• search
  • Live TV
ಶ್ರೀನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking: ಭಯೋತ್ಪಾದಕ ದಾಳಿ: ಇಬ್ಬರು ಉಗ್ರರ ಹತ್ಯೆ, ಮೂವರು ಯೋಧರು ಹುತಾತ್ಮ

|
Google Oneindia Kannada News

ಶ್ರೀನಗರ, ಆಗಸ್ಟ್ 11: ರಾಜೌರಿ ಬಳಿಯ ಸೇನಾ ಕಾರ್ಯಾಚರಣಾ ನೆಲೆಯ ಮೇಲೆ ಇಬ್ಬರು ಭಯೋತ್ಪಾದಕರು ಆತ್ಮಾಹುತಿ ದಾಳಿ ನಡೆಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ಬುಧವಾರ ವರದಿ ಮಾಡಿದೆ. ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಮತ್ತು ಮೂವರು ಯೋಧರು ಹುತಾತ್ಮರಾಗಿದ್ದಾರೆ. ಸದ್ಯ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಭಾರತೀಯ ಸೇನೆಯ ಅಧಿಕಾರಿಗಳ ಹೇಳಿದ್ದಾರೆ ಎಂದು ವರದಿ ಮಾಡಿದೆ.

ಬದ್ಗಾಮ್‌ನಲ್ಲಿ ಗಂಟೆಗಳ ಕಾಲ ನಡೆದ ಎನ್‌ಕೌಂಟರ್‌ನ ನಂತರ ಮೂವರು ಎಲ್‌ಇಟಿ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ ನಂತರ ಈ ಘಟನೆ ಸಂಭವಿಸಿದೆ. ಹತ್ಯೆಗೀಡಾದ ಭಯೋತ್ಪಾದಕರಲ್ಲಿ ಒಬ್ಬ ರಾಹುಲ್ ಭಟ್ ಮತ್ತು ಅಮರೀನ್ ಭಟ್ ಹತ್ಯೆಯಲ್ಲಿ ಭಾಗಿಯಾಗಿದ್ದನು ಎಂದು ತಿಳಿದುಬಂದಿದೆ.

"ಭಯೋತ್ಪಾದಕ ಲತೀಫ್ ಅಲಿಯಾಸ್ ಅಬ್ದುಲ್ಲಾ, ಹತ್ಯೆಗೀಡಾದ ಮೂವರು ಭಯೋತ್ಪಾದಕರಲ್ಲಿ ರಾಹುಲ್ ಭಟ್ ಮತ್ತು ಅಮರೀನ್ ಭಟ್ ಅವರ ಹಂತಕ. ಆತ ಹಲವಾರು ನಾಗರಿಕ ಹತ್ಯೆಗಳು ಮತ್ತು ದೌರ್ಜನ್ಯಗಳು ಸೇರಿದಂತೆ ಹಲವಾರು ಭಯೋತ್ಪಾದಕ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ" ಎಂದು ಕಾರ್ಯಾಚರಣೆ ಮುಗಿದ ನಂತರ ಕಾಶ್ಮೀರ ಎಡಿಜಿಪಿ ಹೇಳಿದ್ದರು.

English summary
In a terrorist attack 25 kms from Rajouri, two terrorists carried out a suicide attack on an Army company operating base. Both terrorists have been killed while three army troops also lost their lives. The operation is currently in progress.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X