• search
  • Live TV
ಶ್ರೀನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಜಮ್ಮು-ಕಾಶ್ಮೀರದಲ್ಲಿ 9 ಹಿಜ್ಬುಲ್ ಉಗ್ರರನ್ನು ಹೊಡೆದುರುಳಿಸಿದ ಸೇನೆ

|
Google Oneindia Kannada News

ಶ್ರೀನಗರ್, ಜೂನ್.08: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಕಳೆದ 24 ಗಂಟೆಗಳಲ್ಲಿ ಬಾಲಬಿಚ್ಚಿದ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಒಂಭತ್ತು ಉಗ್ರರನ್ನು ಭಾರತೀಯ ಸೇನಾ ಯೋಧರು ಹೊಡೆದುರುಳಿಸಿದ್ದಾರೆ.

ಶೋಪಿಯಾನ್ ಜಿಲ್ಲೆಯ ಪಿಂಜೋರಾ ಪ್ರದೇಶದಲ್ಲಿ ಸೋಮವಾರ ಉಗ್ರರು ಮತ್ತು ಸೇನಾ ಯೋಧರ ನಡುವಿನ ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರನ್ನು ಹತ್ಯೆಗೈದಿರುವುದಾಗಿ ಜಮ್ಮು-ಕಾಶ್ಮೀರ ಡಿಜಿಪಿ ದಿಲ್ಬಾಗ್ ಸಿಂಗ್ ಮಾಹಿತಿ ನೀಡಿದರು.

ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್: 5 ಉಗ್ರರ ಸಾವು ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್: 5 ಉಗ್ರರ ಸಾವು

ಭಾರತೀಯ ಸೇನೆಯು ನಾಲ್ವರು ಉಗ್ರರ ಮೃತದೇಹವನ್ನು ವಶಕ್ಕೆ ಪಡೆದುಕೊಂಡಿದ್ದು, ಮೃತರ ಗುರುತು ಪತ್ತೆ ಮಾಡಲಾಗುತ್ತಿದೆ. ಇನ್ನು, ಕಾರ್ಯಾಚರಣೆಯಲ್ಲಿ ಮೂವರು ಯೋಧರು ಗಾಯಗೊಂಡಿದ್ದು, ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


ಸಿಆರ್ ಪಿಎಫ್ ಮತ್ತು ಸೇನಾ ಗಡಿಯಲ್ಲಿ ಕಾರ್ಯಾಚರಣೆ:

ಜಮ್ಮು-ಕಾಶ್ಮೀರದ ಮತ್ತೊಂದು ಕಡೆಗಳಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಾಲ್ವರು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರರನ್ನು ಹತ್ಯೆಗಯ್ಯಲಾಗಿದೆ. ಎರಡು ಎಕೆ-47 ರೈಫಲ್ಸ್, ಒಂದು ಎಸ್ಎಲ್ಆರ್, ಪಿಸ್ತೂಲ್ ನ್ನು ವಶಕ್ಕೆ ಪಡೆಯಲಾಗಿದೆ. ಇದಕ್ಕೂ ಮೊದಲು ಕಳೆದ ಭಾನುವಾರ ರಾತ್ರಿ ಶೋಪಿಯಾನ್ ಜಿಲ್ಲೆಯ ರೆಬಾನ್ ಪ್ರದೇಶದಲ್ಲಿ ಅಡಗಿ ಕುಳಿತ ಮುಜಾಹಿದ್ದೀನ್ ಉಗ್ರರ ಸದೆ ಬಡಿಯಲು ಕಾರ್ಯಾಚರಣೆ ನಡೆಸಲಾಯಿತು. ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸಲಾಗಿದೆ.

English summary
Jammu and Kashmir: 9 Hizbul Mujahideen Militants shot dead in last 24 hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X