India
  • search
  • Live TV
ಶ್ರೀನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪುಲ್ವಾಮಾದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಪೊಲೀಸ್ ಅಧಿಕಾರಿ ಗುಂಡಿಗೆ ಬಲಿ

|
Google Oneindia Kannada News

ಶ್ರೀನಗರ ಜೂನ್ 18: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಕೆಲವು ಭಯೋತ್ಪಾದಕರು ಪೊಲೀಸ್ ಅಧಿಕಾರಿಯನ್ನು ಗುಂಡಿಕ್ಕಿ ಕೊಂದಿದ್ದಾರೆ. ಸಂಬೂರ ಎಂಬಲ್ಲಿ ಅವರ ಶವ ಗದ್ದೆಯಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ಶುಕ್ರವಾರ ಮತ್ತು ಶನಿವಾರದ ಮಧ್ಯರಾತ್ರಿ ಪಾಂಪೋರ್ ಪ್ರದೇಶದಲ್ಲಿ ಸಬ್ ಇನ್ಸ್‌ಪೆಕ್ಟರ್ ಫಾರೂಕ್ ಅಹ್ಮದ್ ಮಿರ್ ಮೇಲೆ ದಾಳಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅವರ ಹೃದಯದ ಬಳಿ ಒಂದು ಬುಲೆಟ್ ಗಾಯ ಕಂಡುಬಂದಿದೆ. ಮಿರ್‌ ಅವರನ್ನು ಸಿಟಿಸಿ ಲೆತ್‌ಪೋರಾದ ಐಆರ್‌ಪಿ 23ನೇ ಬೆಟಾಲಿಯನ್‌ನಲ್ಲಿ ನಿಯೋಜಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಪೊಲೀಸ್ ಅಧಿಕಾರಿ ನಿನ್ನೆ ಸಂಜೆ ಗದ್ದೆಯಲ್ಲಿ ಕೆಲಸಕ್ಕಾಗಿ ತನ್ನ ಮನೆಯಿಂದ ಹೊರಟು ಹೋಗಿದ್ದರು. ಅಲ್ಲಿ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ಶನಿವಾರ ತಿಳಿಸಿದ್ದಾರೆ.

ಶುಕ್ರವಾರ ಕುಲ್ಗಾಮ್‌ನಲ್ಲಿ ಶಾಲಾ ಶಿಕ್ಷಕಿ ರಜನಿ ಬಾಲಾ ಅವರ ಹತ್ಯೆಗೆ ಕಾರಣವಾದ ಒಬ್ಬರು ಸೇರಿದಂತೆ 3 ಹಿಜ್ಬ್-ಉಲ್-ಮುಜಾಹಿದ್ದೀನ್ ಭಯೋತ್ಪಾದಕರು ಕೊಲ್ಲಲ್ಪಟ್ಟರು. "ಕುಲ್ಗಾಮ್ ಎನ್‌ಕೌಂಟರ್ ಒಂದು ಪ್ರಮುಖವಾದುದು, ಏಕೆಂದರೆ ಮೇ 31 ರಂದು (ಕುಲ್ಗಾಮ್‌ನ ಗೋಪಾಲ್ಪೋರಾ ಪ್ರದೇಶದಲ್ಲಿ) ಶಾಲಾ ಶಿಕ್ಷಕಿ ರಜನಿ ಬಾಲಾ ಹತ್ಯೆಯಲ್ಲಿ ಭಯೋತ್ಪಾದಕರು ಭಾಗಿಯಾಗಿದ್ದರು" ಎಂದು ಐಜಿಪಿ ವಿಜಯ್ ಕುಮಾರ್ ಹೇಳಿದರು.

ಮೇ 31 ರಂದು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಹೈಸ್ಕೂಲ್ ಗೋಪಾಲ್ಪೋರಾ ಪ್ರದೇಶದಲ್ಲಿ ಬಾಲಾ ಅವರನ್ನು ಭಯೋತ್ಪಾದಕರು ಹತ್ಯೆ ಮಾಡಿದ್ದರು.

ಟ್ವೀಟರ್‌ನಲ್ಲಿ ಪೊಲೀಸರು ಮಾಹಿತಿ

ಟ್ವೀಟರ್‌ನಲ್ಲಿ ಪೊಲೀಸರು ಮಾಹಿತಿ

ಜೂನ್ 15ರಂದು ಶೋಪಿಯಾನ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಗುಂಡಿಕ್ಕಿ ಇಬ್ಬರು ಲಷ್ಕರ್-ಎ-ತೊಯ್ಬಾ ಕಾರ್ಯಕರ್ತರನ್ನು ಕೊಲ್ಲಲಾಯಿತು. ಇದರಲ್ಲಿ ಇತ್ತೀಚೆಗೆ ಕಾಶ್ಮೀರದಲ್ಲಿ ಬ್ಯಾಂಕ್ ಮ್ಯಾನೇಜರ್‌ನ ಹತ್ಯೆಯಲ್ಲಿ ಭಾಗಿಯಾಗಿರುವ ಭಯೋತ್ಪಾದಕನೂ ಸೇರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ''ಭಯೋತ್ಪಾದಕ ಸಂಘಟನೆ ಎಲ್ಇಟಿ ಜೊತೆ ನಂಟು ಹೊಂದಿರುವ ಇಬ್ಬರು ಭಯೋತ್ಪಾದಕರು ಕಳೆದ ರಾತ್ರಿ ಕೊಲ್ಲಲ್ಪಟ್ಟರು. ಇವರ ಗುರುತು ಪತ್ತೆಗಚ್ಚಲಾಗುತ್ತಿದೆ. ಹೆಚ್ಚಿನ ವಿವರಗಳನ್ನು ಅನುಸರಿಸಲಾಗುವುದು" ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ. ಜೊತೆಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಸೇನೆಯು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದರು. ಇದಾದ ಬಳಿಕ ಈ ಪೊಲೀಸ್ ಹತ್ಯೆ ಘಟನೆ ಬೆಳಕಿಗೆ ಬಂದಿದೆ.

ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಸಿಸಿಟಿವಿಯಲ್ಲಿ ದೃಶ್ಯ ಸೆರೆ

ರಾಜಸ್ಥಾನದ ಹನುಮಾನ್‌ಗಢ ನಿವಾಸಿ ವಿಜಯ್‌ ಕುಮಾರ್‌ ಅವರು ಕಾಶ್ಮೀರದ ಕುಲ್ಗಾಮ್‌ನಲ್ಲಿ ತಮ್ಮ ಪೋಸ್ಟಿಂಗ್‌ಗೆ ಸೇರಿದ ಕೂಡಲೇ ಜೂನ್ 2 ರಂದು ಗುಂಡು ಹಾರಿಸಲಾಗಿತ್ತು. ರಾಜಸ್ಥಾನ ಮೂಲದವರಾದ ಎಲಾಖಹಿ ದೆಹಟಿ ಬ್ಯಾಂಕ್ ಮ್ಯಾನೇಜರ್ ವಿಜಯ್ ಕುಮಾರ್ ಅವರನ್ನು ಅರೇಹ್ ಬ್ರ್ಯಾಂಚ್‌ನ ಒಳಗೆ ಗುಂಡಿಕ್ಕಿ ಕೊಲ್ಲಲಾಗಿತ್ತು. ತೀವ್ರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದರು. ಬ್ಯಾಂಕ್ ಒಳಗೆ ಗ್ರಾಹಕನಂತೆ ಪ್ರವೇಶಿಸಿದ ಉಗ್ರನೊಬ್ಬ, ಗನ್‌ನಿಂದ ಬ್ಯಾಂಕ್ ಮ್ಯಾನೇಜರ್ ವಿಜಯ್ ಕುಮಾರ್ ಅವರ ಮೇಲೆ ಗುಂಡು ಹಾರಿಸಿದ್ದನು. ಬಳಿಕ ಅಲ್ಲಿಂದ ಪರಾರಿಯಾಗಿದ್ದ. ಈ ಘಟನೆಯ ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ಕಾಶ್ಮೀರದಲ್ಲಿ ಹಿಂದೂಗಳೇ ಗುರಿ

ಕಾಶ್ಮೀರದಲ್ಲಿ ಹಿಂದೂಗಳೇ ಗುರಿ

ಜಮ್ಮುವಿನ ಶಿಕ್ಷಕಿ ರಜನಿ ಬೇಲಾ ಅವರನ್ನು ಕುಲ್ಗಾಂನ ಶಾಲೆಯೊಂದರ ಹೊರಗೆ ಗುಂಡು ಹಾರಿಸಿ ಕೊಲೆ ಮಾಡಿದ ಬಳಿಕ, ಜಿಲ್ಲೆಯಲ್ಲಿ ನಡೆದ ಮತ್ತೊಬ್ಬ ಬ್ಯಾಂಕ್ ಮ್ಯಾನೇಜರ್ ಭೀಕರ ಕೃತ್ಯ ಜನರಲ್ಲಿ ಭಯ ಮೂಡಿಸಿತ್ತು. ಸದ್ಯ ಸಬ್ ಇನ್ಸ್‌ಪೆಕ್ಟರ್ ಫಾರೂಕ್ ಅಹ್ಮದ್ ಮಿರ್ ಮೇಲೆ ದಾಳಿ ನಡೆದಿದೆ. ಕಾಶ್ಮೀರದಲ್ಲಿ ಹಿಂದೂಗಳನ್ನು ಗುರಿಯಾಗಿಸಿ ದಾಳಿಗಳು ಹೆಚ್ಚುತ್ತಿವೆ. ಇದು ಕಾಶ್ಮೀರಿ ಪಂಡಿತರ ಸಮುದಾಯದ ಪ್ರತಿಭಟನೆಗೆ ಕಾರಣವಾಗಿದೆ. ತಮ್ಮನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡುವಂತೆ ಅವರು ಬೇಡಿಕೆ ಇಟ್ಟಿದ್ದಾರೆ.

ಕಾಶ್ಮೀರ ಪಂಡಿತ ಸ್ಥಳಾಂತರ

ಕಾಶ್ಮೀರ ಪಂಡಿತ ಸ್ಥಳಾಂತರ

ಈ ಕೊಲೆಯು ಕಣಿವೆಯಲ್ಲಿ ಉದ್ದೇಶಿತ ಹತ್ಯೆಗಳ ಸರಣಿಗೆ ಸೇರಿಸಿದ್ದರಿಂದ ಆಕ್ರೋಶವನ್ನು ಹುಟ್ಟುಹಾಕಿತ್ತು. ವಲಸೆ ಕಾರ್ಮಿಕರು ಮತ್ತು ಸ್ಥಳೀಯ ಅಲ್ಪಸಂಖ್ಯಾತರ ಮೇಲೆ ಉದ್ದೇಶಿತ ದಾಳಿಗಳು ಕಳೆದ ವರ್ಷ ಪ್ರಾರಂಭವಾಗಿವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರು ತಮ್ಮನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ಬಾರಿ ಬುದ್ಗಾಮ್‌ನ ಮ್ಯಾಜಿಸ್ಟ್ರೇಟ್ ಕಚೇರಿಯಲ್ಲಿ ಕಾಶ್ಮೀರಿ ಪಂಡಿತ್ ರಾಹುಲ್ ಭಟ್ ಅವರನ್ನು ಗುಂಡಿಕ್ಕಿ ಕೊಂದ ನಂತರ ಸಮುದಾಯದ ಸದಸ್ಯರು ಪ್ರತಿಭಟನೆ ನಡೆಸಿದರು. ಇದರಿಂದ ಪ್ರಧಾನಿಯವರ ಪುನರ್ವಸತಿ ಪ್ಯಾಕೇಜ್ ಅಡಿಯಲ್ಲಿ ಕಣಿವೆಯಲ್ಲಿ ಉದ್ಯೋಗದಲ್ಲಿರುವ ಸುಮಾರು 4,000 ಕಾಶ್ಮೀರ ಪಂಡಿತರು ಸುರಕ್ಷಿತವಾಗಿಲ್ಲದ ಕಾರಣ ಜಮ್ಮುವಿಗೆ ಸ್ಥಳಾಂತರಿಸಲಾಗಿದೆ.

English summary
A sub inspector of police in Pulwama has been attacked by militants and his body was found in a paddy field.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X