ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೋಪೋರ್ ಎನ್‌ಕೌಂಟರ್‌ನಲ್ಲಿ ಇಬ್ಬರು ಎಲ್‌ಇಟಿ ಉಗ್ರರ ಹತ್ಯೆ

|
Google Oneindia Kannada News

ಶ್ರೀನಗರ, ಜುಲೈ 23: ಜಮ್ಮು ಮತ್ತು ಕಾಶ್ಮೀರದ ಸೋಪೋರ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಪೊಲೀಸರು ಇಬ್ಬರು ಎಲ್‌ಇಟಿ ಉಗ್ರರನ್ನು ಸದೆಬಡಿದಿದೆ.

ಹತ್ಯೆಯಾದ ಇಬ್ಬರೂ ಉಗ್ರರು ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆ. ಇಬ್ಬರ ಪೈಕಿ ಒಬ್ಬ ಫಯಾಜ್ ವಾರ್ ಎಂದು ಗುರುತಿಸಲಾಗಿದ್ದು, ಈತ ಕಾಶ್ಮೀರದಲ್ಲಿ ನಡೆದಿದ್ದ ಹಲವು ದಾಳಿಯಲ್ಲಿ ಭಾಗಿಯಾಗಿದ್ದ. ಅಲ್ಲದೆ, ಸಾಕಷ್ಟು ನಾಗರೀಕರು ಹಾಗೂ ಭದ್ರತಾಪಡೆಗಳ ಸಿಬ್ಬಂದಿಯನ್ನೂ ಹತ್ಯೆ ಮಾಡಿದ್ದ ಎಂದು ಕಾಶ್ಮೀರದ ಐಜಿಪಿ ಮಾಹಿತಿ ನೀಡಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ ಜಮ್ಮು ಕಾಶ್ಮೀರದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಬಾರಾಮುಲ್ಲಾ ಜಿಲ್ಲೆಯ ಸೊಪೋರ್‌ನ ವಾರ್ಪೊರಾ ಎಂಬ ಗ್ರಾಮದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಈ ವೇಳೆ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಅವರಿಂದ ಅಕ್ರಮ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

J-K: Two LeT Terrorists Neutralised In Sopore Encounter

ಕೂಡಲೇ ಸ್ಥಳವನ್ನು ಸುತ್ತುವರೆದ ಭದ್ರತಾ ಪಡೆಗಳು ಉಗ್ರರ ದಾಳಿಗೆ ದಿಟ್ಟ ಉತ್ತರವನ್ನು ನೀಡಿದ್ದಾರೆ. ಉಗ್ರರು ಅಡಗಿರುವುದನ್ನು ಖಚಿತಪಡಿಸಿಕೊಂಡ ಭದ್ರತಾ ಪಡೆಗಳು ಮೊದಲಿಗೆ ಶರಣಾಗುವ ಅವಕಾಶವನ್ನು ನೀಡಿದ್ದಾರೆ.

ಆದರೆ, ಉಗ್ರರು ಈ ಅವಕಾಶವನ್ನು ನಿರಾಕರಿಸಿದ್ದಾರೆ. ಬಳಿಕ ಎನ್‌ಕೌಂಟರ್ ನಡೆಸಿ ಅಡಗಿದ್ದ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ. ಇದೀಗ ಆಪರೇಷನ್ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

English summary
Two Laskhar-e-Taiba Terrorists were eliminated in an encounter at Warpora Village In Sopore, Baramulla On Friday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X