ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪುಲ್ವಾಮಾ ಎನ್‌ಕೌಂಟರ್ : ಹಿಜ್ಬುಲ್ ಉಗ್ರ ಸಂಘಟನೆ ಕಮಾಂಡರ್ ಹತ್ಯೆ

|
Google Oneindia Kannada News

ಶ್ರೀನಗರ, ಮೇ 6: ಕಾಶ್ಮೀರದ ಪುಲ್ವಾಮಾದಲ್ಲಿ ಬುಧವಾರ ನಡೆದ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಹಿಜಬುಲ್ ಉಗ್ರ ಸಂಘಟನೆಯ ಕಮಾಂಡರ್ ರಿಯಾಜ್ ನೈಕೂ ಹತ್ಯೆ ಮಾಡಲಾಗಿದೆ.

Recommended Video

ಕೊರೊನದಿಂದ ಗುಣಮುಖರಾಗಿ ಹಿಂತಿರುಗಿದ ವೀರ ಪೊಲೀಸರು | Police | After Corona Recovery

ಒಟ್ಟು ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ.ಮತ್ತೊಂದು ಘಟನೆಯಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಜಮ್ಮು-ಕಾಶ್ಮೀರ ಪೊಲೀಸ್, ಸೇನೆ ಮತ್ತು ಸಿಆರ್‍ ಪಿಎಫ್‍ ಮತ್ತು ವಿಶೇಷ ಕಾರ್ಯಾಚರಣೆ ತಂಡ (ಎಸ್ಒಜಿ) ಜಂಟಿಯಾಗಿ ಪುಲ್ವಾಮಾದ ಅವಂತಿಪೋರಾದ ಶರ್ಸಾಲಿ ಗ್ರಾಮದಲ್ಲಿ ನಿನ್ನೆ ರಾತ್ರಿ ಕಾರ್ಯಾಚರಣೆ ಆರಂಭಿಸಿದ್ದವು ಸೇನಾಧಿಕಾರಿ ಹೇಳಿದ್ದಾರೆ.

ಮಂಗಳವಾರ ರಾತ್ರಿ ಉಗ್ರರು ಅಡಗಿರುವ ಬಗ್ಗೆ ಸಿಕ್ಕ ಮಾಹಿತಿಯನ್ನಾಧರಿಸಿ, ಎರಡನೇ ಶೋಧ ಕಾರ್ಯಾಚರಣೆಯನ್ನು ಅವಂತಿಪೋರಾದ ಬೀಗ್‍ಪೋರದಲ್ಲಿ ಭಾರತೀಯ ಸೇನೆ ಆರಂಭಿಸಿತ್ತು.

Hizbul Commander Riyaz Naikoo killed In Encounter

ಬುಧವಾರ ಬೆಳಿಗ್ಗೆ ಉಗ್ರರೊಂದಿಗೆ ಮುಖಾಮುಖಿಯಾಗಿದ್ದು, ಈ ಪ್ರದೇಶದಲ್ಲಿ ಉಗ್ರ ಸಂಘಟನೆಯ ಕಮಾಂಡರ್ ರಿಯಾಜ್ ನೈಕೂ ಕೂಡ ಇದ್ದ ಎಂದು ಹೇಳಲಾಗಿತ್ತು. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಹಿಜ್ಬುಲ್ ಉಗ್ರ ಸಂಘಟನೆಯ ಕಮಾಂಡರ್ ರಿಯಾಜ್ ನೈಕೂ ಸೇರಿದಂತೆ 4 ಉಗ್ರರು ಹತರಾಗಿದ್ದಾರೆ. ಮೃತ ಉಗ್ರರ ಗುರುತು ಪತ್ತೆ ಕಾರ್ಯ ಆರಂಭವಾಗಿದೆ.

ಭದ್ರತಾ ಪಡೆಗಳು ಒಂದು ನಿರ್ದಿಷ್ಟ ಪ್ರದೇಶವನ್ನು ಸುತ್ತುವರಿದಾಗ ಅಡಗಿ ಕುಳಿತಿದ್ದ ಉಗ್ರರು ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿದ್ದು, ಈ ವೇಳೆ ನಡೆದ ಪರಸ್ಪರ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.

ಜಮ್ಮುವಿನಲ್ಲಿ ಇಬ್ಬರು ಹಿಜ್ಬುಲ್ ಭಯೋತ್ಪಾದಕರ ಎನ್ಕೌಂಟರ್ಜಮ್ಮುವಿನಲ್ಲಿ ಇಬ್ಬರು ಹಿಜ್ಬುಲ್ ಭಯೋತ್ಪಾದಕರ ಎನ್ಕೌಂಟರ್

ಶ್ರೀನಗರ ಸೇರಿದಂತೆ ಕಣಿವೆಯ ಅನೇಕ ಪ್ರದೇಶಗಳಲ್ಲಿ ಕರ್ಫ್ಯೂ ವಿಧಿಸಲಾಗಿದ್ದು, ಭದ್ರತಾ ಪಡೆಗಳು ಧ್ವನಿವರ್ಧಕಗಳ ಮೂಲಕ ಪ್ರಕಟ ಮಾಡುತ್ತಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಅವಂತಿಪೋರದ ಬೀಗ್‍ಪೋರದಲ್ಲಿ ಕಾರ್ಯಾಚರಣೆ ಮುಂದುವರೆದಿದೆ. ಮಾಧ್ಯಮಗಳು ಊಹಾಪೋಹ ಸುದ್ದಿಗಳನ್ನು ಪ್ರಸಾರ ಮಾಡದಂತೆ ಸೂಚಿಸಲಾಗಿದೆ. ಇಂತಹ ಸುದ್ದಿಗಳಿಂದ ಕಾನೂನು ಸುವ್ಯವಸ್ಥೆಗೆ ಭಂಗವಾಗುವ ಸಾಧ್ಯತೆ ಇರುವುದರಿಂದ ಮಾಧ್ಯಮಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಲಾಗಿದೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಹಾಗೂ ಭದ್ರತಾ ಕಾರಣಗಳಿಂದ ಕಾಶ್ಮೀರ ಕಣಿವೆಯಲ್ಲಿ ಬುಧವಾರ ಬಿಎಸ್ಎನ್ಎಲ್ ಸೇರಿದಂತೆ ಎಲ್ಲಾ ಮೊಬೈಲ್‍ ಕಂಪನಿಗಳ ಮೊಬೈಲ್ ಇಂಟರ್ ನೆಟ್‍ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

English summary
Riyaz Naikoo, operational commander of the banned Hizbul Mujahideen, and another militant were killed during an encounter with security forces in South Kashmir’s Awantipora, IGP Kashmir Vijay Kumar said on Wednesday. Naikoo, alias Mohammad Bin Qasim, was trapped in Beighpora village in Pulwama before being killed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X