ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಮ್ಮು ಕಾಶ್ಮೀರದ 2 ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ಆರು ಉಗ್ರರ ಹತ್ಯೆ

|
Google Oneindia Kannada News

ಶ್ರೀನಗರ, ಡಿಸೆಂಬರ್ 30: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಮತ್ತು ಅನಂತ್ ನಾಗ್ ಜಿಲ್ಲೆಗಳಲ್ಲಿ ಒಂದರ ಹಿಂದೆ ಒಂದರಂತೆ ನಡೆದ ಎನ್‌ಕೌಂಟರ್‌ನಲ್ಲಿ ಆರು ಮಂದಿ ಉಗ್ರರನ್ನು ಹೊಡೆದು ಉರುಳಿಸಲಾಗಿದೆ. ಈ ಕಾರ್ಯಾಚರಣೆ ಸಂದರ್ಭದಲ್ಲಿ ಒಬ್ಬ ಪೊಲೀಸ್ ಸಿಬ್ಬಂದಿಗೆ ಗಾಯವಾಗಿದೆ.

ಅನಂತನಾಗ್ ಮತ್ತು ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ನಿಷೇಧಿತ ಸಂಘಟನೆಯ 6 ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ. ಹತ್ಯೆಯಾದ ಭಯೋತ್ಪಾದಕರ ಪೈಕಿ 4 ಮಂದಿಯಲ್ಲಿ ಇಬ್ಬರು ಪಾಕಿಸ್ತಾನಿಗಳು ಮತ್ತು ಇಬ್ಬರು ಸ್ಥಳೀಯ ಭಯೋತ್ಪಾದಕರು ಎಂದು ಗುರುತಿಸಲಾಗಿದೆ. ಇತರ 2 ಭಯೋತ್ಪಾದಕರ ಗುರುತು ಪತ್ತೆ ಮಾಡಲಾಗುತ್ತಿದೆ ಎಂದು ಕಾಶ್ಮೀರದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಹೇಳಿದ್ದಾರೆ.

ಜಮ್ಮು: 31 ವರ್ಷದಲ್ಲಿ 89 ಕಾಶ್ಮೀರಿ ಪಂಡಿತರು ಸೇರಿ 1,724 ಮಂದಿಯ ಹತ್ಯೆಗೈದ ಉಗ್ರರುಜಮ್ಮು: 31 ವರ್ಷದಲ್ಲಿ 89 ಕಾಶ್ಮೀರಿ ಪಂಡಿತರು ಸೇರಿ 1,724 ಮಂದಿಯ ಹತ್ಯೆಗೈದ ಉಗ್ರರು

ದಕ್ಷಿಣ ಕಾಶ್ಮೀರದ ಜಿಲ್ಲೆಗಳಲ್ಲಿ ಬುಧವಾರ ಸಂಜೆ ಎರಡು ಪ್ರತ್ಯೇಕ ಪ್ರದೇಶಗಳಲ್ಲಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಗಳನ್ನು ಪ್ರಾರಂಭಿಸಲಾಗಿದೆ. ಅನಂತ್‌ನಾಗ್‌ನ ನೌಗಾಮ್ ಪ್ರದೇಶದಲ್ಲಿ, ಭದ್ರತಾ ಕಾರ್ಯಾಚರಣೆಯಲ್ಲಿ ಒಬ್ಬ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಅವರನ್ನು ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

Jammu And Kashmir: 6 Terrorists Killed In Two Encounters In Kulgam and Anantnag district

ಜಮ್ಮು ಕಾಶ್ಮೀರದ ಎರಡು ಕಡೆ ಕಾರ್ಯಾಚರಣೆ:

ಅನಂತ್‌ನಾಗ್ ಎನ್‌ಕೌಂಟರ್ ನಂತರ, ಉಗ್ರರು ಅಡಗಿ ಕುಳಿತಿರುವ ಬಗ್ಗೆ ನಿರ್ದಿಷ್ಟ ಮಾಹಿತಿ ಪಡೆದ ಪೊಲೀಸರು ಕುಲ್ಗಾಮ್ ಜಿಲ್ಲೆಯ ಮಿರ್ಹಾಮಾ ಗ್ರಾಮದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಪ್ರಾರಂಭಿಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶೋಧ ಕಾರ್ಯಾಚರಣೆ ವೇಳೆ ಉಗ್ರರು ಹಾಗೂ ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಉಗ್ರರನ್ನು ಹೊಡೆದುರುಳಿಸಿರುವ ಬಗ್ಗೆ ಟ್ವೀಟ್:

ಆರಂಭದಲ್ಲಿ, ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿ, ಒಬ್ಬ ಭಯೋತ್ಪಾದಕನನ್ನು ಹೊಡೆದುರುಳಿಸಲಾಗಿದೆ, ಮತ್ತು ನಂತರ ತಡರಾತ್ರಿಯ ಕಾರ್ಯಾಚರಣೆಯಲ್ಲಿ ಇನ್ನಿಬ್ಬರು ಭಯೋತ್ಪಾದಕರನ್ನು ಹತ್ಯೆಗೈದಿರುವುದನ್ನು ಖಚಿತಪಡಿಸಿದ್ದರು.

English summary
Jammu And Kashmir: 6 Terrorists Killed In Two Encounters In Kulgam and Anantnag district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X