ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಮಿತ್ ಶಾ ಭೇಟಿಗೂ ಒಂದು ದಿನ ಮುನ್ನವೇ ಕಾಶ್ಮೀರದಲ್ಲಿ ಇಂಟರ್‌ನೆಟ್ ಸ್ಥಗಿತ

|
Google Oneindia Kannada News

ಶ್ರೀನಗರ, ಅಕ್ಟೋಬರ್ 22: ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರದಂದು ಕಣಿವೆ ರಾಜ್ಯ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಲಿರುವ ಬೆನ್ನಲ್ಲೇ ಪೊಲೀಸರು ಕಾಶ್ಮೀರದ ಕೆಲವು ಪ್ರದೇಶಗಳ ಇಂಟರ್‌ನೆಟ್‌ ಸೇವೆಗಳನ್ನು ಸ್ಥಗಿತಗೊಳಿಸಿ ಕೆಲ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಅಕ್ಟೋಬರ್ 23ರಂದು ಅಮಿತ್ ಶಾ ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಅದಲ್ಲದೆ ಅಮಿತ್ ಶಾರವರು ಶ್ರೀನಗರದಿಂದ ಶಾರ್ಜಾಗೆ ಹಾರಾಟ ನಡೆಸಲಿರುವ ಮೊದಲ ವಿಮಾನಕ್ಕೆ ಚಾಲನೆ ನೀಡಲಿದ್ದಾರೆ. ಹಾಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಅಲ್ಲಿನ ಪೊಲೀಸರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.

ಈ ನಡುವೆ ಗುರುವಾರ ದ್ವಿಚಕ್ರ ವಾಹನಗಳ ವಶ ಪಡೆದ ಬಗ್ಗೆ ಮತ್ತು ಇಂಟರ್‌ನೆಟ್‌ ಸ್ಥಗಿತಗೊಳಿಸಿರುವ ಕುರಿತು ಟ್ವಿಟ್ಟರ್ ಮೂಲಕ ಸ್ಪಷ್ಟನೆ ನೀಡಿರುವ ಕಾಶ್ಮೀರ ವಲಯ ಐಜಿಪಿ ವಿಜಯ್ ಕುಮಾರ್, "ಇಂಟರ್‌ನೆಟ್‌ ಸ್ಥಗಿತಗೊಳಿಸಿರುವುದು ಮತ್ತು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿರುವುದಕ್ಕೂ ಅಮಿತ್ ಶಾ ಭೇಟಿಗೂ ಯಾವುದೇ ಸಂಬಂಧವಿಲ್ಲ. ಭಯೋತ್ಪಾದನಾ ವಿರೋಧಿ ಕ್ರಮಗಳ ಭಾಗವಾಗಿ ಈ ಕ್ರಮ ಕೈಗೊಂಡಿದ್ದೇವೆ. ಕೆಲದಿನಗಳ ಹಿಂದೆ ಹಿಂಸಾತ್ಮಕ ಘಟನೆಗಳು ನಡೆದಿತ್ತು ಆ ಬಳಿಕ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದೇವೆ," ಎಂದು ತಿಳಿಸಿದರು.

Srinagar: Internet Breakdown In Kashmir Just A Day Before Amit Shah Visit

ಕೆಲದಿನಗಳ ಹಿಂದೆ ಉಗ್ರರು ಹಲವು ವಲಸೆ ಕಾರ್ಮಿಕರನ್ನು ಹತ್ಯೆ ಮಾಡಿ ಕ್ರೌರ್ಯ ಮೆರೆದಿದ್ದರು. ಈ ಸಂದರ್ಭ ಕೂಡ ಹಲವು ಪ್ರದೇಶಗಳ ಇಂಟರ್‌ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಜೊತೆಗೆ ಪೊಲೀಸರು ಪ್ರಮುಖ ರಸ್ತೆಗಳಲ್ಲಿ ಸಂಚರಿಸುವ ದ್ವಿಚಕ್ರ ವಾಹನಗಳ ದಾಖಲೆಗಳ ತಪಾಸಣೆ ನಡೆಸಿ ಬಿಡುವಂತಹ ಕ್ರಮಕ್ಕೆ ಮುಂದಾಗಿದ್ದರು.

ಅ.23-24 ರಂದು ಅಮಿತ್ ಶಾ ಜಮ್ಮು ಮತ್ತು ಕಾಶ್ಮೀರ ಭೇಟಿ
ಕಳೆದ ಕೆಲವು ವಾರಗಳಿಂದ ಉಗ್ರರ ಉಪಟಳ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಈಗಾಗಲೇ ಶ್ರೀನಗರದ ಹಲವು ಸ್ಥಳಗಳನ್ನು ಪರಿಶೀಲನೆ ಮಾಡಲಾಗಿದೆ. ಶ್ರೀನಗರದಲ್ಲಿ ಸಂಚರಿಸುವ ವಾಹನಗಳು ಮತ್ತು ವಾಹನ ಸವಾರರ ಗುರುತಿನ ಚೀಟಿಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ.

ಇತ್ತೀಚೆಗೆ ಭಯೋತ್ಪಾದಕರ ದಾಳಿಯಲ್ಲಿ ಸ್ಥಳೀಯರಲ್ಲದ ನಾಲ್ಕು ಮಂದಿ ಸೇರಿದಂತೆ 9 ನಾಗರಿಕರು ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟಿದ್ದು, ಈ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಚರ್ಚೆ ನಡೆಸಲಿದ್ದಾರೆ.

ಶ್ರೀನಗರಕ್ಕೆ ಅಮಿತ್ ಶಾ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಶ್ರೀನಗರಕ್ಕೆ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ. ಅಕ್ಟೋಬರ್ 23-24 ರಂದು ಅಮಿತ್ ಶಾ ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳಲಿದ್ದಾರೆ.

ಅಕ್ಟೋಬರ್ 10ರಂದು ಜಮ್ಮು ಕಾಶ್ಮೀರದಲ್ಲಿ ನಾಗರಿಕ ಹತ್ಯೆಗಳಿಗೆ ಸಂಬಂಧಿಸಿದಂತೆ ಪ್ರಕರಣವನ್ನು ಎನ್​ಐಎ ದಾಖಲಿಸಿಕೊಂಡಿದೆ. ಈ ಪ್ರಕರಣದಲ್ಲಿ ಈವರೆಗೆ 9 ಮಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಭದ್ರತಾ ಪಡೆಗಳು ಮತ್ತು ಜಮ್ಮು ಕಾಶ್ಮೀರದ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಲಷ್ಕರ್-ಎ-ತೋಯ್ಬಾದ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಲಷ್ಕರ್-ಎ-ತೋಯ್ಬಾದ ಕಮಾಂಡರ್ ಗುಲ್ಜಾರ್ ಅಹ್ಮದ್ ರೇಶಿ ಕೂಡಾ ಭದ್ರತಾ ಪಡೆಗಳ ಗುಂಡಿಗೆ ಬಲಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ನಿಖರ ಮಾಹಿತಿ ಆಧರಿಸಿ ಆಶ್ಮುಜಿ ಮತ್ತು ದೇವ್ಸರ್​ ಮಾರ್ಗದಲ್ಲಿ ಅ.10ರ ಸಂಜೆ 7.40ಕ್ಕೆ ಕಾರ್ಯಾಚರಣೆ ನಡೆಸಲಾಗಿದೆ. ಮೊದಲಿಗೆ ಶರಣಾಗಲು ಭಯೋತ್ಪಾದಕರಿಗೆ ಮನವಿ ಮಾಡಲಾಯಿತು. ಆದರೂ ಅವರು ಗುಂಡಿನ ದಾಳಿ ನಡೆಸಿದಾಗ ಪ್ರತಿದಾಳಿ ನಡೆಸಿದ ಭದ್ರತಾ ಪಡೆಗಳು ಉಗ್ರರನ್ನು ಗುಂಡಿಕ್ಕಿ ಕೊಂದಿವೆ. ಪ್ರಕರಣದ ನಂತರ ಎಕೆ 47 ಸೇರಿದಂತೆ ಹಲವು ಶಸ್ತ್ರಗಳನ್ನು ಭದ್ರತಾ ಪಡೆಗಳು ವಶಕ್ಕೆ ತೆಗೆದುಕೊಂಡಿವೆ.

ಗುಲ್ಜಾರ್ ಅಹ್ಮದ್ ರೇಶಿ ಜೊತೆಗೆ ಇಮ್ರಾನ್ ದಾರ್ ಎಂಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ಈ ಇಬ್ಬರೂ ಭಯೋತ್ಪಾದಕರು ಜಮ್ಮು ಕಾಶ್ಮೀರದಲ್ಲಿದ್ದ ಬಿಹಾರ ಮೂಲದ ಇಬ್ಬರನ್ನು ಕೊಂದಿದ್ದರು. ಅಕ್ಟೋಬರ್ 17ರಂದು ಈ ಘಟನೆ ನಡೆದಿತ್ತು.

English summary
The Union Home Minister Amit Shah to visit Valley State Jammu and Kashmir on Saturday. internet breakdown in Kashmir just a day before amit shah visit.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X