ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking News: ಎನ್ಐಎ ತಂಡಕ್ಕೆ ಜಮ್ಮು ಐಎಎಫ್ ದಾಳಿ ಪ್ರಕರಣದ ತನಿಖೆ ಹೊಣೆ

|
Google Oneindia Kannada News

ಶ್ರೀನಗರ್, ಜೂನ್ 29: ಭಾರತೀಯ ವಾಯುಸೇನೆ ನಿಯಂತ್ರಣದ ಜಮ್ಮು ವಿಮಾನ ನಿಲ್ದಾಣದಲ್ಲಿ ನಡೆದ ಡ್ರೋನ್ ದಾಳಿ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ತಂಡ(ಎನ್ಐಎ)ಕ್ಕೆ ವಹಿಸಿದೆ.

ಜೂನ್ 27ರ ಭಾನುವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಐದು ನಿಮಿಷಗಳ ಅಂತರದಲ್ಲಿ ಎರಡು ಸ್ಫೋಟ ಸಂಭವಿಸಿದ್ದು, ಇಬ್ಬರು ಭಾರತೀಯ ಸೇನಾ ಪಡೆ ಸಿಬ್ಬಂದಿ ಗಾಯಗೊಂಡಿದ್ದರು. ಬೆಳಗಿನ ಜಾವ 1.37ರ ಹೊತ್ತಿಗೆ ಮೊದಲ ಸ್ಫೋಟ ಸಂಭವಿಸಿದ್ದು, ಕಟ್ಟಡದ ತಾಂತ್ರಿಕ ವಿಭಾಗದಲ್ಲಿನ ಮೇಲ್ಛಾವಣಿಗೆ ಹಾನಿಯಾಗಿದೆ. ಬೆಳಗಿನ ಜಾವ 1.43ರ ಹೊತ್ತಿಗೆ ಒಂದೇ ಕಿಲೋ ಮೀಟರ್ ದೂರದಲ್ಲಿ ಇರುವ ಬಯಲು ಪ್ರದೇಶದಲ್ಲಿ ಎರಡನೇ ಸ್ಫೋಟ ಸಂಭವಿಸಿತ್ತು.

ಜಮ್ಮು ಐಎಎಫ್ ಕೇಂದ್ರಕ್ಕೆ ನುಗ್ಗಿದ ಉಗ್ರರ ಡ್ರೋನ್: ತಪ್ಪು ಆಗಿದ್ದು ಎಲ್ಲಿ?ಜಮ್ಮು ಐಎಎಫ್ ಕೇಂದ್ರಕ್ಕೆ ನುಗ್ಗಿದ ಉಗ್ರರ ಡ್ರೋನ್: ತಪ್ಪು ಆಗಿದ್ದು ಎಲ್ಲಿ?

"ಭಾರತೀಯ ವಾಯು ನೆಲೆ ನಿಯಂತ್ರಣದ ಜಮ್ಮು ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಎರಡು ಲಘುಸ್ಫೋಟವು ಉಗ್ರರ ದಾಳಿಯಾಗಿದೆ," ಎಂದು ಜಮ್ಮು ಕಾಶ್ಮೀರ ಪೊಲೀಸ್ ಮುಖ್ಯಸ್ಥ ದಿಲ್ಬಾಗ್ ಸಿಂಗ್ ಸ್ಪಷ್ಟಪಡಸಿದ್ದರು. ಮೊದಲ ಬಾರಿಗೆ ಉಗ್ರರ ದಾಳಿಗೆ ಡ್ರೋನ್ ಬಳಕೆ ಆಗಿರುವುದು ಗೊತ್ತಾಗಿದ್ದು, ಈ ಡ್ರೋನ್ ದಾಳಿ ಹಿಂದೆ ಪಾಕಿಸ್ತಾನ ಉಗ್ರ ಸಂಘಟನೆ ಕೈವಾಡವಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು.

Jammu Air Force Station attack case hands over to NIA By Ministry of Home Affairs

ಭದ್ರತಾ ವ್ಯವಸ್ಥೆಗೆ ದೊಡ್ಡ ಸವಾಲು:

ಜಮ್ಮು ವಿಮಾನ ನಿಲ್ದಾಣದಲ್ಲಿ ನಡೆದ ಸ್ಫೋಟವು ಭಾರತೀಯ ಭದ್ರತೆಗೊಂದು ಸವಾಲು ಎನ್ನುವಂತಿದೆ. ಸರ್ಕಾರದ ಭದ್ರತಾ ನಿಯೋಜನೆಯನ್ನೇ ಅದು ಪ್ರಶ್ನೆ ಮಾಡುವ ಮಟ್ಟಿಗಿದೆ. "ಡ್ರೋನ್ ಮೂಲಕ ಸ್ಫೋಟಕವನ್ನು ಭಾರತೀಯ ವಾಯುನೆಲೆ ನಿಯಂತ್ರಣದ ವಿಮಾನ ನಿಲ್ದಾಣದಲ್ಲಿ ಹಾಕಲಾಗುತ್ತದೆ ಎಂದರೆ ನಮ್ಮ ಭದ್ರತಾ ವ್ಯವಸ್ಥೆ ಬಗ್ಗೆ ಮರುಪರಿಶೀಲನೆ ಮಾಡಿಕೊಳ್ಳಬೇಕಾಗುತ್ತದೆ," ಎಂದು ನಿವೃತ್ತ ಲೆಫ್ಟಿನೆಂಟ್ ಜನರಲ್ ದೀಪೇಂದ್ರ ಸಿಂಗ್ ಹೂಡಾ ಹೇಳಿದ್ದಾರೆ.

English summary
Jammu Air Force Station attack case hands over to National Investigation Agency By Ministry of Home Affairs.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X