ಕಾಶ್ಮೀರ ಮಾಜಿ ಸಿಎಂಗಳನ್ನು ಬಿಡುಗಡೆ ಮಾಡಿ: ದೇವೇಗೌಡ ಆಗ್ರಹ

ದೆಹಲಿ, ಮಾರ್ಚ್ 9: ಕಳೆದ ಏಳು ತಿಂಗಳಿನಿಂದ ಗೃಹಬಂಧನಲ್ಲಿರುವ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳನ್ನು ಕೂಡಲೇ ಬಿಡುಗಡೆ ಮಾಡಿ ಎಂದು ಕೇಂದ್ರ ವಿಪಕ್ಷ ನಾಯಕರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

370ನೇ ವಿಧಿ ರದ್ದು ಮಾಡಿದ ಸಂದರ್ಭದಲ್ಲಿ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ಫಾರೂಕ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಮತ್ತು ಒಮರ್ ಅಬ್ದುಲ್ಲಾ ಸೇರಿದಂತೆ ಹಲವು ನಾಯಕರನ್ನು ಗೃಹ ಬಂಧನದಲ್ಲಿರಿಸಲಾಗಿತ್ತು.

ಇದುವರೆಗೂ ಅವರನ್ನು ಬಿಡುಗಡೆ ಮಾಡದ ಕಾರಣ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್, ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ, ಅರುಣ್ ಶೌರ್ಯ, ಸಿಪಿಐ ನಾಯಕ ಡಿ ರಾಜಾ, ಆರ್ ಜೆ ಡಿ ಸಂಸದ ಮನೋಜ್ ಜಾ ಸೇರಿದಂತೆ ಹಲವು ನಾಯಕರು ಸರ್ಕಾರಕ್ಕೆ ಜಂಟಿ ಪತ್ರ ಬರೆದಿದ್ದಾರೆ.

HD Devegowda Demanding To Release 3 Former CMs Of JK

'ಕಾಶ್ಮೀರದಲ್ಲಿ ಬಂಧನದಲ್ಲಿರುವ ರಾಜಕೀಯ ಮುಖಂಡರನ್ನು ಈ ಕೂಡಲೇ ಬಂಧಮುಕ್ತಗೊಳಿಸಿ, ಅದ್ರಲ್ಲೂ ಪ್ರಮುಖವಾಗಿ ಕಾಶ್ಮೀರದ ಮೂವರು ಮಾಜಿ ಮುಖ್ಯಮಂತ್ರಿಗಳು ಬಿಡುಗಡೆ ಮಾಡಿ ಎಂದು ನಾವು ಆಗ್ರಹಿಸುತ್ತಿದ್ದೇವೆ' ಎಂದು ವಿಪಕ್ಷ ನಾಯಕರು ಸರ್ಕಾರಕ್ಕೆ ಒತ್ತಡ ಹೇರಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+