ಜಮ್ಮು ಕಾಶ್ಮೀರದಲ್ಲಿ 36 ಗಂಟೆಗಳ ಸೇನಾ ಕಾರ್ಯಾಚರಣೆಯಲ್ಲಿ 9 ಉಗ್ರರ ಹತ್ಯೆ

ಶ್ರೀನಗರ್, ಡಿಸೆಂಬರ್ 31: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ನಡೆಸುತ್ತಿರುವ ಸೇನಾ ಕಾರ್ಯಾಚರಣೆ ಮುಂದುವರಿದಿದೆ. ಶ್ರೀನಗರದ ಹೊರವಲಯದಲ್ಲಿ ಗುರುವಾರ ರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಂಥಾಚೌಕ್‌ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಪೊಲೀಸರು ಮತ್ತು ಸಿಆರ್‌ಪಿಎಫ್ ಯೋಧ ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ. 36 ಗಂಟೆಗಳಲ್ಲಿ ನಡೆದ ಮೂರನೇ ಎನ್‌ಕೌಂಟರ್ ಇದಾಗಿದ್ದು, ಹತರಾದ ಉಗ್ರರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

ಮೂವರು ಮೃತ ಭಯೋತ್ಪಾದಕರಲ್ಲಿ ಒಬ್ಬನನ್ನು ಸುಹೇಲ್ ಅಹ್ಮದ್ ರಾಥರ್ ಎಂದು ಗುರುತಿಸಲಾಗಿದೆ. ಈತ ಶ್ರೀನಗರದ ಹೊರವಲಯದಲ್ಲಿರುವ ಝೆವಾನ್‌ನಲ್ಲಿ ಪೊಲೀಸ್ ಶಿಬಿರದ ನಡೆಸಿದ ದಾಳಿಯ ನಂಟು ಹೊಂದಿದ್ದ ಎಂದು ತಿಳಿದು ಬಂದಿದೆ.

Jammu And Kashmir: 3 Terrorists Killed In Anti-Terror Op On Srinagar Outskirts

ಮಂಗಳವಾರ ಕುಲ್ಗಾಮ್ ಮತ್ತು ಅನಂತ್ ನಾಗ್ ಜಿಲ್ಲೆಗಳಲ್ಲಿ ಒಂದರ ಹಿಂದೆ ಒಂದರಂತೆ ನಡೆದ ಎನ್‌ಕೌಂಟರ್‌ನಲ್ಲಿ ಆರು ಮಂದಿ ಉಗ್ರರನ್ನು ಹೊಡೆದು ಉರುಳಿಸಲಾಗಿದೆ. ಈ ಕಾರ್ಯಾಚರಣೆ ಸಂದರ್ಭದಲ್ಲಿ ಒಬ್ಬ ಪೊಲೀಸ್ ಸಿಬ್ಬಂದಿಗೆ ಗಾಯಗೊಂಡಿದ್ದರು.

ಜಮ್ಮು-ಕಾಶ್ಮೀರದಲ್ಲಿ ಎರಡು ಕಡೆ ಪ್ರತ್ಯೇಕ ಎನ್‌ಕೌಂಟರ್‌:

ಅನಂತನಾಗ್ ಮತ್ತು ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ನಿಷೇಧಿತ ಸಂಘಟನೆಯ 6 ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ. ಹತ್ಯೆಯಾದ ಭಯೋತ್ಪಾದಕರ ಪೈಕಿ 4 ಮಂದಿಯಲ್ಲಿ ಇಬ್ಬರು ಪಾಕಿಸ್ತಾನಿಗಳು ಮತ್ತು ಇಬ್ಬರು ಸ್ಥಳೀಯ ಭಯೋತ್ಪಾದಕರು ಎಂದು ಗುರುತಿಸಲಾಗಿದೆ. ಇತರ 2 ಭಯೋತ್ಪಾದಕರ ಗುರುತು ಪತ್ತೆ ಮಾಡಲಾಗುತ್ತಿದೆ ಎಂದು ಕಾಶ್ಮೀರದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಹೇಳಿದ್ದಾರೆ.

ದಕ್ಷಿಣ ಕಾಶ್ಮೀರದ ಜಿಲ್ಲೆಗಳಲ್ಲಿ ಬುಧವಾರ ಸಂಜೆ ಎರಡು ಪ್ರತ್ಯೇಕ ಪ್ರದೇಶಗಳಲ್ಲಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಗಳನ್ನು ಪ್ರಾರಂಭಿಸಲಾಗಿದೆ. ಅನಂತ್‌ನಾಗ್‌ನ ನೌಗಾಮ್ ಪ್ರದೇಶದಲ್ಲಿ, ಭದ್ರತಾ ಕಾರ್ಯಾಚರಣೆಯಲ್ಲಿ ಒಬ್ಬ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಅವರನ್ನು ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಜಮ್ಮು ಕಾಶ್ಮೀರದ ಎರಡು ಕಡೆ ಕಾರ್ಯಾಚರಣೆ:

ಅನಂತ್‌ನಾಗ್ ಎನ್‌ಕೌಂಟರ್ ನಂತರ, ಉಗ್ರರು ಅಡಗಿ ಕುಳಿತಿರುವ ಬಗ್ಗೆ ನಿರ್ದಿಷ್ಟ ಮಾಹಿತಿ ಪಡೆದ ಪೊಲೀಸರು ಕುಲ್ಗಾಮ್ ಜಿಲ್ಲೆಯ ಮಿರ್ಹಾಮಾ ಗ್ರಾಮದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಪ್ರಾರಂಭಿಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶೋಧ ಕಾರ್ಯಾಚರಣೆ ವೇಳೆ ಉಗ್ರರು ಹಾಗೂ ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+