಲ್ಲಿದೆ

English summary
Hardline separatist Syed Ali Shah Geelani has quit the Hurriyat Conference. He issued an audio statement after a detailed two page letter.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X