ಭಾರತದ ಗಡಿಯೊಳಗೆ ನುಸುಳಲು 250-300 ಉಗ್ರರಿಂದ ಯತ್ನ:ಭಾರತೀಯ ಸೇನೆ ಎಚ್ಚರಿಕೆ
ನವದೆಹಲಿ, ಜುಲೈ 11: ಎಷ್ಟು ಕಲಿತರೂ ಬುದ್ದಿ ಬರದ ಪಾಕಿಸ್ತಾನ ಭಾರತದಲ್ಲಿ ಶಾಂತಿ ಕದಡುವ ಪ್ರಯತ್ನಕ್ಕೆ ಮತ್ತೆ ಕೈ ಹಾಕಿದಂತಿದೆ. ಇದಕ್ಕೆ ಸಾಕ್ಷಿ 250 ರಿಂದ 300 ಕ್ಕೂ ಹೆಚ್ಚು ಉಗ್ರರು ಭಾರತದ ಗಡಿಯೊಳಗೆ ನುಸುಳಲು ಪ್ರಯತ್ನಿಸುತ್ತಿದ್ದಾರೆ ಎಂದು ಭಾರತೀಯ ಸೇನೆ ಎಚ್ಚರಿಸಿದೆ.
Recommended Video
ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನೆಯು ಕಳೆದ ಹಲವು ವಾರಗಳಿಂದ ಒಂದರ ಹಿಂದೆ ಮತ್ತೊಂದರಂತೆ ಎನ್‌ಕೌಂಟರ್ ಮಾಡುವ ಮೂಲಕ ಉಗ್ರರನ್ನು ಸದೆಬಡಿಯುತ್ತಿದೆ. ಹೀಗಾಗಿ ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕರ ಒಳನುಸುಳುವಿಕೆ ಪ್ರಯತ್ನಗಳು ಮುಂದಿನ ದಿನಗಳಲ್ಲಿ ಹೆಚ್ಚಾಗಬಹುದು ಎಂದು ಸೇನೆಯು ಎಚ್ಚರಿಸಿದೆ.
ಕುಪ್ವಾರಾ ಗಡಿ ಜಿಲ್ಲೆಯ ನೌಗಮ್ ಸೆಕ್ಟರ್‌ನ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಇಂದು ಒಳನುಸುಳುವಿಕೆ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡುತ್ತಿರುವಾಗ ಬಾರಾಮುಲ್ಲ ಪ್ರಾಂತ್ಯದ ಜನರಲ್-ಆಫೀಸರ್-ಕಮಾಂಡಿಂಗ್ (ಜಿಒಸಿ), ಮೇಜರ್ ಜನರಲ್ ವೀರೇಂದ್ರ ವ್ಯಾಟ್ಸ್, ಮಾತನಾಡಿ " ಅವರ ಲಾಂಚ್ ಪ್ಯಾಡ್‌ಗಳನ್ನು ಸಂಪೂರ್ಣವಾಗಿ ಉಗ್ರರು ಆಕ್ರಮಿಸಿಕೊಂಡಿದೆ ಎಂದು ಸೂಚಿಸುತ್ತದೆ. ನಾವು ಊಹಿಸಬೇಕಾದರೆ, ಅದು ಪ್ರಸ್ತುತ ಲಾಂಚ್ ಪ್ಯಾಡ್‌ಗಳನ್ನು ಆಕ್ರಮಿಸಿಕೊಂಡಿರುವ 250-300 ಭಯೋತ್ಪಾದಕರ ನಡುವೆ ಆಗಿರಬಹುದು." ಎಂದರು.

ನೌಗಂನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಮತ್ತು ಅವರಿಂದ 1.5 ಲಕ್ಷ ಭಾರತೀಯ ಮತ್ತು ಪಾಕಿಸ್ತಾನಿ ಕರೆನ್ಸಿ ಸೇರಿದಂತೆ ಬೃಹತ್ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಜಮ್ಮು ಮತ್ತು ಕಾಶ್ಮೀರದ ಶಾಂತಿಯನ್ನು ಭಂಗಗೊಳಿಸಲು ಕಾಶ್ಮೀರ ಕಣಿವೆಯಲ್ಲಿ ಹೆಚ್ಚು ಹೆಚ್ಚು ಭಯೋತ್ಪಾದಕರನ್ನು ತಳ್ಳಲು ಪಾಕಿಸ್ತಾನ ತೀವ್ರವಾಗಿ ಪ್ರಯತ್ನಿಸುತ್ತಿದೆ ಎಂದು ಮೇಜರ್ ಜನರಲ್ ವೀರೇಂದ್ರ ವ್ಯಾಟ್ಸ್ ಎಚ್ಚರಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications