Breaking; ಜಮ್ಮು ಮತ್ತು ಕಾಶ್ಮೀರದಲ್ಲಿ ಈ ವರ್ಷ 62 ಉಗ್ರರ ಹತ್ಯೆ

ಶ್ರೀನಗರ, ಏಪ್ರಿಲ್ 28; ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಕೆಲವು ದಿನಗಳಿಂದ ಉಗ್ರರ ಚಟುವಟಿಕೆಗಳು ವರದಿಯಾಗುತ್ತಿವೆ. ಈ ವರ್ಷ ಇಲ್ಲಿಯ ತನಕ 62 ಭಯೋತ್ಪಾದಕರನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ.

ಕಾಶ್ಮೀರದ ಐಜಿಪಿ ಈ ಕುರಿತು ಮಾಹಿತಿ ನೀಡಿದ್ದಾರೆ. "ಈ ವರ್ಷ ಇದುವರೆಗೂ 62 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಇವರಲ್ಲಿ 47 ಜನರು ಸ್ಥಳೀಯರು ಮತ್ತು 15 ವಿದೇಶಿಯರು" ಎಂದು ಹೇಳಿದ್ದಾರೆ.

ಎನ್‌ಕೌಂಟರ್‌ನಲ್ಲಿ ಹತ್ಯೆಯಾದವರಲ್ಲಿ 39 ಮಂದಿ ಲಷ್ಕರ್ ಎ ತೋಯ್ಬಾ ಸಂಘಟನೆಯವರು. 15 ಉಗ್ರರು ಜೈಶೆ-ಮೊಹಮ್ಮದ್‌ ಸಂಘಟನೆಯವರು. 6 ಮಂದಿ ಹಿಜ್ಬುಲ್ ಮುಜಾಹಿದೀನ್ ಸಂಘನೆಯವರು.

Jammu And Kashmir 62 Terrorists Killed So Far This Year

ಎನ್‌ಕೌಂಟರ್‌ಗಳಲ್ಲಿ ಇಬ್ಬರು ಅಲ್ ಬಾರ್ಬರ್‌ ಉಗ್ರರನ್ನು ಹತ್ಯೆ ಮಾಡಲಾಗಿದೆ. ಇದುವರೆಗೂ ಹತ್ಯೆಯಾದ ಉಗ್ರರಲ್ಲಿ 47 ಜನರು ಸ್ಥಳೀಯರು ಮತ್ತು 15 ವಿದೇಶಿಯರು ಎಂದು ಐಜಿಪಿ ಮಾಹಿತಿ ನೀಡಿದ್ದಾರೆ.

ಗುರುವಾರ ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯ ಮಿಟ್ರಿಗಾಮ್ ಪ್ರದೇಶದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಅಲ್-ಬದ್ರ್ ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿತ್ತು.

ಹತ್ಯೆಯಾದ ಉಗ್ರರನ್ನು ಐಜಾಜ್ ಹಫೀಜ್ ಮತ್ತು ಶಾಹಿಲ್ ಅಯೂಬ್ ಎಂದು ಗುರುತಿಸಲಾಗಿದೆ. ಉಗ್ರರಿಂದ ಎರಡು ಎಕೆ-47 ರೈಫಲ್ಸ್ ವಶಕ್ಕೆ ಪಡೆಯಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+