ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪರಿಚ್ಛೇದ 370 ರದ್ದತಿ ವಿವಾದದ ಬಳಿಕ ಕಾಶ್ಮೀರದಲ್ಲಿ ಎರಡು ಹತ್ಯೆ

|
Google Oneindia Kannada News

ಶ್ರೀನಗರ,ಆಗಸ್ಟ್ 21: ಕಾಶ್ಮೀರದಲ್ಲಿ ಭಾರತೀಯ ಆಡಳಿತ ಬಂದ ದಿನದಿಂದ ಇಲ್ಲಿಯವರೆಗೆ ಓರ್ವ ಪೊಲೀಸ್ ಸಿಬ್ಬಂದಿ, ಓರ್ವ ಬಂಡುಕೋರ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಬುಧವಾರ ಬರಾಮುಲ್ಲಾ ಜಿಲ್ಲೆಯಲ್ಲಿ ನಡೆದ ಕಲಹದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಮುಸ್ಲಿಂ ಸಮುದಾಯದವರೇ ಹೆಚ್ಚಿರುವ ಪ್ರದೇಶದಲ್ಲಿ ಆಗಸ್ಟ್‌ 4ರಿಂದ ಕರ್ಫ್ಯೂ ಜಾರಿಮಾಡಲಾಗಿತ್ತು.

370 ವಿಧಿ ರದ್ದಾಯ್ತು, ಈಗ ಮತ್ತೊಂದು ಅಚ್ಚರಿಯ ಸುದ್ದಿ ಕೇಳಲಿದೆ ಕಾಶ್ಮೀರ! 370 ವಿಧಿ ರದ್ದಾಯ್ತು, ಈಗ ಮತ್ತೊಂದು ಅಚ್ಚರಿಯ ಸುದ್ದಿ ಕೇಳಲಿದೆ ಕಾಶ್ಮೀರ!

ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಬಂಡುಕೋರರು ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ. ಸಂದರ್ಭದಲ್ಲಿ ಪೊಲೀಸರೊಬ್ಬರು ತೀವ್ರ ಗಾಯಗೊಂಡಿದ್ದರು. ತಕ್ಷಣವೇ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Indian Administered Kashmir Two Have Been Killed In A Gun Battle

ವಿಶೇಷ ಪೊಲೀಸ್ ಅಧಿಕಾರಿ ಬಿಲಾಲ್ ಅಹಮದ್ ಹುತಾತ್ಮರಾಗಿದ್ದು, ಮತ್ತೊಬ್ಬ ಪೊಲೀಸ್ ಅಧಿಕಾರಿ ಅಮರ್‌ದೀಪ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲ್‌ಓಸಿಯಲ್ಲಿ ಭಾರತೀಯ ಯೋಧರು ನಡೆಸಿದ ಗುಂಡಿನ ದಾಳಿಗೆ ಮೂವರು ಸ್ಥಳೀಯರು ಮೃತರಾಗಿದ್ದಾರೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ.

ಪಿಟಿಐ ಮಾಹಿತಿ ಪ್ರಕಾರ ಪಾಕಿಸ್ತಾನದವರು ನಡೆಸಿದ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು ನಾಲ್ವರಿಗೆ ಗಾಯಗಳಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕಾಶ್ಮೀರದಲ್ಲಿ ಪಾಕಿಸ್ತಾನದ ಗುಂಡಿಗೆ ಸೈನಿಕ ಹುತಾತ್ಮಕಾಶ್ಮೀರದಲ್ಲಿ ಪಾಕಿಸ್ತಾನದ ಗುಂಡಿಗೆ ಸೈನಿಕ ಹುತಾತ್ಮ

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ವಿಧಿ 370 ರದ್ದುಗೊಳಿಸಿದ ಬಳಿಕ ಕಾಶ್ಮೀರದ ಪ್ರಮುಖ ನಗರವಾದ ಶ್ರೀನಗರದಲ್ಲಿ ಪ್ರತಿಭಟನೆಗಳು ನಡೆದಿದ್ದವು.

English summary
Indian Administered Kashmir Two Have Been Killed In A Gun Battle, Two People including a police official and rebel were killed in Gunbattle.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X