ಪುಲ್ವಾಮಾದಲ್ಲಿ ನಾಲ್ವರು ಉಗ್ರರನ್ನು ಹತ್ಯೆಗೈದ ಭಾರತೀಯ ಸೇನೆ
ಶ್ರೀನಗರ, ಏಪ್ರಿಲ್ 01: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಸೇನೆ ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ.
ಪುಲ್ವಾಮಾ ಜಿಲ್ಲೆಯ ಲಾಸ್ಸಿಪೊರ ಎಂಬಲ್ಲಿ ಸೇನೆ ಮತ್ತು ಉಗ್ರರ ನಡುವೆ ಸೋಮವಾರ ಬೆಳಗ್ಗಿನ ಜಾವ ಗುಂಡಿನ ಚಕಮಕಿ ನಡೆದಿತ್ತು.
ನಾಲ್ವರು ಉಗ್ರರೂ ಲಷ್ಕರ್ ಇ ತಯಿಬಾ ಉಗ್ರ ಸಂಘಟನೆಗೆ ಸೇರಿದವರೆಂದು ಗುರುತಿಸಲಾಗಿದೆ.

ಮಾರ್ಚ್ 29 ರಂದು ಜಮ್ಮು ಮತ್ತು ಕಾಶ್ಮೀರದ ಬುದ್ಗಾಂ ನಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈಯ್ಯಲಾಗಿತ್ತು. ಅದಕ್ಕೂ ಮುನ್ನ ಮಾರ್ಚ್ 27 ರಂದು ಜಮ್ಮು ಕಾಶ್ಮೀರದ ಶೋಪಿಯಾನ್ ನ ಕೆಲ್ಲಾರ್ ಪ್ರದೇಶದಲ್ಲಿ ಅಡಗಿದ್ದ ಭಯೋತ್ಪಾದಕರ ಮೇಲೆ ಸಿಆರ್ ಪಿಎಫ್, ಭಾರತೀಯ ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಜಂಟಿ ದಾಳಿ ನಡೆಸಿ, ಮೂವರು ಭಯೋತ್ಪಾದಕರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದ್ದರು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಕಳೆದ ಮಾರ್ಚ್ 22 ರಂದು ಜಮ್ಮುಮತ್ತು ಕಾಶ್ಮೀರದ ಬಂಡಿಪೊರದ ಹಾಜಿನ್ ಎಂಬಲ್ಲಿ ಭಾರತೀಯ ಸೇನೆ ಮೂವರು ಭಯೋತ್ಪಾದಕರನ್ನು ಹತ್ಯೆಗೈದಿತ್ತು. ಪುಲ್ವಾಮಾದಲ್ಲಿ ನಲವತ್ತಕ್ಕೂ ಹೆಚ್ಚು ಭಾರತೀಯ ಯೋಧರನ್ನು ಜೈಷ್ ಇ ಮೊಹಮ್ಮದ್ ಉಗ್ರನೊಬ್ಬ ಆತ್ಮಾಹುತಿ ಕಾರ್ ಬಾಂಬ್ ದಾಳಿಯಲ್ಲಿ ಹತ್ಯೆಗೈದ ನಂತರ ಭಾರತ, ಪಾಕಿಸ್ತಾನದ ಭಯೋತ್ಪಾದಕ ನೆಲೆಯ ಮೇಲೆ ದಾಳಿ ನಡೆಸಿತ್ತು.












Click it and Unblock the Notifications