ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಮ್ಮು ಕಾಶ್ಮೀರದಲ್ಲಿ 12 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ ಪರೀಕ್ಷೆ

|
Google Oneindia Kannada News

ಶ್ರೀನಗರ, ಸೆಪ್ಟೆಂಬರ್ 07: ಶಾಲೆಗಳನ್ನು ಆರಂಭಿಸುವ ಮುನ್ನ ಜಮ್ಮು ಮತ್ತು ಕಾಶ್ಮೀರದಲ್ಲಿ 12 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಕೊರೊನಾ ಪರೀಕ್ಷೆ ಮಾಡಲಾಗುವುದು ಎನ್ನುವ ಮಾಹಿತಿ ಲಭ್ಯವಾಗಿದೆ.

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಶಾಲೆಗಳನ್ನು ಪುನರಾರಂಭಿಸುವ ಮುನ್ನ 12,000ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಕೋವಿಡ್ -19 ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಸೋಮವಾರ ಅಧಿಕೃತ ವಕ್ತಾರರು ತಿಳಿಸಿದ್ದಾರೆ.

ಭಾರತದಲ್ಲಿ ಒಂದೇ ದಿನ 92 ಲಕ್ಷ ಮಂದಿಗೆ ಕೊರೊನಾವೈರಸ್ ಲಸಿಕೆಭಾರತದಲ್ಲಿ ಒಂದೇ ದಿನ 92 ಲಕ್ಷ ಮಂದಿಗೆ ಕೊರೊನಾವೈರಸ್ ಲಸಿಕೆ

ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕೋವಿಡ್ ಸ್ಟ್ಯಾಂಡರ್ಡ್ ಆಪರೇಟಿಂಗ್ ಕಾರ್ಯವಿಧಾನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದನ್ನು ಖಚಿತಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಶಾಲೆಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಿದ್ದಾರೆ.

 In Jammu Kahmiras Rjaouri Over 12,000 Students To Be Tested For Covid

ಎಲ್ಲಾ ವಿದ್ಯಾರ್ಥಿಗಳಿಗೆ ಆದಷ್ಟು ಬೇಗ ಕೋವಿಡ್ ಪರೀಕ್ಷೆ ಮಾಡುವಂತೆ ಮತ್ತು ಎರಡು ದಿನಗಳಲ್ಲಿ ಶಾಲೆಗಳು ಪುನರಾರಂಭವಾಗುವಂತೆ ನೋಡಿಕೊಳ್ಳುವಂತೆ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಜಿಲ್ಲೆಯ ಶಾಲೆಗಳನ್ನು ಪುನರಾರಂಭಿಸಲು ಶಿಕ್ಷಣ ಇಲಾಖೆಯು ಮಾಡಿರುವ ವ್ಯವಸ್ಥೆಗಳ ಪರಿಶೀಲನಾ ಸಭೆ ನಡೆಸಿದ ರಜೌರಿ ಜಿಲ್ಲಾಧಿಕಾರಿ ರಾಜೇಶ್ ಕೆ ಶವನ್ ಅವರು ಈ ನಿರ್ಧಾರವನ್ನು ತಿಳಿಸಿದ್ದಾರೆ ಎಂದು ವಕ್ತಾರರು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಆಡಳಿತವು ಭಾನುವಾರ ಕೆಲವು ಷರತ್ತುಗಳೊಂದಿಗೆ 10 ಮತ್ತು 12 ನೇ ತರಗತಿಗಳಿಗೆ ಕಾಲೇಜ್ ಗಳು ಮತ್ತು ಶಾಲೆಗಳನ್ನು ಪುನಃ ತೆರೆಯಲು ಅನುಮತಿ ನೀಡಿದೆ ಮತ್ತು ರಾತ್ರಿ ಕರ್ಫ್ಯೂ ಸೇರಿದಂತೆ ಹೆಚ್ಚಿನ COVID-19 ಕಂಟೈನ್‌ಮೆಂಟ್ ಮಾರ್ಗಸೂಚಿಗಳನ್ನು ಉಳಿಸಿಕೊಳ್ಳಲು ನಿರ್ಧರಿಸಿದೆ.

ಕಳೆದ 11 ದಿನಗಳಲ್ಲಿ ಮೂರನೇ ಬಾರಿಗೆ ಒಂದು ದಿನದಲ್ಲಿ ಒಂದು ಕೋಟಿ ಡೋಸ್ ಕೋವಿಡ್ -19 ಲಸಿಕೆ ನೀಡಲಾಗಿದ್ದು, ಇದರೊಂದಿಗೆ ದೇಶದಲ್ಲಿ ಇದುವರೆಗೆ 69.68 ಕೋಟಿ ಡೋಸ್‌ ಲಸಿಕೆ ನೀಡಿದಂತಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

''ದೇಶಾದ್ಯಂತ 1 ಕೋಟಿ ಕೋವಿಡ್ ಲಸಿಕೆ ನೀಡಲಾಗಿದೆ. ಇದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ವಿಶ್ವದ ಅತಿದೊಡ್ಡ ವ್ಯಾಕ್ಸಿನೇಷನ್ ಅಭಿಯಾನವು ಬೃಹತ್ ಸಾಧನೆ ಮಾಡಿದೆ" ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಟ್ವೀಟ್ ಮಾಡಿದ್ದಾರೆ.

ಇಂದು ಸಂಜೆ 7 ಗಂಟೆಯವರೆಗೆ ಒಟ್ಟು 1,05,76,911 ಡೋಸ್‌ಗಳನ್ನು ನೀಡಲಾಗಿದ್ದು, ತಡರಾತ್ರಿಯ ವೇಳೆಗೆ ದಿನದ ಅಂತಿಮ ವರದಿಗಳ ಬಂದಾಗ ಈ ಸಂಖ್ಯೆ ಇನ್ನೂ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇಶದಲ್ಲಿ ಇದುವರೆಗೆ 53,29,27,201 ಫಲಾನುಭವಿಗಳಿಗೆ ಮೊದಲ ಡೋಸ್ ಮತ್ತು 16,39,69,127 ಜನರಿಗೆ ಎರಡನೇ ಡೋಸ್‌ ಲಸಿಕೆ ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಒಟ್ಟಾರೆಯಾಗಿ, 18-44 ವಯಸ್ಸಿನ ಗುಂಪಿನಲ್ಲಿ 27,64,10,694 ಜನರು ತಮ್ಮ ಮೊದಲ ಡೋಸ್ ಮತ್ತು 3,57,76,726 ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ.

English summary
Ahead of reopening of schools in Jammu and Kashmir, over 12,000 students will undergo the COVID-19 test in Rajouri district, an official spokesman said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X