ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಮ್ಮು ಕಾಶ್ಮೀರ ಎನ್‌ಕೌಂಟರ್: ಹತರಾದ ಮೂವರು ಹಿಜ್ಬುಲ್ ಉಗ್ರರು

|
Google Oneindia Kannada News

ಶ್ರೀನಗರ, ಜೂನ್ 29: ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್‌ನಲ್ಲಿ ಸೋಮವಾರ ಬೆಳಗಿನ ಜಾವ ನಡೆದ ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಮೂವರು ಉಗ್ರರು ಹಿಜ್ಬುಲ್ ಉಗ್ರ ಸಂಘಟನೆಯವರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಕಾರ್ಯಾಚರಣೆಯನ್ನು ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಸಿಆರ್ ಪಿಎಫ್ ಜಂಟಿಯಾಗಿ ನಡೆಸಿತ್ತು. ಮೂವರು ಉಗ್ರರನ್ನು ಹತ್ಯೆಗೈದ ಬಳಿಕ ಎನ್ ಕೌಂಟರ್ ನಡೆದ ಸ್ಥಳದಿಂದ ಒಂದು ಎಕೆ ರೈಫಲ್ ಮತ್ತು ಎರಡು ಪಿಸ್ತೂಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

Hizbul Commander Killed In Jammu And Kashmir

ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಮೂವರು ಉಗ್ರರ ಹತ್ಯೆ ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಮೂವರು ಉಗ್ರರ ಹತ್ಯೆ

ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಮಸೂದ್ ಅಹ್ಮದ್ ಭಟ್ ಮತ್ತು ಮತ್ತಿಬ್ಬರು ಉಗ್ರರನ್ನು ಭದ್ರತಾ ಪಡೆ ಪೊಲೀಸರು ದಕ್ಷಿಣ ಕಾಶ್ಮೀರದ ಖುಲ್ಚೊಹರ್ ಪ್ರದೇಶದಲ್ಲಿ ಕಾರ್ಯಾಚರಣೆಯಲ್ಲಿ ಇಂದು ನಸುಕಿನ ಜಾವ ಹತ್ಯೆಗೈದಿದ್ದರು.

ಮಸೂದ್ ಸಾವಿನಿಂದಾಗಿ ಜಮ್ಮು ಪ್ರಾಂತ್ಯದ ಇಡೀ ದೊಡಾ ಜಿಲ್ಲೆ ಉಗ್ರರ ಉಪಟಳದಿಂದ ಮುಕ್ತವಾಗಿದ್ದು, ಈತನೊಬ್ಬನೇ ಇತ್ತೀಚಿನ ದಿನಗಳಲ್ಲಿ ಭಯೋತ್ಪಾದಕನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಸಲ್ಲಿಸಿದ್ದ ಅತ್ಯಾಚಾರ ಪ್ರಕರಣದಲ್ಲಿ ಮಸೂದ್ ಭಾಗಿಯಾಗಿದ್ದು ಪೊಲೀಸರಿಂದ ತಪ್ಪಿಸಿಕೊಂಡಿದ್ದ. ನಂತರ ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆಗೆ ಸೇರಿ ಕಾಶ್ಮೀರಕ್ಕೆ ತನ್ನ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದ್ದ.

ಜಮ್ಮು-ಕಾಶ್ಮೀರದಲ್ಲಿ 29 ವಿದೇಶಿ ಭಯೋತ್ಪಾದಕರು ಸಕ್ರಿಯರಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

English summary
In a major success in the anti-terror operations in Jammu and Kashmir, security forces killed three terrorists, including a commander of the Hizbul Mujahideen, in an encounter in Anantnag district this morning.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X