• search
  • Live TV
ಶ್ರೀನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪುಲ್ವಾಮಾ ಎನ್‌ಕೌಂಟರ್: ಹಿಜ್ಬುಲ್ ಕಮಾಂಡರ್ ಆಜಾದ್ ಹತ್ಯೆ

|

ಶ್ರೀನಗರ, ಆಗಸ್ಟ್ 12: ಪುಲ್ವಾಮಾದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಆಜಾದ್ ಲಲ್‍ಹಾರಿಯನ್ನು ಹತ್ಯೆಮಾಡಲಾಗಿದೆ.

ಕ್ಷಿಣ ಕಾಶ್ಮೀರ ಜಿಲ್ಲೆಯ ಪುಲ್ವಾಮಾದಲ್ಲಿ ತೀವ್ರ ಶೋಧ ಕಾರ್ಯಾಚರಣೆ ವೇಳೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಹಿರಿಯ ಕಮಾಂಡರ್ ಹತನಾಗಿದ್ದು, ಓರ್ವ ಸೈನಿಕ ಹುತಾತ್ಮರಾಗಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಹಿಜ್ಬುಲ್ ಸಂಘಟನೆ ಅಡಗುತಾಣಗಳ ಮೇಲೆ ದಾಳಿ: ಐವರು ಉಗ್ರರ ಬಂಧನ

ಹತನಾದ ಪುಲ್ವಾಮಾದ ಲಾಲ್‍ಹಾರ ಕಾಕ್‍ಪೋರಾ ನಿವಾಸಿಯಾದ ಹಿಜ್ಬುಲ್‍ ಕಮಾಂಡರ್ ಆಜಾದ್ ಲಲ್‍ಹಾರಿ, ದಕ್ಷಿಣ ಕಾಶ್ಮೀರದಲ್ಲಿ ಹಲವಾರು ಭಯೋತ್ಪಾದನೆ ಸಂಬಂಧಿತ ಘಟನೆಗಳಲ್ಲಿ ಭಾಗಿಯಾಗಿರುವುದರಿಂದ ಕಾರ್ಯಾಚರಣೆ ದೊಡ್ಡ ಯಶಸ್ಸು ಕಂಡಿದೆ ಎಂದು ಪೊಲೀಸ್ ಮಹಾನಿರ್ದೇಶಕ ದಿಲ್‌ಬಾಗ್ ಸಿಂಗ್ ಹೇಳಿದ್ದಾರೆ.

ಪುಲ್ವಾಮಾದ ಕಮ್ರಾಜಿಪೊರಾದಲ್ಲಿ ಉಗ್ರರು ಅಡಗಿರುವ ನಿರ್ದಿಷ್ಟ ಮಾಹಿತಿಯನ್ನಾಧರಿಸಿ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಿಆರ್‍ ಪಿಎಫ್‍, ವಿಶೇಷ ಕಾರ್ಯಾಚರಣಾ ತಂಡ (ಎಸ್‌ಒಜಿ) ರಾಷ್ಟ್ರೀಯ ರೈಫಲ್ಸ್ ಪಡೆಗಳು ಜಂಟಿಯಾಗಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದವು.

ಇಂದು ಬೆಳಿಗ್ಗೆ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದಾಗ ಉಗ್ರರು ಮತ್ತೆ ಗುಂಡು ಹಾರಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಗುಂಡು ಹಾರಿಸಿದಾಗ ಅಪರಿಚಿತ ಉಗ್ರ ಹತನಾಗಿದ್ದಾನೆ.

ಉಗ್ರನ ಮೃತದೇಹವನ್ನು ಹತ್ತಿರದ ತೋಟಗಳಿಂದ ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ, ಒಂದು ಎಕೆ ರೈಫಲ್‌, ಗ್ರೆನೇಡ್‌ಗಳು, ಚೀಲ ಮತ್ತು ಇತರ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕತ್ತಲಲ್ಲಿ ಉಗ್ರರು ತಪ್ಪಿಸಿಕೊಳ್ಳುವ ಯಾವುದೇ ಪ್ರಯತ್ನವನ್ನು ವಿಫಲಗೊಳಿಸಲು ಹೆಚ್ಚುವರಿ ಭದ್ರತಾ ಪಡೆಗಳನ್ನು ಹತ್ತಿರದ ಪ್ರದೇಶಗಳಲ್ಲಿ ನಿಯೋಜಿಸಲಾಗಿತ್ತು.

ಈ ಪ್ರದೇಶದವನ್ನು ಸಂಪರ್ಕಿಸುವ ಎಲ್ಲಾ ರಸ್ತೆಗಳನ್ನು ಮುಚ್ಚಿ, ಮನೆ-ಮನೆಗೆ ತೆರಳಿ ಶೋಧ ಆರಂಭಿಸಿದಾಗ, ಅಲ್ಲಿ ಅಡಗಿದ್ದ ಉಗ್ರರು ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಮನಸೋ ಇಚ್ಛೆ ಗುಂಡು ಹಾರಿಸಿದ್ದಾರೆ. ಈ ಘಟನೆಯಲ್ಲಿ ಸೈನಿಕನೋರ್ವ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

English summary
A commander of Hizbul Mujahideen outfit and a soldier were killed in an encounter between security forces and militants in south Kashmir’s restive Pulwama district on Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X