ಸಿಆರ್ ಪಿಎಫ್ ಕ್ಯಾಂಪ್ ಮೇಲೆ ಗ್ರೆನೇಡ್ ದಾಳಿ: ಓರ್ವ ಯೋಧ ಹುತಾತ್ಮ
ಶ್ರೀನಗರ, ಮಾರ್ಚ್ 21: ಜಮ್ಮು ಮತ್ತು ಕಾಶ್ಮೀರದ ಸೋಪೋರ್ ಜಿಲ್ಲೆಯಲ್ಲಿ ಸಿಆರ್ ಪಿಎಫ್ ಯೋಧರ ಕ್ಯಾಂಪ್ ಮೇಲೆ ನಡೆದ ಗ್ರೆನೇಡ್ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ.
ಈ ಘಟನೆ ಗುರುವಾರ ಬೆಳಿಗ್ಗೆ ಸಂಭವಿಸಿದ್ದು, ಭಯೋತ್ಪಾದಕರೇ ಗ್ರೆನೇಡ್ ದಾಳಿ ನಡೆಸಿರುವುದು ತಿಳಿದುಬಂದಿದೆ. ಘಟನೆಯಲ್ಲಿ ಮೂವರು ಪೊಲೀಸ್ ಸಿಬ್ಬಂದಿಗೂ ಗಾಯವಾಗಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಇಂದು ಬೆಳಿಗ್ಗೆಯಿಂದಲೂ ಪಾಕಿಸ್ತಾನ ಗಡಿಯಲ್ಲಿ ಕದನವಿರಾಮ ಉಲ್ಲಂಘಿಸುತ್ತಿರುವ ಮಾಹಿತಿಯೂ ಲಭ್ಯವಾಗಿದೆ.

ಬುಧವಾರ ರಾತ್ರಿ 10 ಗಂಟೆಯ ಸಮಯದಲ್ಲಿ ಜಮ್ಮು ಕಾಶ್ಮೀರದ ಉದಾಮ್ ಪುರದಲ್ಲಿ ಸಿಆರ್ ಪಿಎಫ್ ಜವಾನನೊಬ್ಬ ತನ್ನ ಸಹೋದ್ಯೋಗಿಗಳ ಮೇಲೆ ಗುಂಡಿನ ದಾಳಿ ನಡೆಸಿದ ಪರಿಣಾಮ ಮೂವರು ಜವಾನರು ಬಲಿಯಾಗಿದ್ದರು. ನಂತರ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಪುಲ್ವಾಮಾದಲ್ಲಿ ಜೈಷ್ ಇ ಮೊಹಮ್ಮದ್ ಉಗ್ರ ಸಂಘಟನೆ ನಡೆಸಿದ ದಾಳಿಯಲ್ಲಿ ಭಾರತದ ನಲವತ್ತಕ್ಕೂ ಹೆಚ್ಚು ಸೈನಿಕರು ಹುತಾತ್ಮರಾದ ನಂತರ ಭಾರತ ಭಯೋತ್ಪಾದಕರ ವಿರುದ್ಧ ನಿರಂತರವಾಗಿ ದಾಳಿ ನಡೆಸುತ್ತಿದ್ದ. ಅದಕ್ಕೆ ಭಯೋತ್ಪಾದಕರೂ ಪ್ರತಿದಾಳಿ ನಡೆಸುತ್ತಿದ್ದು, ಇಂದು ಸಿಆರ್ ಪಿಎಫ್ ಕ್ಯಾಂಪ್ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದಾರೆ.












Click it and Unblock the Notifications